ಉತ್ತರ ಪ್ರದೇಶ: ಮಾನವ ಕಳ್ಳಸಾಗಣೆ ಆರೋಪ ಎದುರಿಸುತ್ತಿರುವ ಮೂವರು ಮಹಿಳೆಯರಿಂದ ಆತ್ಮಹತ್ಯೆಗೆ ಯತ್ನ
ಮಾನವ ಕಳ್ಳಸಾಗಣೆ ಆರೋಪ ಎದುರಿಸುತ್ತಿರುವ, ತಮ್ಮ ಕುಟುಂಬಗಳಿಂದ ದೂರವಿರುವ ಮೂವರು ಮಹಿಳೆಯರು ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರ ಕಚೇರಿಯ ಮುಂದೆಯೇ...
Published: 05th March 2022 03:11 PM | Last Updated: 05th March 2022 03:11 PM | A+A A-

ಸಾಂದರ್ಭಿಕ ಚಿತ್ರ
ಮುಜಾಫರ್‌ನಗರ: ಮಾನವ ಕಳ್ಳಸಾಗಣೆ ಆರೋಪ ಎದುರಿಸುತ್ತಿರುವ, ತಮ್ಮ ಕುಟುಂಬಗಳಿಂದ ದೂರವಿರುವ ಮೂವರು ಮಹಿಳೆಯರು ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರ ಕಚೇರಿಯ ಮುಂದೆಯೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.
ಶುಕ್ರವಾರ ಈ ಘಟನೆ ನಡೆದಿದ್ದು, ವಿಷ ಸೇವಿಸಿದ ಮಹಿಳೆಯರನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಲಾಯಿತು ಮತ್ತು ಒಂದು ದಿನದ ನಂತರ ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಯಿತು ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.
ಸದರ್‌ನ ಸರ್ಕಲ್ ಆಫೀಸರ್ ಕಚೇರಿಯ ಹೊರಗೆ ಮೂವರು ಮಹಿಳೆಯರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಹಿಳೆಯರು ಬರೆದಿರುವ ಆತ್ಮಹತ್ಯೆ ಪತ್ರದ ಪ್ರಕಾರ, ಮಾನವ ಕಳ್ಳಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರನ್ನು ಬಂಧಿಸಿದ ನಂತರ ಪತಿ ಮತ್ತು ಅತ್ತೆಯರಿಂದ ದೂರವಿದ್ದು, ಸಾಮಾಜಿಕ ಬಹಿಷ್ಕಾರ ಎದುರಿಸುತ್ತಿರುವುದಾಗಿ ಹೇಳಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಜನವರಿ 3 ರಂದು ಶಾಮ್ಲಿಯಲ್ಲಿ ನಡೆದ ಪೊಲೀಸ್ ದಾಳಿಯಲ್ಲಿ ಈ ಮೂವರು ಮಹಿಳೆಯರನ್ನು ಬಂಧಿಸಲಾಯಿತು ಎಂದು ಪೊಲೀಸರು ಹೇಳಿದ್ದಾರೆ.
ನಂತರ ಮೂವರು ಮಹಿಳೆಯರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಿ ಅವರ ಮನೆಗೆ ಕಳುಹಿಸಲಾಗಿದೆ ಎಂದು ಕೊತ್ವಾಲಿ ಪೊಲೀಸ್ ಠಾಣೆಯ ಸ್ಟೇಷನ್ ಹೌಸ್ ಆಫೀಸರ್ ಯಶ್ಪಾಲ್ ಸಿಂಗ್ ಅವರು ತಿಳಿಸಿದ್ದಾರೆ.