ಬಿಜೆಪಿ ಗೋವಾದಲ್ಲಿ ಸರ್ಕಾರ ರಚಿಸಲು ಪಕ್ಷೇತರರ, ಪ್ರಾದೇಶಿಕ ಪಕ್ಷಗಳ ಬೆಂಬಲ ಪಡೆಯಲಿದೆ: ಫಡ್ನವಿಸ್

ಗೋವಾದಲ್ಲಿ ಮುಂದಿನ ಸರ್ಕಾರ ರಚಿಸಲು ತಮ್ಮ ಪಕ್ಷ ಪಕ್ಷೇತರರ ಮತ್ತು ಪ್ರಾದೇಶಿಕ ಪಕ್ಷಗಳ ಬೆಂಬಲ ಪಡೆಯಲಿದೆ ಎಂದು ಬಿಜೆಪಿಯ ಹಿರಿಯ ನಾಯಕ ದೇವೇಂದ್ರ ಫಡ್ನವೀಸ್ ಅವರು ಗುರುವಾರ ಹೇಳಿದ್ದಾರೆ.
ದೇವೇಂದ್ರ ಫಡ್ನವೀಸ್
ದೇವೇಂದ್ರ ಫಡ್ನವೀಸ್

ಮುಂಬೈ: ಗೋವಾದಲ್ಲಿ ಮುಂದಿನ ಸರ್ಕಾರ ರಚಿಸಲು ತಮ್ಮ ಪಕ್ಷ ಪಕ್ಷೇತರರ ಮತ್ತು ಪ್ರಾದೇಶಿಕ ಪಕ್ಷಗಳ ಬೆಂಬಲ ಪಡೆಯಲಿದೆ ಎಂದು ಬಿಜೆಪಿಯ ಹಿರಿಯ ನಾಯಕ ದೇವೇಂದ್ರ ಫಡ್ನವೀಸ್ ಅವರು ಗುರುವಾರ ಹೇಳಿದ್ದಾರೆ.

ಗೋವಾ ಬಿಜೆಪಿ ಚುನಾವಣಾ ಉಸ್ತುವಾರಿಯಾಗಿರುವ ಫಡ್ನವಿಸ್ ಅವರು, ಪಕ್ಷದ ಮೇಲೆ ವಿಶ್ವಾಸವಿಟ್ಟಿದ್ದಕ್ಕಾಗಿ ರಾಜ್ಯದ ಜನತೆಗೆ ಧನ್ಯವಾದ ಅರ್ಪಿಸಿದ್ದಾರೆ ಮತ್ತು ಗೋವಾದಲ್ಲಿ ಪಕ್ಷದ ಗೆಲುವನ್ನು ಪ್ರಧಾನಿ ನರೇಂದ್ರ ಮೋದಿಯವರಿಗೆ ಅರ್ಪಿಸಿದರು.

ಗೋವಾದಲ್ಲಿ ಬಿಜೆಪಿ 20 ಸ್ಥಾನಗಳನ್ನು ಗೆದ್ದಿದೆ, 40 ಸದಸ್ಯ ಬಲದ ವಿಧಾನಸಭೆಯಲ್ಲಿ ಬಹುಮತ ಕೇಸರಿ ಪಕ್ಷ ಸರ್ಕಾರ ರಚಿಸಲು 21 ಸ್ಥಾನಗಳ ಅಗತ್ಯೆ ಇದ್ದು, ಕೇವಲ ಒಂದು ಸ್ಥಾನದ ಕೊರತೆ ಎದುರಿಸುತ್ತಿದೆ.

ಗೋವಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಫಡ್ನವೀಸ್, "ಗೋವಾದಲ್ಲಿ ಬಿಜೆಪಿ ಈಗಾಗಲೇ ಸುಮಾರು 20 ಸ್ಥಾನಗಳನ್ನು ಗೆದಿದ್ದು, ಇನ್ನೂ ಒಂದೆರಡು ಸ್ಥಾನಗಳನ್ನು ಗೆಲ್ಲಬಹುದು. ಇದು ನಮ್ಮ ನಾಯಕ ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ಗೋವಾದ ಜನರು ಇಟ್ಟಿರುವ ನಂಬಿಕೆ" ಎಂದಿದ್ದಾರೆ.

ಬಿಜೆಪಿ ಯಾವಾಗ ಸರ್ಕಾರ ರಚನೆಯ ಹಕ್ಕು ಮಂಡಿಸಲಿದೆ ಎಂಬ ಪ್ರಶ್ನೆಗೆ ಉತ್ತರಿಸಿದ ಫಡ್ನವೀಸ್, "ಬಿಜೆಪಿಯ ಸಂಸದೀಯ ಮಂಡಳಿಯು ಆ ಬಗ್ಗೆ ನಮಗೆ ತಿಳಿಸಿದ ನಂತರ ನಿರ್ಧಾರ ತೆಗೆದುಕೊಳ್ಳಲಾಗುವುದು" ಎಂದು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com