ಗೋರಖ್ ಪುರ ನಗರದಲ್ಲಿ ಯೋಗಿ ಆದಿತ್ಯನಾಥ್ ಮುನ್ನಡೆ, ಉತ್ತರಾಖಂಡ್ ಸಿಎಂ ಪುಷ್ಕರ್ ಸಿಂಗ್ ಧಾಮಿ ಹಿನ್ನೆಡೆ 

ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಇತ್ತೀಚಿನ ವರದಿಗಳ ಪ್ರಕಾರ ಬಿಜೆಪಿ 268 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು, ಸ್ಪಷ್ಟ ಬಹುಮತ ಪಡೆಯುವ ಲಕ್ಷಣಗಳು ಗೋಚರಿಸುತ್ತಿವೆ.  
ಯೋಗಿ ಆದಿತ್ಯನಾಥ್
ಯೋಗಿ ಆದಿತ್ಯನಾಥ್

ನವದೆಹಲಿ: ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಇತ್ತೀಚಿನ ವರದಿಗಳ ಪ್ರಕಾರ ಬಿಜೆಪಿ 268 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು, ಸ್ಪಷ್ಟ ಬಹುಮತ ಪಡೆಯುವ ಲಕ್ಷಣಗಳು ಗೋಚರಿಸುತ್ತಿವೆ.  

ಗೋರಖ್ ಪುರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿರುವ ಸಿಎಂ ಯೋಗಿ ಆದಿತ್ಯನಾಥ್ ಅವರು 10,000 ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ. 

2 ಸುತ್ತು ಮತ ಎಣಿಕೆಯ ನಂತರದ ಅಪ್ಡೇಟ್ ಇದಾಗಿದ್ದು ಚುನಾವಣಾ ಆಯೋಗ ಈ ಮಾಹಿತಿಯನ್ನು ಹಂಚಿಕೊಂಡಿದೆ. ಈ ಮೂಲಕ ಸಿಎಂ ಯೋಗಿ ಆದಿತ್ಯನಾಥ್ ಗೋರಖ್ ಪುರದಲ್ಲಿ ಸರಳ ಆರಾಮದಾಯಕ ಸಾಧಿಸಿದ್ದಾರೆ. 

ಇನ್ನು ಉತ್ತರಾಖಂಡ್ ನಲ್ಲಿ ನಲ್ಲಿಯೂ ಬಿಜೆಪಿ ಪಕ್ಷ  70 ಕ್ಷೇತ್ರಗಳ ಪೈಕಿ 44 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದರೆ, ಸಿಎಂ ಉತ್ತಮ್ ಸಿಂಗ್ ಧಾಮಿ, ಖತೀಮಾ 2000 ಮತಗಳಿಂದ ಹಿನ್ನಡೆ ಎದುರಿಸುತ್ತಿದ್ದಾರೆ. ಇನ್ನು ಎಸ್ ಪಿ ನಾಯಕ ಅಖಿಲೇಶ್ ಯಾದವ್ ಕರ್ಹಾಲ್ ವಿಧಾನಸಭಾ ಕ್ಷೇತ್ರದಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com