ಕಾಶ್ಮೀರ: ರಜೆಯಲ್ಲಿದ್ದ ಸಿಆರ್‌ಪಿಎಫ್ ಸಿಬ್ಬಂದಿಯನ್ನು ಗುಂಡಿಕ್ಕಿ ಹತ್ಯೆ ಮಾಡಿದ ಉಗ್ರರು
ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಶನಿವಾರ ಉಗ್ರರು ಸಿಆರ್‌ಪಿಎಫ್ ಸಿಬ್ಬಂದಿಯನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
Published: 12th March 2022 10:00 PM | Last Updated: 12th March 2022 10:00 PM | A+A A-

ಸಿಆರ್ ಪಿಎಫ್ ಯೋಧರು
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಶನಿವಾರ ಉಗ್ರರು ಸಿಆರ್‌ಪಿಎಫ್ ಸಿಬ್ಬಂದಿಯನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
"ಇಂದು ರಾತ್ರಿ 7:35 ರ ಸುಮಾರಿಗೆ ದಕ್ಷಿಣ ಕಾಶ್ಮೀರದ ಶೋಪಿಯಾನ್‌ನ ಚೆಕ್ ಚೋಟಿಪೋರಾ ಪ್ರದೇಶದಲ್ಲಿ ಸಿಆರ್‌ಪಿಎಫ್ ಸಿಬ್ಬಂದಿ ಮುಕ್ತಾರ್ ಅಹ್ಮದ್ ಅವರ ಮನೆಯ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದರು" ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.
ಇದನ್ನು ಓದಿ: ಜಮ್ಮು ಮತ್ತು ಕಾಶ್ಮೀರದಲ್ಲಿ ಎನ್ಕೌಂಟರ್: ನಾಲ್ವರು ಉಗ್ರರ ಹೊಡೆದುರುಳಿಸಿದ ಸೇನಾಪಡೆ
ಗುಂಡಿನ ದಾಳಿಯಲ್ಲಿ ಗಾಯಗೊಂಡಿದ್ದ ಅಹ್ಮದ್ ಅವರನ್ನು ಶೋಪಿಯಾನ್‌ನಲ್ಲಿರುವ ಜಿಲ್ಲಾ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ದಾರಿ ಮಧ್ಯೆಯೇ ಸಿಆರ್ ಪಿಎಫ್ ಯೋಧ ಮೃತಪಟ್ಟಿದ್ದಾರೆ ಎಂದು ಘೋಷಿಸಿದರು.
ಉಗ್ರರ ಗುಂಡಿಗೆ ಬಲಿಯಾದ ಸಿಆರ್‌ಪಿಎಫ್ ಸಿಬ್ಬಂದಿ ರಜೆಯಲ್ಲಿದ್ದರು ಎಂದು ಅಧಿಕಾರಿ ತಿಳಿಸಿದ್ದಾರೆ.
ಈ ಪ್ರದೇಶವನ್ನು ಭದ್ರತಾ ಪಡೆ ಸುತ್ತುವರಿದಿದೆ ಮತ್ತು ದಾಳಿಕೋರರನ್ನು ಹಿಡಿಯಲು ತೀವ್ರ ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅವರು ಹೇಳಿದ್ದಾರೆ.