ಪಂಜಾಬ್ ಚುನಾವಣೆ: ಹಾಲಿ ಸಿಎಂ ಚನ್ನಿ, ಮಾಜಿ ಸಿಎಂ ಅಮರೀಂದರ್ ಸಿಂಗ್, ಸಿಧುಗೆ ಹಿನ್ನಡೆ

ಪಂಜಾಬ್ ವಿಧಾನಸಭೆ ಚುನಾವಣಾ ಫಲಿತಾಂಶಗಳು ಪ್ರಕಟವಾಗುತ್ತಿದ್ದು, ಹಾಲಿ ಸಿಎಂ ಚರಣ್ ಜಿತ್ ಚನ್ನಿ ಹಾಗೂ ಮಾಜಿ ಸಿಎಂ ಕ್ಯಾಪ್ಟನ್ ಅಮರೀಂದರ್ ಸಿಂಗ್ ತಮ್ಮದೇ ಕ್ಷೇತ್ರದಲ್ಲಿ ಹಿನ್ನಡೆ ಅನುಭವಿಸಿದ್ದಾರೆ ಎನ್ನಲಾಗಿದೆ.

Published: 10th March 2022 11:13 AM  |   Last Updated: 10th March 2022 11:13 AM   |  A+A-


Channi, Sidhu, Amarinder trailing in early trends

ಸಂಗ್ರಹ ಚಿತ್ರ

ANI

ಅಮೃತಸರ: ಪಂಜಾಬ್ ವಿಧಾನಸಭೆ ಚುನಾವಣಾ ಫಲಿತಾಂಶಗಳು ಪ್ರಕಟವಾಗುತ್ತಿದ್ದು, ಹಾಲಿ ಸಿಎಂ ಚರಣ್ ಜಿತ್ ಚನ್ನಿ ಹಾಗೂ ಮಾಜಿ ಸಿಎಂ ಕ್ಯಾಪ್ಟನ್ ಅಮರೀಂದರ್ ಸಿಂಗ್ ತಮ್ಮದೇ ಕ್ಷೇತ್ರದಲ್ಲಿ ಹಿನ್ನಡೆ ಅನುಭವಿಸಿದ್ದಾರೆ ಎನ್ನಲಾಗಿದೆ.

ಫಲಿತಾಂಶದ ಆರಂಭಿಕ ಟ್ರೆಂಡ್‌ಗಳಲ್ಲಿ ಪಂಜಾಬ್ ಮುಖ್ಯಮಂತ್ರಿ ಚರಂಜಿತ್ ಸಿಂಗ್ ಚನ್ನಿ, ರಾಜ್ಯ ಕಾಂಗ್ರೆಸ್ ಅಧ್ಯಕ್ಷ ನವಜೋತ್ ಸಿಂಗ್ ಸಿಧು ಮತ್ತು ಪಂಜಾಬ್ ಲೋಕ ಕಾಂಗ್ರೆಸ್ ನಾಯಕ ಅಮರಿಂದರ್ ಸಿಂಗ್ ಕ್ರಮವಾಗಿ ಚಮಕೂರ್ ಸಾಹಿಬ್, ಅಮೃತಸರ ಪೂರ್ವ ಮತ್ತು ಪಾಟಿಯಾಲ ಕ್ಷೇತ್ರಗಳಲ್ಲಿ ಹಿನ್ನಡೆ ಅನುಭವಿಸಿದ್ದಾರೆ.

ಇದನ್ನೂ ಓದಿ: 'ಕೈ' ಗುಡಿಸಿ ಹಾಕಿದ 'ಪೊರಕೆ': ಅಧಿಕಾರದತ್ತ ಆಪ್, ಸಿಎಂ ಅಭ್ಯರ್ಥಿ ಭಗವಂತ್ ಮಾನ್ ನಿವಾಸದ ಎದುರು ಸಂಭ್ರಮಾಚರಣೆ

ಭಾರತದ ಚುನಾವಣಾ ಆಯೋಗದ ಪ್ರಕಾರ, ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಚರಂಜಿತ್ ಸಿಂಗ್ 8785 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ ಮತ್ತು ಕಾಂಗ್ರೆಸ್ ಅಭ್ಯರ್ಥಿ ಮತ್ತು ಹಾಲಿ ಸಿಎಂ ಚರಂಜಿತ್ ಸಿಂಗ್ ಚನ್ನಿ ಅವರು 6852 ಮತಗಳನ್ನು ಚಮಕೌರ್ ಸಾಹಿಬ್ ಕ್ಷೇತ್ರದಲ್ಲಿ ಹಿನ್ನಡೆ ಪಡೆದಿದ್ದಾರೆ.

ಅಂತೆಯೇ ಭದೌರ್ ಕ್ಷೇತ್ರದಲ್ಲೂ ಚನ್ನಿ ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಲಾಭ್ ಸಿಂಗ್ ಉಗೋಕೆಗಿಂತ ಹಿಂದೆ ಬಿದ್ದಿದ್ದಾರೆ. ಇನ್ನು ಅಮೃತಸರ ಪೂರ್ವ ಕ್ಷೇತ್ರದಲ್ಲಿ ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಜೀವನ್ ಜ್ಯೋತ್ ಕೌರ್ 3058 ಮತಗಳಿಂದ ಮುನ್ನಡೆಯಲ್ಲಿದ್ದರೆ, ಶಿರೋಮಣಿ ಅಕಾಲಿದಳದ ಅಭ್ಯರ್ಥಿ ಬಿಕ್ರಮ್ ಸಿಂಗ್ ಮಜಿಥಿಯಾ (2468 ಮತಗಳು)  ಮತ್ತು ಕಾಂಗ್ರೆಸ್ ನ ನವಜೋತ್ ಸಿಂಗ್ ಸಿಧು (2091 ಮತಗಳು) ಹಿನ್ನಡೆಯಲ್ಲಿದ್ದಾರೆ.

ಇದನ್ನೂ ಓದಿ: ಪಂಜಾಬ್: ಗುರುದ್ವಾರಕ್ಕೆ ಭಗವಂತ್ ಮಾನ್ ಭೇಟಿ, ಸಂಭ್ರಮಾಚರಣೆಗೆ ಜಲೇಬಿ ತಯಾರಿ ಆರಂಭ

ಪಂಜಾಬ್‌ನ ಮಾಜಿ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಅವರ ಪಟಿಯಾಲಾ ಕ್ಷೇತ್ರದಲ್ಲಿ ಆಮ್ ಆದ್ಮಿ ಪಕ್ಷದ ಅಜಿತ್ ಪಾಲ್ ಸಿಂಗ್ ಕೊಹ್ಲಿ 12,693 ಮತಗಳೊಂದಿಗೆ ಮುನ್ನಡೆಯಲ್ಲಿದ್ದು, ಮತ್ತು ಸಿಂಗ್ 4926 ಮತಗಳನ್ನು ಗಳಿಸಿದ್ದಾರೆ.
 


Stay up to date on all the latest ರಾಷ್ಟ್ರೀಯ news
Poll
BS yediyurappa

ಬಿಜೆಪಿ ಸಂಸದೀಯ ಮಂಡಳಿಗೆ ಬಿ.ಎಸ್. ಯಡಿಯೂರಪ್ಪ ಸೇರ್ಪಡೆಯಿಂದ 2023 ರ ಕರ್ನಾಟಕ ಚುನಾವಣೆಯಲ್ಲಿ ಪಕ್ಷಕ್ಕೆ ನೆರವಾಗುವುದೇ?


Result
ಹೌದು
ಇಲ್ಲ

Comments

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

flipboard facebook twitter whatsapp