ಹಿಂದೂ ದೇವತೆ ವಿರುದ್ಧ ಪೋಸ್ಟ್: ಮೊಹಮ್ಮದ್ ಜುಬೇರ್ ಪೊಲೀಸ್ ಕಸ್ಟಡಿ ನಾಲ್ಕು ದಿನಕ್ಕೆ ವಿಸ್ತರಿಸಿದ ನ್ಯಾಯಾಲಯ
ಹಿಂದೂ ದೇವತೆ ವಿರುದ್ಧ ಆಕ್ಷೇಪಾರ್ಹ ಟ್ವೀಟ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಲ್ಟ್ ನ್ಯೂಸ್ ಸಹ-ಸಂಸ್ಥಾಪಕ ಮೊಹಮ್ಮದ್ ಜುಬೇರ್ ಪೊಲೀಸ್ ಕಸ್ಟಡಿ ಅವಧಿಯನ್ನು ದೆಹಲಿ ನ್ಯಾಯಾಲಯವು ನಾಲ್ಕು ದಿನಗಳವರೆಗೆ ವಿಸ್ತರಿಸಿದೆ.
Published: 28th June 2022 06:36 PM | Last Updated: 28th June 2022 06:36 PM | A+A A-

ಮೊಹಮ್ಮದ್ ಜುಬೈರ್
ನವದೆಹಲಿ: ಹಿಂದೂ ದೇವತೆ ವಿರುದ್ಧ ಆಕ್ಷೇಪಾರ್ಹ ಟ್ವೀಟ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಲ್ಟ್ ನ್ಯೂಸ್ ಸಹ-ಸಂಸ್ಥಾಪಕ ಮೊಹಮ್ಮದ್ ಜುಬೇರ್ ಪೊಲೀಸ್ ಕಸ್ಟಡಿ ಅವಧಿಯನ್ನು ದೆಹಲಿ ನ್ಯಾಯಾಲಯವು ನಾಲ್ಕು ದಿನಗಳವರೆಗೆ ವಿಸ್ತರಿಸಿದೆ.
ಇಂದು ವಾದ-ವಿವಾದಗಳ ಆಲಿಸಿದ ನಂತರ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಸ್ನಿಗ್ಧಾ ಸರ್ವರಿಯಾ ಈ ಆದೇಶವನ್ನು ನೀಡಿದರು. ಜುಬೇರ್‌ನ ಕಸ್ಟಡಿ ಅವಧಿಯನ್ನು ಐದು ದಿನ ವಿಸ್ತರಿಸುವಂತೆ ಪೊಲೀಸರು ಕೋರಿದ್ದರು.
2018ರ ಜುಬೇರ್ ಮಾಡಿದ್ದ ಆಕ್ಷೇಪಾರ್ಹ ಟ್ವೀಟ್ ಕೋಮು ಸೌಹಾರ್ದತೆಗೆ ಧಕ್ಕೆ ತರುವಂತಾಗಿದ್ದು ಎಂದು ಅಧಿಕಾರಿಗಳು ಹೇಳಿದ್ದಾರೆ. ಅಂತಹ ಸಂದರ್ಭಗಳಲ್ಲಿ, ಅಂತಹ ಟ್ವೀಟ್‌ಗಳನ್ನು ಪೋಸ್ಟ್ ಮಾಡಲು ಬಳಸಿದ ಗ್ಯಾಜೆಟ್ ಅನ್ನು ಕಂಡುಹಿಡಿಯುವುದು ಮತ್ತು ಅಂತಹ ಟ್ವೀಟ್ ಅನ್ನು ಪೋಸ್ಟ್ ಮಾಡುವ ಹಿಂದಿನ ಉದ್ದೇಶವು ಮುಖ್ಯವಾಗಿರುತ್ತದೆ.
ಇದನ್ನೂ ಓದಿ: ಧಾರ್ಮಿಕ ಭಾವನೆಗಳಿಗೆ ಧಕ್ಕೆ: ಪತ್ರಕರ್ತ ಮೊಹಮ್ಮದ್ ಜುಬೈರ್ ಬಂಧನ
2018ರಲ್ಲಿ ಟ್ವೀಟರ್ ನಲ್ಲಿ ಪೋಸ್ಟ್ ಮಾಡುವ ಮೂಲಕ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇಲೆ ಜುಬೈರ್ ನನ್ನು ಸೋಮವಾರ ದೆಹಲಿ ಪೊಲೀಸರು ಬಂಧಿಸಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಜುಬೇರ್ ಬಂಧನಕ್ಕೆ ಪತ್ರಕರ್ತರ ಸಂಸ್ಥೆಗಳು ಮತ್ತು ವಿರೋಧ ಪಕ್ಷಗಳು ಸೇರಿದಂತೆ ವಿವಿಧ ವಲಯಗಳಿಂದ ಖಂಡನೆಗಳು ವ್ಯಕ್ತವಾಗಿವೆ.