ಸೋಲು ಕಂಡ ರಾಜ್ಯಗಳ ಮುಖ್ಯಸ್ಥರ ವಜಾಗೊಳಿಸಿದ ಸೋನಿಯಾ ಗಾಂಧಿ
ಇತ್ತೀಚೆಗೆ ನಡೆದ ಪಂಚ ರಾಜ್ಯಗಳ ಚುನಾವಣೆಯಲ್ಲಿ ತೀವ್ರ ಕಳಪೆ ಫಲಿತಾಂಶದ ಹಿನ್ನೆಲೆಯಲ್ಲಿ ಎಐಸಿಸಿ ಅಧ್ಯಕ್ಷ್ಯೆ ಸೋನಿಯಾ ಗಾಂಧಿ ಪ್ರದೇಶ ಕಾಂಗ್ರೆಸ್ ಸಮಿತಿಯ ಮುಖ್ಯಸ್ಥರನ್ನು ವಜಾಗೊಳಿಸಿದ್ದಾರೆ.
Published: 15th March 2022 11:06 PM | Last Updated: 16th March 2022 02:21 PM | A+A A-

ಸೋನಿಯಾ ಗಾಂಧಿ
ನವದೆಹಲಿ: ಇತ್ತೀಚೆಗೆ ನಡೆದ ಪಂಚ ರಾಜ್ಯಗಳ ಚುನಾವಣೆಯಲ್ಲಿ ತೀವ್ರ ಕಳಪೆ ಫಲಿತಾಂಶದ ಹಿನ್ನೆಲೆಯಲ್ಲಿ ಎಐಸಿಸಿ ಅಧ್ಯಕ್ಷ್ಯೆ ಸೋನಿಯಾ ಗಾಂಧಿ ಪ್ರದೇಶ ಕಾಂಗ್ರೆಸ್ ಸಮಿತಿಯ ಮುಖ್ಯಸ್ಥರನ್ನು ವಜಾಗೊಳಿಸಿದ್ದಾರೆ.
ಉತ್ತರ ಪ್ರದೇಶ, ಉತ್ತರಾಖಂಡ್, ಗೋವಾ, ಪಂಜಾಬ್, ಮಣಿಪುರ ರಾಜ್ಯಗಳ ಮುಖ್ಯಸ್ಥರಿಗೆ ರಾಜೀನಾಮೆ ನೀಡುವಂತೆ ಸೋನಿಯಾ ಗಾಂಧಿ ಸೂಚನೆ ನೀಡಿದ್ದಾರೆ.
ವಿಧಾನಸಭಾ ಚುನಾವಣೆಗಳಲ್ಲಿ ಪಕ್ಷದ ಹಿನ್ನೆಡೆಗೆ ಕಾರಣವಾದ ಅಂಶಗಳ ಬಗ್ಗೆ ಪಕ್ಷದ ಸಿಡಬ್ಲ್ಯುಸಿ ಸಭೆಯಲ್ಲಿ ಚರ್ಚಿಸಲಾಗಿತ್ತು. ಪಂಜಾಬ್ ನಲ್ಲಿ ಆಡಳಿತದಲ್ಲಿದ್ದ ಕಾಂಗ್ರೆಸ್ ನ್ನು ಮಣಿಸಿ ಆಮ್ ಆದ್ಮಿ ಪಕ್ಷ ಅಧಿಕಾರಕ್ಕೆ ಬಂದಿದೆ.
ಇದನ್ನೂ ಓದಿ: ರಾಹುಲ್ ಗಾಂಧಿ ಪಕ್ಷದ ಅಧ್ಯಕ್ಷರಲ್ಲ; ಗಾಂಧಿಗಳು ಸ್ವಯಂಪ್ರೇರಣೆಯಿಂದ ದೂರ ಸರಿಯಬೇಕು: ಕಾಂಗ್ರೆಸ್ ನಾಯಕ ಕಪಿಲ್ ಸಿಬಲ್
ಉತ್ತರ ಪ್ರದೇಶ, ಉತ್ತರಾಖಂಡ್, ಗೋವಾ, ಪಂಜಾಬ್, ಮಣಿಪುರ ರಾಜ್ಯಗಳ ಮುಖ್ಯಸ್ಥರಿಗೆ ರಾಜೀನಾಮೆ ನೀಡುವಂತೆ ಸೋನಿಯಾ ಗಾಂಧಿ ಸೂಚನೆ ನೀಡಿದ್ದಾರೆ ಎಂದು ಕಾಂಗ್ರೆಸ್ ವಕ್ತಾರ ರಣ್ದೀಪ್ ಸುರ್ಜೆವಾಲ ಟ್ವಿಟರ್ ಮೂಲಕ ತಿಳಿಸಿದ್ದಾರೆ.