ಕೋವಿಡ್-19: ಭಾರತದಲ್ಲಿಂದು 3,614 ಹೊಸ ಕೇಸ್ ಪತ್ತೆ, 89 ಮಂದಿ ಸಾವು
ಭಾರತದಲ್ಲಿ ಮಹಾಮಾರಿ ಕೊರೋನಾ 3ನೇ ಅಲೆ ಅಂತ್ಯದತ್ತ ಸಾಗಿದ್ದು, ದೇಶದಲ್ಲಿಂದು ಶನಿವಾರ ಬೆಳಿಗ್ಗೆ 8 ಗಂಟೆಗೆ ಅಂತ್ಯವಾದ 24 ಗಂಟೆಗಳ ಅವಧಿಯಲ್ಲಿ ಕೇವಲ 3,614 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 89 ಮಂದಿ ಸಾವನ್ನಪ್ಪಿದ್ದಾರೆ.
Published: 12th March 2022 10:00 AM | Last Updated: 12th March 2022 10:00 AM | A+A A-

ಸಂಗ್ರಹ ಚಿತ್ರ
ನವದೆಹಲಿ: ಭಾರತದಲ್ಲಿ ಮಹಾಮಾರಿ ಕೊರೋನಾ 3ನೇ ಅಲೆ ಅಂತ್ಯದತ್ತ ಸಾಗಿದ್ದು, ದೇಶದಲ್ಲಿಂದು ಶನಿವಾರ ಬೆಳಿಗ್ಗೆ 8 ಗಂಟೆಗೆ ಅಂತ್ಯವಾದ 24 ಗಂಟೆಗಳ ಅವಧಿಯಲ್ಲಿ ಕೇವಲ 3,614 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 89 ಮಂದಿ ಸಾವನ್ನಪ್ಪಿದ್ದಾರೆ.
ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,29,87,875ಕ್ಕೆ ಏರಿಕೆಯಾಗಿದೆ. ಅಲ್ಲದೇ, ಕೋವಿಡ್ ನಿಂದ ಸಾವನ್ನಪ್ಪಿರುವವರ ಸಂಖ್ಯೆ 5,15,803ಕ್ಕೆ ಏರಿಕೆಯಾಗಿದೆ.
ದೇಶದಲ್ಲಿ ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 40,559ಕ್ಕೆ ಇಳಿಕೆಯಾಗಿದೆ
ಈ ನಡುವೆ ಕಳೆದ 24 ಗಂಟೆಗಳಲ್ಲಿ 5,185 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 4,24,31,513ಕ್ಕೆ ತಲುಪಿದೆ.
ಇನ್ನು ಭಾರತದಲ್ಲಿ ಒಂದೇ 8,12,365 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈ ವರೆಗೂ 77,68,94,810 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.
ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್'ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ.
ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ 1,79,91,57,486 ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.