ಪುಲ್ವಾಮಾ ಎನ್‌ಕೌಂಟರ್: ಇಬ್ಬರು ಎಲ್‌ಇಟಿ ಉಗ್ರರ ಹೊಡೆದುರುಳಿಸಿದ ಭಾರತೀಯ ಸೇನೆ
ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಲಷ್ಕರ್-ಎ-ತೊಯ್ಬಾದ ಇಬ್ಬರು ಉಗ್ರರನ್ನು ಭದ್ರತಾ ಪಡೆಗಳು ಹೊಡೆದುರುಳಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Published: 10th March 2022 04:24 PM | Last Updated: 10th March 2022 04:24 PM | A+A A-

ಭಾರತೀಯ ಸೇನೆ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಲಷ್ಕರ್-ಎ-ತೊಯ್ಬಾದ ಇಬ್ಬರು ಉಗ್ರರನ್ನು ಭದ್ರತಾ ಪಡೆಗಳು ಹೊಡೆದುರುಳಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಶ್ರೀನಗರದ ಹೊರವಲಯದಲ್ಲಿರುವ ಖಾನ್‌ಮೋಹ್ ನಲ್ಲಿ ಸರಪಂಚ್ ಸಮೀರ್ ಅಹ್ಮದ್ ಭಟ್ ಅವರನ್ನು ಗುಂಡಿಕ್ಕಿ ಕೊಂದ ಒಂದು ದಿನದ ನಂತರ ಪುಲ್ವಾಮಾದಲ್ಲಿ ಎನ್‌ಕೌಂಟರ್ ನಡೆದಿದೆ.
ಇಂದು ಬೆಳಗ್ಗೆ ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ನೈನಾ ಬಟ್ಪೋರಾ ಗ್ರಾಮದಲ್ಲಿ ಎನ್‌ಕೌಂಟರ್ ಆರಂಭಗೊಂಡಿದ್ದು, ಪೊಲೀಸರು, ಸೇನೆ ಮತ್ತು ಕೇಂದ್ರೀಯ ಮೀಸಲು ಪೊಲೀಸ್ ಪಡೆಗಳ ಜಂಟಿ ಪಡೆಗಳು ಉಗ್ರರ ವಿರುದ್ಧ ಕಾರ್ಡನ್ ಮತ್ತು ಸರ್ಚ್ ಕಾರ್ಯಾಚರಣೆಯನ್ನು ಪ್ರಾರಂಭಿಸಿದ ನಂತರ ಎನ್ ಕೌಂಟರ್ ನಡೆದಿದೆ.
ಭದ್ರತಾ ಪಡೆಗಳು ಹತ್ತಿರ ಬರುತ್ತಿದ್ದಂತೆ ಅಡಗಿಕೊಂಡಿದ್ದ ಉಗ್ರರು ಗುಂಡಿನ ದಾಳಿ ನಡೆಸಿ ಎನ್‌ಕೌಂಟರ್‌ಗೆ ಕಾರಣರಾದರು. ಗುಂಡಿನ ಚಕಮಕಿಯಲ್ಲಿ ಇಬ್ಬರು ಭಯೋತ್ಪಾದಕರು ಹತರಾಗಿದ್ದಾರೆ ಎಂದು ಹೇಳಿದರು.
ಹತ್ಯೆಗೀಡಾದವರ ಗುರುತುಗಳನ್ನು ತಕ್ಷಣವೇ ಪತ್ತೆಹಚ್ಚಲು ಸಾಧ್ಯವಾಗದಿದ್ದರೂ, ಹತ್ಯೆಯಾದ ಇಬ್ಬರೂ ಲಷ್ಕರ್-ಎ-ತೊಯ್ಬಾದೊಂದಿಗೆ ಸಂಬಂಧ ಹೊಂದಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಈ ಹಿಂದೆ, ಎನ್‌ಕೌಂಟರ್‌ನಲ್ಲಿ ಒಬ್ಬ ಉಗ್ರನನ್ನು ಕೊಂದ ನಂತರ, ಕಾಶ್ಮೀರದ ಇನ್‌ಸ್ಪೆಕ್ಟರ್ ಜನರಲ್ ಆಫ್ ಪೊಲೀಸ್ ವಿಜಯ್ ಕುಮಾರ್, ಮಸೀದಿಗೆ ಯಾವುದೇ ಹಾನಿಯಾಗದಂತೆ ಭದ್ರತಾ ಪಡೆಗಳು ಎಲ್ಲಾ ಮುನ್ನೆಚ್ಚರಿಕೆಗಳನ್ನು ತೆಗೆದುಕೊಂಡಿವೆ ಎಂದು ಹೇಳಿದರು.
ಮಸೀದಿಯಿಂದ ಪ್ರತ್ಯೇಕವಾದ ಕಟ್ಟಡದಲ್ಲಿ ಇಬ್ಬರು ಉಗ್ರರು ಅಡಗಿದ್ದರು. ಮಸೀದಿಗೆ ಯಾವುದೇ ಹಾನಿಯಾಗದಂತೆ ನಾವು ಎಲ್ಲಾ ಮುನ್ನೆಚ್ಚರಿಕೆಗಳನ್ನು ತೆಗೆದುಕೊಂಡಿದ್ದೇವೆ ಎಂದು ಕುಮಾರ್ ಹೇಳಿದರು.