ಗೋವಾ: ಬಿಜೆಪಿಯೇತರ ಪಕ್ಷಗಳೊಂದಿಗೆ ಚುನಾವಣೋತ್ತರ ಮೈತ್ರಿಗೆ ಕಾಂಗ್ರೆಸ್ ಮುಕ್ತ- ದಿನೇಶ್ ಗುಂಡೂರಾವ್
ಗೋವಾ ವಿಧಾನಸಭಾ ಚುನಾವಣೆಯ ಮತ ಎಣಿಕೆ ಸಮೀಪದಲ್ಲಿರುವಂತೆಯೇ, ಕಾಂಗ್ರೆಸ್ ಪಕ್ಷ ಒಂದು ವೇಳೆ ಪೂರ್ಣ ಬಹುಮತ ಪಡೆಯುವಲ್ಲಿ ವಿಫಲವಾದಲ್ಲಿ ಸರ್ಕಾರ ರಚನೆಗೆ ಬಿಜೆಪಿಯೇತರ ಪಕ್ಷಗಳೊಂದಿಗೆ ಚುನಾವಣೋತ್ತರ ಮೈತ್ರಿಗೆ ಮುಕ್ತವಿರುವುದಾಗಿ ಹೇಳಿದೆ.
Published: 07th March 2022 01:38 PM | Last Updated: 07th March 2022 02:35 PM | A+A A-

ದಿನೇಶ್ ಗುಂಡೂರಾವ್
ಪಣಜಿ: ಗೋವಾ ವಿಧಾನಸಭಾ ಚುನಾವಣೆಯ ಮತ ಎಣಿಕೆ ಸಮೀಪದಲ್ಲಿರುವಂತೆಯೇ, ಕಾಂಗ್ರೆಸ್ ಪಕ್ಷ ಒಂದು ವೇಳೆ ಪೂರ್ಣ ಬಹುಮತ ಪಡೆಯುವಲ್ಲಿ ವಿಫಲವಾದಲ್ಲಿ ಸರ್ಕಾರ ರಚನೆಗೆ ಬಿಜೆಪಿಯೇತರ ಪಕ್ಷಗಳೊಂದಿಗೆ ಚುನಾವಣೋತ್ತರ ಮೈತ್ರಿಗೆ ಮುಕ್ತವಿರುವುದಾಗಿ ಹೇಳಿದೆ. 40 ಸದಸ್ಯ ಬಲದ ಗೋವಾ ವಿಧಾನಸಭೆಗೆ ಫೆಬ್ರವರಿ 14 ರಂದು ಚುನಾವಣೆ ನಡೆದಿತ್ತು. ಮಾರ್ಚ್ 10 ರಂದು ಫಲಿತಾಂಶ ಪ್ರಕಟವಾಗಲಿದೆ.
ಪಣಜಿಯಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಎಐಸಿಸಿ ಗೋವಾ ಉಸ್ತುವಾರಿ ದಿನೇಶ್ ಗುಂಡೂರಾವ್, ಬಹುಮತ ಪಡೆಯಲು ಅಗತ್ಯವಾದ 21 ಸ್ಥಾನ ಗೆಲ್ಲುವಲ್ಲಿ ಪಕ್ಷ ಒಂದು ವೇಳೆ ವಿಪಲವಾದಲ್ಲಿ, ಸರ್ಕಾರ ರಚನೆಗೆ ಎಎಪಿ, ಮಹಾರಾಷ್ಟ್ರವಾಡಿ, ಎಂಜಿಎಂ ಮತ್ತು ತೃಣಮೂಲ ಕಾಂಗ್ರೆಸ್ ಮತ್ತಿತರ ಪಕ್ಷಗಳಿಂದ ಬೆಂಬಲ ಪಡೆಯಲು ಕಾಂಗ್ರೆಸ್ ಪಕ್ಷ ಮುಕ್ತವಾಗಿರುವುದಾಗಿ ಹೇಳಿದರು.
ಗೋವಾ ಫಾರ್ವಡ್ ಪಾರ್ಟಿ ಮೈತ್ರಿಯೊಂದಿಗೆ ಕಾಂಗ್ರೆಸ್ ಪಕ್ಷ ಚುನಾವಣೆಗೆ ಸ್ಪರ್ಧಿಸಿತ್ತು. ಅಲ್ಲದೇ, ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಗೋವಾದ ಹಳೆಯ ಪ್ರಾದೇಶಿಕ ಪಕ್ಷ ಎಂಜಿಪಿಯೊಂದಿಗೆ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಂಡಿದೆ.
ಇದನ್ನೂ ಓದಿ: ಗೋವಾ ಚುನಾವಣೆ: ಕಾಂಗ್ರೆಸ್, ಬಿಜೆಪಿ ನಡುವೆ ಮಾತ್ರ ಪೈಪೋಟಿ- ರಾಹುಲ್ ಗಾಂಧಿ
ಅಂತಿಮ ಫಲಿತಾಂಶ ಬಂದ ನಂತರ ನಂತರ ಕಾಂಗ್ರೆಸ್ ಶಾಸಕಾಂಗ ಪಕ್ಷ ತನ್ನ ನಾಯಕರನ್ನು ಆಯ್ಕೆ ಮಾಡುವುದರಲ್ಲಿ ಸಮಯ ವ್ಯರ್ಥ ಮಾಡುವುದಿಲ್ಲ, ಒಂದು ವೇಳೆ ಪಕ್ಷಕ್ಕೆ ಬಹುಮತ ಸಿಕ್ಕರೆ ಅದೇ ದಿನ ಸರ್ಕಾರ ರಚನೆಗೆ ಹಕ್ಕು ಮಂಡಿಸಲಾಗುವುದು ಎಂದು ರಾವ್ ತಿಳಿಸಿದರು.
2017ರಲ್ಲಿ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ 17 ಸ್ಥಾನಗಳಲ್ಲಿ ಗೆಲುವು ಸಾಧಿಸಿದರೆ ಬಿಜೆಪಿ 13 ಸ್ಥಾನಗಳಲ್ಲಿ ಗೆದಿತ್ತು. ಆದರೆ. ಬಿಜೆಪಿ ಪಕ್ಷೇತರರು ಮತ್ತಿತರ ಪಕ್ಷಗಳೊಂದಿಗೆ ವೇಗವಾಗಿ ಮೈತ್ರಿ ಮಾಡಿಕೊಳ್ಳುವುದರೊಂದಿಗೆ ಸರ್ಕಾರ ರಚಿಸಿತ್ತು. ಕಳೆದ ಐದು ವರ್ಷಗಳಲ್ಲಿ ಕಾಂಗ್ರೆಸ್ ಶಾಸಕರ ಸಂಖ್ಯೆ ಕಡಿಮೆಯಾಗಿದ್ದು, ಸದನದಲ್ಲಿ ಆ ಪಕ್ಷದ ಸದಸ್ಯರ ಸಂಖ್ಯೆ 2ಕ್ಕೆ ಇಳಿಕೆಯಾಗಿದೆ.