ಆಂಧ್ರ ಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ: 6 ತಿಂಗಳ ಮಗು ಸೇರಿ ಐದು ಸಾವು!!
ಆಂಧ್ರ ಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಚಾಲಕನ ನಿಯಂತ್ರಣ ತಪ್ಪಿದ ಕಾರು ರಾಜಾಕಾಲುವೆಗೆ ಢಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ 6 ತಿಂಗಳ ಮಗು ಸೇರಿ ಐದು ಮಂದಿ ಸಾವನ್ನಪ್ಪಿದ್ದಾರೆ.
Published: 13th March 2022 12:08 PM | Last Updated: 13th March 2022 12:08 PM | A+A A-

ಸಾಂದರ್ಭಿಕ ಚಿತ್ರ
ಕೃಷ್ಣಾ ಜಿಲ್ಲೆ: ಆಂಧ್ರ ಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಚಾಲಕನ ನಿಯಂತ್ರಣ ತಪ್ಪಿದ ಕಾರು ರಾಜಾಕಾಲುವೆಗೆ ಢಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ 6 ತಿಂಗಳ ಮಗು ಸೇರಿ ಐದು ಮಂದಿ ಸಾವನ್ನಪ್ಪಿದ್ದಾರೆ.
Andhra Pradesh | Five people including a 6-months old girl died in a road accident in Jaggayyapet in Krishna district as their car hit a culvert. 4 of them died on the spot & 1 person died while being taken to the hospital. Another person is in critical condition in the hospital
— ANI (@ANI) March 13, 2022
ಆಂಧ್ರ ಪ್ರದೇಶದ ಕೃಷ್ಣಾ ಜಿಲ್ಲೆಯ ಜಗ್ಗಯ್ಯಪೇಟೆ ವಲಯದಲ್ಲಿ ಈ ಅಪಗಾತ ಸಂಭವಿಸಿದ್ದು, ಹಾನರ್ ನಲ್ಲಿ ನಿಯಂತ್ರಣ ತಪ್ಪಿದ ಕಾರೊಂದು ಮೋರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಅಪಘಾತದಲ್ಲಿ ಆರು ತಿಂಗಳ ಮಗು ಸೇರಿದಂತೆ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಸ್ಥಳೀಯರು ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಮೃತಪಟ್ಟವರೆಲ್ಲರೂ ಒಂದೇ ಕುಟುಂಬಕ್ಕೆ ಸೇರಿದವರಾಗಿದ್ದು, ಮಗುವಿನ ಅನ್ನಪ್ರಾಶನಕ್ಕಾಗಿ ಕುಟುಂಬ ಸಮೇತ ಏಲೂರಿಗೆ ಹೋಗುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಮಾಹಿತಿ ತಿಳಿದ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಅಪಘಾತದ ನಂತರ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಮೃತರನ್ನು ಕುಟುಂಬರಾವ್, ಇಂದಿರಾ, ಶಾಂತಿ, ತಾಯಿ ಮೇರಿ ಮತ್ತು ಆರು ತಿಂಗಳ ಮಗು ರಾಜಕುಮಾರ್ ಎಂದು ಗುರುತಿಸಲಾಗಿದೆ.