ಆರ್ಯನ್ ಖಾನ್ ಅಂತರಾಷ್ಟ್ರೀಯ ಡ್ರಗ್ಸ್ ಜಾಲದೊಂದಿಗೆ ಸಂಪರ್ಕವಿರುವ ಬಗ್ಗೆ ಪುರಾವೆಗಳಿಲ್ಲ: ಎನ್ ಸಿಬಿ
ಮುಂಬೈ ಕ್ರೂಸ್ ಶಿಪ್ ಡ್ರಗ್ಸ್ ಪ್ರಕರಣದಲ್ಲಿ ಬಾಲಿವುಡ್ ನಟ ಶಾರುಕ್ ಖಾನ್ ಪುತ್ರ ಆರ್ಯನ್ ಖಾನ್ ವಿರುದ್ಧ ಯಾವುದೇ ಪುರಾವೆಗಳಿಲ್ಲ ಎಂಬ ಮಾಧ್ಯಮಗಳ ವರದಿಗಳನ್ನು ಅಲ್ಲಗಳೆದಿರುವ ವಿಶೇಷ ತನಿಖಾ ತಂಡ ಆರ್ಯನ್ ಖಾನ್ ವಿರುದ್ಧ ಯಾವುದೇ ಪುರಾವೆಗಳಿಲ್ಲ ಎನ್ನುವ ತೀರ್ಮಾನಕ್ಕೆ ಬರಲಾಗಿಲ್ಲ ಎಂದು ಹೇಳಿದೆ.
Published: 02nd March 2022 03:26 PM | Last Updated: 02nd March 2022 03:26 PM | A+A A-

ಆರ್ಯನ್ ಖಾನ್
ಮುಂಬೈ: ಮುಂಬೈ ಕ್ರೂಸ್ ಶಿಪ್ ಡ್ರಗ್ಸ್ ಪ್ರಕರಣದಲ್ಲಿ ಬಾಲಿವುಡ್ ನಟ ಶಾರುಕ್ ಖಾನ್ ಪುತ್ರ ಆರ್ಯನ್ ಖಾನ್ ವಿರುದ್ಧ ಯಾವುದೇ ಪುರಾವೆಗಳಿಲ್ಲ ಎಂಬ ಮಾಧ್ಯಮಗಳ ವರದಿಗಳನ್ನು ಅಲ್ಲಗಳೆದಿರುವ ವಿಶೇಷ ತನಿಖಾ ತಂಡ ಆರ್ಯನ್ ಖಾನ್ ವಿರುದ್ಧ ಯಾವುದೇ ಪುರಾವೆಗಳಿಲ್ಲ ಎನ್ನುವ ತೀರ್ಮಾನಕ್ಕೆ ಬರಲಾಗಿಲ್ಲ ಎಂದು ಹೇಳಿದೆ.
ಕ್ರೂಸ್ ಶಿಪ್ ಡ್ರಗ್ಸ್ ಪ್ರಕರಣದ ತನಿಖೆ ಇನ್ನೂ ನಡೆಯುತ್ತಿದೆ. ಈಗಾಗಲೇ ಯಾವುದೇ ತೀರ್ಮಾನಕ್ಕೆ ಬರಲು ಸಾಧ್ಯವಿಲ್ಲ. ಸಂಪೂರ್ಣ ಹೇಳಿಕೆಗಳನ್ನು ಪಡೆಸಲಾಗಿದೆ. ಆದರೆ ಯಾವುದೇ ತೀರ್ಮಾನಕ್ಕೆ ಬಂದಿಲ್ಲ ಎಂದು ಎನ್ ಸಿಬಿಯ ವಿಶೇಷ ತನಿಖಾ ತಂಡದ ಮುಖ್ಯಸ್ಥ ಸಂಜಯ್ ಸಿಂಗ್ ಹೇಳಿದ್ದಾರೆ ಎಂದು ಸುದ್ದಿ ಸಂಸ್ಧೆ ಎನ್ಐಎ ವರದಿ ಮಾಡಿದೆ.
Highly premature to say that there's no evidence against Aryan Khan. Probe still in progress; recorded multiple statements. Have not reached any conclusion yet: SIT chief & NCB DDG (operation) Sanjay Singh on reports of no evidence against Aryan Khan in Cordelia cruise ship drug pic.twitter.com/oCiixvLu5c
— ANI (@ANI) March 2, 2022
ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್ಯನ್ ಖಾನ್ ವಿರುದ್ಧ ಯಾವುದೇ ಪುರಾವೆಗಳಿಲ್ಲ ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿತ್ತು. ಇದಕ್ಕೆ ಪ್ರತಿಕ್ರಿಯಿಸಿದ ಎಸ್ಐಟಿ ಆರ್ಯನ್ ವಿರುದ್ಧ ಸಾಕ್ಷ್ಯಗಳಿಲ್ಲ ಎನ್ನುವುದನ್ನು ಅಲ್ಲಗಳೆದಿದ್ದು ಈಗಲೇ ತೀರ್ಮಾನಕ್ಕೆ ಬರಲು ಸಾಧ್ಯವಿಲ್ಲ ಎಂದು ಹೇಳಿದೆ.
2021ರ ಅಕ್ಟೋಬರ್ 2ಮತ್ತು 3ರ ಮಧ್ಯರಾತ್ರಿ ಮುಂಬೈ ವಲಯದ ಮುಖ್ಯಸ್ಥ ಸಮೀರ್ ವಾಂಖೆಡೆ ನೇತೃತ್ವದ ಎನ್ ಸಿಬಿ ತಂಡವು ಡ್ರಗ್ ಪಾರ್ಟಿ ನಡೆಯುತ್ತಿದ್ದ ವೇಳೆ ದಾಳಿ ನಡೆಸಿ ಆರ್ಯನ್ ಖಾನ್ ಮತ್ತು ಇತರ ಕೆಲವರನ್ನು ಡ್ರಗ್ಸ್ ಸೇವಿಸಿದ ಆರೋಪದ ಮೇಲೆ ಬಂಧಿಸಿತ್ತು.