
ಭಗವಂತ್ ಮಾನ್
ಚಂಡೀಗಢ: ಪಂಜಾಬ್ ನಿಯೋಜಿತ ಮುಖ್ಯಮಂತ್ರಿ ಭಗವಂತ್ ಮಾನ್ ಅವರು ಸೋಮವಾರ ತಮ್ಮ ಸಂಸತ್ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಭಗವಂತ್ ಮಾನ್ ಅವರು ಸಂಗ್ರೂರ್ ಲೋಕಸಭಾ ಕ್ಷೇತ್ರದಿಂದ ಎರಡು ಬಾರಿ ಲೋಕಸಭಾ ಸಂಸದರಾಗಿ ಆಯ್ಕೆಯಾಗಿದ್ದಾರೆ. ಇತ್ತೀಚಿಗೆ ನಡೆದ ಪಂಜಾಬ್ ವಿಧಾನಸಭೆ ಚುನಾವಣೆಯಲ್ಲಿ ಮಾನ್ ಧುರಿ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ದಲ್ವಿರ್ ಸಿಂಗ್ ಗೋಲ್ಡಿ ಅವರ ವಿರುದ್ಧ 58,206 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.
ಇದನ್ನು ಓದಿ: ಪಂಜಾಬ್ ಸಿಎಂ ಆಗಿ ಪ್ರಮಾಣ ಸ್ವೀಕಾರಕ್ಕೂ ಮುನ್ನವೇ ಮಾಜಿ ಸಚಿವರ, ಶಾಸಕರ ಭದ್ರತೆ ಹಿಂಪಡೆದ ಮಾನ್
48 ವರ್ಷದ ಎಎಪಿ ನಾಯಕ ಭಗವಂತ್ ಮಾನ್ ಅವರು ಮಾರ್ಚ್ 16 ರಂದು ಪಂಜಾಬ್ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
117 ಸದಸ್ಯ ಬಲದ ಪಂಜಾಬ್ ವಿಧಾನಸಭೆಯಲ್ಲಿ ಎಎಪಿ 92 ಸ್ಥಾನಗಳನ್ನು ಗೆಲ್ಲುವ ಮೂಲಕ ಭರ್ಜರಿ ಬಹುಮತದೊಂದಿಗೆ ಸರ್ಕಾರ ರಚಿಸುತ್ತಿದೆ.