ಗೋವಾ ಚುನಾವಣೆ: ಬಿಜೆಪಿ ವಿರುದ್ಧ ಬಂಡಾಯವೆದ್ದು ಸ್ಪರ್ಧಿಸಿದ್ದ ಉತ್ಪಲ್ ಪರಿಕ್ಕರ್ ಗೆ ಸೋಲು
ಗೋವಾ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಬಂಡಾಯವೆದ್ದು ಸ್ಪರ್ಧಿಸಿದ್ದ ಮಾಜಿ ಕೇಂದ್ರ ಸಚಿವ ಮನೋಹರ್ ಪರಿಕ್ಕರ್ ಅವರ ಪುತ್ರ ಉತ್ಪಲ್ ಪರಿಕ್ಕರ್ ಅವರು ಸೋಲು ಕಂಡಿದ್ದಾರೆ.
Published: 10th March 2022 01:54 PM | Last Updated: 10th March 2022 01:54 PM | A+A A-

ಉತ್ಪಲ್ ಪರಿಕ್ಕರ್
ಪಣಜಿ: ಗೋವಾ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಬಂಡಾಯವೆದ್ದು ಸ್ಪರ್ಧಿಸಿದ್ದ ಮಾಜಿ ಕೇಂದ್ರ ಸಚಿವ ಮನೋಹರ್ ಪರಿಕ್ಕರ್ ಅವರ ಪುತ್ರ ಉತ್ಪಲ್ ಪರಿಕ್ಕರ್ ಅವರು ಸೋಲು ಕಂಡಿದ್ದಾರೆ.
ಇದನ್ನೂ ಓದಿ: ಗೋವಾ ಚುನಾವಣೆ: ಬಿಜೆಪಿ ನಾಯಕರಿಂದ ರಾಜ್ಯಪಾಲರ ಭೇಟಿ, ಸರ್ಕಾರ ರಚನೆಗೆ ಹಕ್ಕು ಮಂಡನೆ ಸಾಧ್ಯತೆ
ಗೋವಾ ರಾಜಧಾನಿ ಪಣಜಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಉತ್ಪಲ್ ಪರಿಕ್ಕರ್ ಅವರು ಬಿಜೆಪಿ ಅಭ್ಯರ್ಥಿ ಹಾಗೂ ಹಾಲಿ ಶಾಸಕ ಮಾನ್ಸೆರೇಟ್ ವಿರುದ್ಧ 713 ಮತಗಳ ಅಂತರದಲ್ಲಿ ಸೋಲು ಕಂಡಿದ್ದಾರೆ.
ಇದನ್ನೂ ಓದಿ: ಗೋವಾ ವಿಧಾನಸಭೆ ಚುನಾವಣೆ: ಹ್ಯಾಟ್ರಿಕ್ ಜಯದತ್ತ ಬಿಜೆಪಿ, ಎಂಜಿಪಿ ಬೆಂಬಲ ಪಡೆಯುವತ್ತ ಬಿಜೆಪಿ ಯತ್ನ
ಉತ್ಪವ್ ಪರಿಕ್ಕರ್ ಅವರು ಒಟ್ಟು ಮತಗಳಲ್ಲಿ ಶೇ.34.85ರಷ್ಟು ಮತಗಳನ್ನು ಪಡೆದಿದ್ದಾರೆ ಎಂದು ತಿಳಿದುಬಂದಿದೆ. ಭಾರತೀಯ ಚುನಾವಣಾ ಆಯೋಗದ (ಇಸಿಐ) ಪ್ರಕಾರ, ಮಾನ್ಸೆರಾತ್ 6,787 ಮತಗಳನ್ನು ಪಡೆದಿದ್ದರೆ, ಉತ್ಪಲ್ ಪರಿಕ್ಕರ್ 6,071 ಮತಗಳನ್ನು ಪಡೆದು ಕೇವಲ 716 ಮತಗಳಿಂದ ಸೋಲಿಸಿದ್ದಾರೆ. ಇನ್ನು ಕಾಂಗ್ರೆಸ್ ಅಭ್ಯರ್ಥಿ ಎಲ್ವಿಸ್ ಗೋಮ್ಸ್ ಅವರು 3175 ಮತಗಳನ್ನು ಪಡೆದಿದ್ದಾರೆ.
ಇದನ್ನೂ ಓದಿ: ಗೋವಾ ಚುನಾವಣೆ: ಗೆಲ್ಲುವ ವಿಶ್ವಾಸದಲ್ಲಿ ಮತಎಣಿಕೆಗೂ ಮುನ್ನವೇ ರಾಜ್ಯಪಾಲರ ಸಮಯ ಕೇಳಿ ತೀವ್ರ ಮುಜುಗರಕ್ಕೀಡಾದ ಕಾಂಗ್ರೆಸ್!!
ಗೋವಾ ಚುನಾವಣೆ ಘೋಷಣೆಯಾದ ದಿನದಿಂದಲೂ ಉತ್ಪವ್ ಪರಿಕ್ಕರ್ ಬಿಜೆಪಿ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಬಿಜೆಪಿ ಮಾನ್ಸೆರೇಟ್ ಅವರಿಗೆ ಟಿಕೆಟ್ ಘೋಷಣೆ ಮಾಡಿತ್ತು. ಇದರಿಂದ ಬಂಡಾಯವೆದಿದ್ದ ಉತ್ಪಲ್ ಪರಿಕ್ಕರ್ ಸ್ವತಂತ್ರವಾಗಿ ಸ್ಪರ್ಧಿಸಿದ್ದರು. ಆ ಮೂಲಕ ಗೋವಾ ಬಿಜೆಪಿಗೆ ತಲೆನೋವಾಗಿ ಪರಿಣಮಿಸಿದ್ದರು. ಆದರೆ ಇದೀಗ ಕೊನೆಗೂ ಪಣಜಿ ಕ್ಷೇತ್ರವನ್ನು ತನ್ನ ತೆಕ್ಕೆಗೆ ಹಾಕಿಕೊಳ್ಳುವಲ್ಲಿ ಬಿಜೆಪಿ ಯಶಸ್ವಿಯಾಗಿದೆ.