ಮಹಾ ರಾಜಕೀಯ ಬಿಕ್ಕಟ್ಟು: ವಿಶ್ವಾಸಮತ ಯಾಚನೆಗೂ ಮುನ್ನವೇ ಮುಖ್ಯಮಂತ್ರಿ ಸ್ಥಾನಕ್ಕೆ ಉದ್ಧವ್ ಠಾಕ್ರೆ ರಾಜೀನಾಮೆ

ವಿಶ್ವಾಸಮತ ಯಾಚನೆಗೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದ ಬೆನ್ನಲ್ಲೇ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಬುಧವಾರ ರಾತ್ರಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದಾರೆ. ಇದರೊಂದಿಗೆ ಮಹಾ ರಾಜಕೀಯ ಬಿಕ್ಕಟ್ಟಿಗೆ...
ಉಧ್ಧವ್ ಠಾಕ್ರೆ
ಉಧ್ಧವ್ ಠಾಕ್ರೆ

ನವದೆಹಲಿ: ವಿಶ್ವಾಸಮತ ಯಾಚನೆಗೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದ ಬೆನ್ನಲ್ಲೇ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಬುಧವಾರ ರಾತ್ರಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದಾರೆ. ಇದರೊಂದಿಗೆ ಮಹಾ ರಾಜಕೀಯ ಬಿಕ್ಕಟ್ಟಿಗೆ ಬಹುತೇಕ ತೆರೆ ಬಿದ್ದಂತಾಗಿದೆ.

ವಿಶ್ವಾಸಮತ ಯಾಚಿಸುವಂತೆ ಸೂಚನೆ ನೀಡಿರುವ ಮಹಾರಾಷ್ಟ್ರ ರಾಜ್ಯಪಾಲರ ಆದೇಶಕ್ಕೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದ ಕೆಲವೇ ಕ್ಷಣಗಳಲ್ಲಿ ಫೇಸ್‌ಬುಕ್ ಲೈವ್‌ ಬಂದ ಉದ್ಧವ್ ಠಾಕ್ರೆ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ಮತ್ತು ತಮ್ಮ ಎಂಎಲ್ ಸಿ ಸ್ಥಾನಕ್ಕೂ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ.

ಸಿಎಂ ಉದ್ಧವ್ ಠಾಕ್ರೆ ನೇತೃತ್ವದ ಮಹಾ ವಿಕಾಸ್ ಅಘಾಡಿ (ಎಂವಿಎ) ಸರ್ಕಾರಕ್ಕೆ ಗುರುವಾರ ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚಿಸುವಂತೆ ಮಹಾರಾಷ್ಟ್ರ ರಾಜ್ಯಪಾಲರು ನೀಡಿದ ನಿರ್ದೇಶನವನ್ನು ಶಿವಸೇನೆಯ ಮುಖ್ಯ ಸಚೇತಕ ಸುನೀಲ್ ಪ್ರಭು ಬುಧವಾರ ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು.

ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಅವರ ನಿರ್ದೇಶನದಂತೆ ನಾಳೆಯೇ ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸುವಂತೆ ಮಹಾ ಸರ್ಕಾರಕ್ಕೆ ಸೂಚಿಸಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com