ಮಾರ್ಚ್ 16 ರಿಂದ 12-14 ವರ್ಷದ ಮಕ್ಕಳಿಗೆ ಕೋವಿಡ್-19 ಲಸಿಕೆ ಅಭಿಯಾನ ಪ್ರಾರಂಭ
ಕೇಂದ್ರ ಸರ್ಕಾರ ಈ ವಾರದಿಂದ 12-14 ವರ್ಷದ ಮಕ್ಕಳಿಗೆ ಕೋವಿಡ್-19 ಲಸಿಕೆ ನೀಡುವ ಅಭಿಯಾನ ಪ್ರಾರಂಭಿಸಲಿದೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ ಸುಖ್ ಮಾಂಡವೀಯ ಹೇಳಿದ್ದಾರೆ.
Published: 14th March 2022 03:33 PM | Last Updated: 14th March 2022 04:40 PM | A+A A-

ಕೋವಿಡ್-19 ಲಸಿಕೆ
ನವದೆಹಲಿ: ಕೇಂದ್ರ ಸರ್ಕಾರ ಈ ವಾರದಿಂದ 12-14 ವರ್ಷದ ಮಕ್ಕಳಿಗೆ ಕೋರ್ಬೆವ್ಯಾಕ್ಸ್ ಅಭಿವೃದ್ಧಿಪಡಿಸಿರುವ ಕೋವಿಡ್-19 ಲಸಿಕೆ ನೀಡುವ ಅಭಿಯಾನ ಪ್ರಾರಂಭಿಸಲಿದೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ ಸುಖ್ ಮಾಂಡವೀಯ ಹೇಳಿದ್ದಾರೆ.
बच्चे सुरक्षित तो देश सुरक्षित!
— Dr Mansukh Mandaviya (@mansukhmandviya) March 14, 2022
मुझे बताते हुए खुशी है की 16 मार्च से 12 से 13 व 13 से 14 आयुवर्ग के बच्चों का कोविड टीकाकरण शुरू हो रहा है।
साथ ही 60+ आयु के सभी लोग अब प्रिकॉशन डोज लगवा पाएँगे।
मेरा बच्चों के परिजनों व 60+ आयुवर्ग के लोगों से आग्रह है की वैक्सीन जरूर लगवाएँ।
ಮಾ.16 ರಿಂದ 12-13, 13-14 ವರ್ಷಗಳ ಮಕ್ಕಳಿಗೆ ಲಸಿಕೆ ಅಭಿಯಾನ ಪ್ರಾರಂಭವಾಗಲಿದೆ. ಇದರೊಂದಿಗೆ 60 ವರ್ಷಗಳ ಮೇಲ್ಪಟ್ಟ ಮಂದಿಗೆ ಮುನ್ನೆಚ್ಚರಿಕಾ ಕ್ರಮವಾಗಿ ಲಸಿಕೆ ಡೋಸ್ ಗಳನ್ನು ನೀಡಲಾಗುತ್ತದೆ ಎಂದು ಮನ್ ಸುಖ್ ಮಾಂಡವೀಯ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ.
ಮಕ್ಕಳು ಸುರಕ್ಷಿತರಾಗಿದ್ದರೆ ದೇಶವೂ ಸುರಕ್ಷಿತವಾಗಿರಲಿದೆ. ಮಾ.16 ರಿಂದ 12-13 ವರ್ಷದ ಮಕ್ಕಳಿಗೆ ಕೊರೋನಾ ಲಸಿಕೆ ನೀಡುವ ಅಭಿಯಾನವನ್ನು ಘೋಷಿಸಲು ಸಂತಸವಾಗುತ್ತಿದೆ. ಮಕ್ಕಳಿಗೆ ಲಸಿಕೆ ಕೊಡಿಸಲು ಪೋಷಕರಲ್ಲಿ ಮನವಿ ಮಾಡುತ್ತೇನೆ ಹಾಗೂ 60 ವರ್ಷದ ಮೇಲ್ಪಟ್ಟವರು ಮುನ್ನೆಚ್ಚರಿಕಾ ಕ್ರಮವಾಗಿ ಲಸಿಕೆ ಪಡೆಯಲು ಮನವಿ ಮಾಡುತ್ತೇನೆ ಎಂದು ಆರೋಗ್ಯ ಸಚಿವರು ಹೇಳಿದ್ದಾರೆ.
ಇನ್ನು ಇದೇ ವೇಳೆ 60 ವರ್ಷಕ್ಕೂ ಮೇಲ್ಪಟ್ಟವರಿಗೆ ಮುನ್ನೆಚ್ಚರಿಕಾ ಕ್ರಮವಾಗಿ ಲಸಿಕೆ ತೆಗೆದುಕೊಳ್ಳುವುದಕ್ಕೆ ವಿಧಿಸಲಾಗಿದ್ದ ಬಹುವಿಧದ ಆರೋಗ್ಯ ಸಮಸ್ಯೆಗೆ ಸಂಬಂಧಿಸಿದ ಷರತ್ತನ್ನು ತೆಗೆಯಲಾಗಿದೆ.