ಬಿಹಾರದಲ್ಲಿ ಓವೈಸಿಗೆ ಮುಖಭಂಗ: ಆರ್‌ಜೆಡಿ ಸೇರಿದ ಎಐಎಂಐಎಂನ ನಾಲ್ವರು ಶಾಸಕರು!

ಬಿಹಾರ ರಾಜಕೀಯದಲ್ಲಿ ಅಸಾದುದ್ದೀನ್ ಓವೈಸಿ ಪಕ್ಷಕ್ಕೆ ಭಾರೀ ಮುಖಭಂಗ ಉಂಟಾಗಿದೆ. ಐದು ಎಐಎಂಐಎಂ ಶಾಸಕರ ಪೈಕಿ ನಾಲ್ವರು ಆರ್‌ಜೆಡಿ ಸೇರ್ಪಡೆಯಾಗಿದ್ದಾರೆ.
ಅಸಾದುದ್ದೀನ್ ಓವೈಸಿ
ಅಸಾದುದ್ದೀನ್ ಓವೈಸಿ

ಪಾಟ್ನಾ: ಬಿಹಾರ ರಾಜಕೀಯದಲ್ಲಿ ಅಸಾದುದ್ದೀನ್ ಓವೈಸಿ ಪಕ್ಷಕ್ಕೆ ಭಾರೀ ಮುಖಭಂಗ ಉಂಟಾಗಿದೆ. ಐದು ಎಐಎಂಐಎಂ ಶಾಸಕರ ಪೈಕಿ ನಾಲ್ವರು ಆರ್‌ಜೆಡಿ ಸೇರ್ಪಡೆಯಾಗಿದ್ದಾರೆ.

ಬಿಹಾರ ವಿಧಾನಸಭೆಯ ವಿರೋಧ ಪಕ್ಷದ ನಾಯಕ ತೇಜಸ್ವಿ ಯಾದವ್ ಅವರು ಓವೈಸಿ ಪಕ್ಷದ ನಾಲ್ವರು ಶಾಸಕರು ಆರ್‌ಜೆಡಿ ಸೇರಿರುವುದನ್ನು ಪುಷ್ಠಿಕರಿಸಿದ್ದಾರೆ.

ಈ ನಾಲ್ವರು ಶಾಸಕರ ಸೇರ್ಪಡೆಯಿಂದ ಬಿಹಾರದಲ್ಲಿ ಆರ್‌ಜೆಡಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಆರ್ ಜೆಡಿಗೆ ಈ ನಾಲ್ವರು ಶಾಸಕರ ಆಗಮನದಿಂದ ಪಕ್ಷದ ಒಟ್ಟು ಸಂಖ್ಯೆ 79 ಆಗಲಿದೆ. ಇನ್ನು ಎರಡನೇ ಸ್ಥಾನದಲ್ಲಿ ಬಿಜೆಪಿ ಇರಲಿದ್ದು, ಅದರ ಒಟ್ಟು ಶಾಸಕರ ಸಂಖ್ಯೆ 77 ಇದೆ.

ಈ ಬೆಳವಣಿಗೆಗಳ ಮಧ್ಯೆ ವಿರೋಧ ಪಕ್ಷದ ನಾಯಕರಾಗಿರುವ ತೇಜಸ್ವಿ ಯಾದವ್ ಇಂದು ಸುದ್ದಿಗೋಷ್ಠಿ ನಡೆಸಲಿದ್ದು, ಮುಂದಿನ ರಣತಂತ್ರಗಳ ಬಗ್ಗೆ ಮಾಹಿತಿ ಬಿಚ್ಚಿಡಲಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com