ಉಕ್ರೇನ್ ವಧು ಜೊತೆ ಹೈದರಾಬಾದ್ ವರನ ಮದುವೆ: ಯುದ್ದ ಕೊನೆಯಾಗಲಿ ಎಂದು ಆರತಕ್ಷತೆಯಲ್ಲಿ ಪ್ರಾರ್ಥನೆ
ಹೈದರಾಬಾದ್ನಲ್ಲಿ ನಡೆದ ಆರಕ್ಷತೆ ಸಮಾರಂಭವೊಂದರಲ್ಲಿ, ಆರಕ್ಷತೆ ವೇಳೆ ಅರ್ಚಕರು ರಷ್ಯಾ-ಉಕ್ರೇನ್ ಯುದ್ಧ ಕೊನೆಗೊಳ್ಳಲಿ ಎಂದು ಪ್ರಾರ್ಥಿಸಿರುವುದು ಇಡೀ ದೇಶದ ಗಮನ ಸೆಳೆದಿದೆ.
Published: 02nd March 2022 09:03 AM | Last Updated: 02nd March 2022 01:38 PM | A+A A-

ಹೈದರಾಬಾದ್ ವರನ ಜೊತೆ ಉಕ್ರೇನ್ ಯುವತಿ ವಿವಾಹ
ಮೊಯಿನಾಬಾದ್: ರಷ್ಯಾ-ಉಕ್ರೇನ್ ಯುದ್ಧ ಜಾಗತಿಕವಾಗಿ ಎಲ್ಲರನ್ನೂ ಆತಂಕಕ್ಕೆ ದೂಡಿದೆ. ರಷ್ಯಾದ ಆಕ್ರಮಣಕಾರಿ ವರ್ತನೆಗೆ ಆಕ್ರೋಶ, ಉಕ್ರೇನ್ ಜನರ ಸಂಕಷ್ಟ ಕಂಡು ಕಂಬನಿ ಮಿಡಿಯುತ್ತಿರುವ ಜಗತ್ತು, ಆದಷ್ಟು ಬೇಗ ಈ ಯುದ್ಧ ಕೊನೆಗೊಳ್ಳಲಿ ಎಂದೇ ಪ್ರಾರ್ಥಿಸುತ್ತಿದ್ದಾರೆ.
ಅದರಂತೆ ಹೈದರಾಬಾದ್ನಲ್ಲಿ ನಡೆದ ಆರಕ್ಷತೆ ಸಮಾರಂಭವೊಂದರಲ್ಲಿ, ಆರಕ್ಷತೆ ವೇಳೆ ಅರ್ಚಕರು ರಷ್ಯಾ-ಉಕ್ರೇನ್ ಯುದ್ಧ ಕೊನೆಗೊಳ್ಳಲಿ ಎಂದು ಪ್ರಾರ್ಥಿಸಿರುವುದು ಇಡೀ ದೇಶದ ಗಮನ ಸೆಳೆದಿದೆ.
ಉಕ್ರೇನ್ ವಿರುದ್ಧ ರಷ್ಯಾ ನಡೆಸುತ್ತಿರುವ ಯುದ್ಧ ಅಂತ್ಯವಾಗಿ, ಕೂಡಲೇ ಶಾಂತಿ ನೆಲೆಸುವಂತಾಗಲಿ ಎಂದು ಚಿಲುಕೂರಿನ ಬಾಲಾಜಿ ದೇವಸ್ಥಾನದಲ್ಲಿ ವಿಶೇಷ ಪೂಜೆಗಳು ನಡೆದವು ಎಂದು ಅರ್ಚಕ ರಂಗರಾಜನ್ ತಿಳಿಸಿದ್ದಾರೆ.
ಇತ್ತೀಚೆಗೆ ಹೈದರಾಬಾದ್ನಲ್ಲಿ ಉಕ್ರೇನಿಯನ್ ವಧು ಲ್ಯುಬೊವ್ ಮತ್ತು ಹೈದರಬಾದ್ ನ ವರ ಪ್ರತೀಕ್ಷ್ ಮದುವೆ ಆರತಕ್ಷತೆ ಸಮಾರಂಭದಲ್ಲಿ ಭಾಗವಹಿಸಿ ನವವಿವಾಹಿತರನ್ನು ಆಶೀರ್ವದಿಸಿದರು. ದೇವರ ವಿಶೇಷ ವಸ್ತ್ರಗಳನ್ನ ಮತ್ತು ಸ್ಮರಣಿಕೆಗಳನ್ನು ವಧು ವರರಿಗೆ ನೀಡಿ ಅವರಿಗೆ ದೀರ್ಘಾಯುಷ್ಯ ಮತ್ತು ಸಂತಾನಫಲ ಸಿಗಲಿ ಎಂದು ಆಶೀರ್ವದಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಉಕ್ರೇನ್ ಮತ್ತು ರಷ್ಯಾ ನಡುವಿನ ಯುದ್ಧ ಶೀಘ್ರ ಅಂತ್ಯಗೊಳ್ಳಲಿ ಎಂದು ಚಿಲುಕೂರು ವೆಂಕಟೇಶ್ವರ ಸ್ವಾಮಿಯಲ್ಲಿ ಪ್ರಾರ್ಥಿಸುತ್ತೇವೆ ಎಂದರು. ಯುದ್ಧವು ಪ್ರಪಂಚದಾದ್ಯಂತ ರಕ್ತಪಾತ ಮತ್ತು ದುರಂತಕ್ಕೆ ಕಾರಣವಾಯಿತು.ಕೋವಿಡ್ ನ ದುರತದಿಂದ ಚೇತರಿಕೊಳ್ಳುವುದಕ್ಕೂ ಮುಂಚೆಯೇ ರಷ್ಯಾ ಉಕ್ರೇನ್ ಮೇಲೆ ದಾಳಿ ಆತಂಕವನ್ನ ಸೃಷ್ಟಿಸಿದೆ ಆದಷ್ಟು ಬೇಗ ಯುದ್ದ ಕೊನೆಯಾಗಲಿ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ಪ್ರತೀಕ್ ಮತ್ತು ಲ್ಯುಬೊವ್ ಉಕ್ರೇನ್ನಲ್ಲಿ ಮದುವೆಯಾಗಿದ್ದರು. ಆರಕ್ಷತೆಗಾಗಿ ಹೈದರಾಬಾದ್ಗೆ ಬಂದ ಮರುದಿನವೇ ಉಕ್ರೇನ್ ವಿರುದ್ಧ ರಷ್ಯಾ ಯುದ್ಧ ಘೋಷಣೆ ಮಾಡಿತ್ತು. ಹೀಗಾಗಿ ವಧುವಿನ ಆತ್ಮಸ್ಥೈರ್ಯ ಕುಂದದಂತೆ ನೋಡಿಕೊಂಡ ಪ್ರತೀಕ್ ಪೋಷಕರು, ಆಕೆಗೆ ಮಾನಸಿಕವಾಗಿ ಬೆಂಬಲ ನೀಡಿದರು.