
ಎನ್ ಐಎ ಸಾಂದರ್ಭಿಕ ಚಿತ್ರ
ನವದೆಹಲಿ: ರೋಹಿಂಗ್ಯಾ ಮುಸ್ಲಿಮರ ಅಕ್ರಮ ಸಾಗಾಣಿಕೆಯಲ್ಲಿ ಭಾಗಿಯಾಗಿದ್ದ ಆರು ಜನರನ್ನು ಎನ್‌ಐಎ ಬಂಧಿಸಿದೆ ಎಂದು ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.
ಈ ಜಾಲವು ಅಸ್ಸಾಂ, ಪಶ್ಚಿಮ ಬಂಗಾಳ, ಮೇಘಾಲಯ ಮತ್ತು ದೇಶದ ಇತರ ಭಾಗಗಳ ಗಡಿ ಪ್ರದೇಶಗಳಲ್ಲಿ ಕಾರ್ಯನಿರ್ವಹಿಸುತ್ತಿದೆ ಎಂದು ಪ್ರಮುಖ ತನಿಖಾ ಸಂಸ್ಥೆಯ ಅಧಿಕಾರಿ ಹೇಳಿದ್ದಾರೆ.
ಇದನ್ನು ಓದಿ: ಬೆಂಗಳೂರಿನಲ್ಲಿ 126 ರೋಹಿಂಗ್ಯಾಗಳು ವಾಸ
ಬಂಧಿತ ಆರು ಜನರು ರೋಹಿಂಗ್ಯಾ ಮುಸ್ಲಿಮರ ಅಕ್ರಮ ಸಾಗಾಣಿಕೆಯಲ್ಲಿ ತೊಡಗಿರುವ ಸಿಂಡಿಕೇಟ್‌ನ ಭಾಗವಾಗಿದ್ದರು ಎಂದಿರುವ ಅಧಿಕಾರಿ, ಹೆಚ್ಚಿನ ವಿವರಗಳನ್ನು ನೀಡಲು ನಿರಾಕರಿಸಿದ್ದಾರೆ.
ಅಕ್ಟೋಬರ್ 2018 ರಲ್ಲಿ ಭಾರತ ಸರ್ಕಾರವು ಅಸ್ಸಾಂನಲ್ಲಿ ಅಕ್ರಮವಾಗಿ ತಂಗಿದ್ದ ಏಳು ರೋಹಿಂಗ್ಯಾ ವಲಸಿಗರನ್ನು ಅವರ ಮೂಲ ದೇಶವಾದ ಮ್ಯಾನ್ಮಾರ್‌ಗೆ ಗಡಿಪಾರು ಮಾಡಿತ್ತು.