ಕಾಶ್ಮೀರದಲ್ಲಿ ಮುಂದುವರೆದ ಉಗ್ರ ನಿಗ್ರಹ ಕಾರ್ಯಾಚರಣೆ: ಇಂದು ಮತ್ತೋರ್ವ ಉಗ್ರ ಹತ
ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನೆ ನಡೆಸುತ್ತಿರುವ ಉಗ್ರ ನಿಗ್ರಹ ಕಾರ್ಯಾಚರಣೆ ಮುಂದುವರೆದ್ದಿದ್ದು, ಇಂದೂ ಕೂಡ ಸೇನೆ ಓರ್ವ ಉಗ್ರನನ್ನು ಹೊಡೆದುರುಳಿಸಿವೆ.
Published: 13th March 2022 12:28 PM | Last Updated: 13th March 2022 12:28 PM | A+A A-

ಸಾಂದರ್ಭಿಕ ಚಿತ್ರ
ಶ್ರೀನಗರ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನೆ ನಡೆಸುತ್ತಿರುವ ಉಗ್ರ ನಿಗ್ರಹ ಕಾರ್ಯಾಚರಣೆ ಮುಂದುವರೆದ್ದಿದ್ದು, ಇಂದೂ ಕೂಡ ಸೇನೆ ಓರ್ವ ಉಗ್ರನನ್ನು ಹೊಡೆದುರುಳಿಸಿವೆ.
Jammu & Kashmir | In a joint operation, security forces eliminated a terrorist in Kupwara, war-like stores recovered: Chinar Corps, Indian Army
— ANI (@ANI) March 13, 2022
ಕಾಶ್ಮೀರದ ಕುಪ್ವಾರದಲ್ಲಿ ಭದ್ರತಾ ಪಡೆಗಳು ಭಾನುವಾರ ನಡೆಸಿದ ಎನ್‌ಕೌಂಟರ್‌ನಲ್ಲಿ ಉಗ್ರನೊಬ್ಬ ಬಲಿಯಾಗಿದ್ದಾನೆ. ಕುಪ್ವಾರದಲ್ಲಿ ಉಗ್ರ ಅವಿತಿರುವ ಕುರಿತು ಖಚಿತ ಮಾಹಿತಿ ಪಡೆದ ಭದ್ರತಾ ಪಡೆಗಳು ಪ್ರದೇಶವನ್ನು ಸುತ್ತುವರೆದು ಶೋಧ ನಡೆಸಿವೆ. ಈ ವೇಳೆ ಗುಂಡಿನ ಚಕಮಕಿ ನಡೆದಿದ್ದು, ಓರ್ವ ಉಗ್ರನನ್ನು ಭದ್ರತಾಪಡೆಗಳು ಹೊಡೆದುರುಳಿಸಿವೆ.
Jammu & Kashmir | Terrorists shot dead a CRPF personnel, who was on leave at Chotipora village of Shopian. Security forces cordoned off the area; More details awaited.
— ANI (@ANI) March 12, 2022
ಘಟನಾ ಪ್ರದೇಶದಲ್ಲಿ ಸೇನಾ ಕಾರ್ಯಾಚರಣೆ ಮುಂದುವರೆದಿದ್ದು, ಸುತ್ತಮುತ್ತಲ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ತೀವ್ರಗೊಳಿಸಲಾಗಿದೆ ಎಂದು ಸೇನಾಧಿಕಾರಿಗಳು ತಿಳಿಸಿದ್ದಾರೆ.
#Update | Terrorists fired upon one CRPF personnel namely Mukhtar Ahmad Dohi resident of Shopian. He succumbed to his injuries & attained martyrdom while on way to the hospital: Jammu and Kashmir Police
— ANI (@ANI) March 12, 2022