ಪಣಜಿಯ ತಾಜ್ ಹೋಟೆಲ್​ನಲ್ಲಿ ರಾತ್ರಿ ತಂಗಿದ್ದ ಶಿವಸೇನೆ ಬಂಡಾಯ ಶಾಸಕರು: ಇಂದು ಮುಂಬೈಗೆ ತೆರಳುವ ಸಾಧ್ಯತೆ

ಮಹಾರಾಷ್ಟ್ರ ಶಿವಸೇನೆ ಬಂಡಾಯ ನಾಯಕ ಏಕನಾಥ ಶಿಂದೆ ಹಾಗೂ ಉಳಿದ ಇತರ ಬಂಡಾಯ ಶಾಸಕರು ಬುಧವಾರ ರಾತ್ರಿ ಪಣಜಿಯ ತಾಜ್ ಹೋಟೆಲ್‌ನಲ್ಲಿ ತಂಗಿದ್ದು, ಇಂದು ಮುಂಬೈಗೆ ಮರಳಲಿದ್ದಾರೆಂದು ಹೇಳಲಾಗುತ್ತಿದೆ.
ಬಂಡಾಯ ಶಾಸಕರು
ಬಂಡಾಯ ಶಾಸಕರು

ಪಣಜಿ: ಮಹಾರಾಷ್ಟ್ರ ಶಿವಸೇನೆ ಬಂಡಾಯ ನಾಯಕ ಏಕನಾಥ ಶಿಂದೆ ಹಾಗೂ ಉಳಿದ ಇತರ ಬಂಡಾಯ ಶಾಸಕರು ಬುಧವಾರ ರಾತ್ರಿ ಪಣಜಿಯ ತಾಜ್ ಹೋಟೆಲ್‌ನಲ್ಲಿ ತಂಗಿದ್ದು, ಇಂದು ಮುಂಬೈಗೆ ಮರಳಲಿದ್ದಾರೆಂದು ಹೇಳಲಾಗುತ್ತಿದೆ. 

ಗುರುವಾರದಂದು ಸುಪ್ರಿಂ ಕೋರ್ಟ್ ವಿಶ್ವಾಸಮತಯಾಚನೆಗೆ ಸೂಚಿಸಿರುವ ಕಾರಣ, ಬಂಡಾಯ ಶಾಸಕರು ಇಂದು ಬೆಳಗ್ಗೆ ಮುಂಬೈಗೆ ತೆರಳುವ ನಿರೀಕ್ಷೆಯಿದೆ.

ಮಹಾ ವಿಕಾಸ್ ಅಘಾಡಿ (ಎಂವಿಎ) ಸರ್ಕಾರಕ್ಕೆ ಗುರುವಾರ ಸದನದಲ್ಲಿ ಬಹುಮತ ಸಾಬೀತುಪಡಿಸುವಂತೆ ಮಹಾರಾಷ್ಟ್ರ ರಾಜ್ಯಪಾಲರು ನೀಡಿದ ನಿರ್ದೇಶನವನ್ನು ಪ್ರಶ್ನಿಸಿ ಶಿವಸೇನೆಯ ಮುಖ್ಯ ಸಚೇತಕ ಸುನೀಲ್ ಪ್ರಭು ಅವರು ಸಲ್ಲಿಸಿದ ಮನವಿಯನ್ನ ನಿನ್ನೆ ಸುಪ್ರೀಂಕೋರ್ಟ್ ವಿಚಾರಣೆ ನಡೆಸಿತ್ತು. 

ವಿಶ್ವಾಸಮತ ಯಾಚಿಸುವಂತೆ ಸೂಚನೆ ನೀಡಿರುವ ಮಹಾರಾಷ್ಟ್ರ ರಾಜ್ಯಪಾಲರ ಆದೇಶಕ್ಕೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿತ್ತು.

ಸುಪ್ರೀಂಕೋರ್ಟ್ ಆದೇಶ ನೀಡಿದ ಕೆಲವೇ ಕ್ಷಣಗಳಲ್ಲಿ ಫೇಸ್‌ಬುಕ್ ಲೈವ್‌ ಬಂದ ಉದ್ಧವ್ ಠಾಕ್ರೆ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ಮತ್ತು ವಿಧಾನ ಪರಿಷತ್ ಸ್ಥಾನಕ್ಕೂ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದರು.

ಇದರಂತೆ ರಾತ್ರಿ ರಾಜಭವನಕ್ಕೆ ತೆರಳಿದ ಉದ್ಧವ್ ಠಾಕ್ರೆ ಅವರು ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com