ಪಂಜಾಬ್: ಸಚಿವರಾಗಿ ಆಮ್ ಆದ್ಮಿ ಪಕ್ಷದ 10 ಮಂದಿ ಶಾಸಕರು ಪ್ರಮಾಣವಚನ ಸ್ವೀಕಾರ
ಪಂಜಾಬ್ ವಿಧಾನಸಬಾ ಚುನಾವಣೆಯಲ್ಲಿ ಬಹುಮತ ಪಡೆದ ಆಮ್ ಆದ್ಮಿ ಪಕ್ಷ ಭರ್ಜರಿ ಗೆಲುವು ಸಾಧಿಸಿದ್ದು, ಪಕ್ಷದ 10 ಶಾಸಕರು ಶನಿವಾರ ಸಂಪುಟ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು.
Published: 19th March 2022 01:28 PM | Last Updated: 19th March 2022 01:41 PM | A+A A-

ಸಚಿವರಾಗಿ ಪ್ರಮಾಣವಚನ ಸ್ವೀಕರಿಸುತ್ತಿರುವ ಶಾಸಸಕರು.
ಚಂಡೀಗಢ: ಪಂಜಾಬ್ ವಿಧಾನಸಬಾ ಚುನಾವಣೆಯಲ್ಲಿ ಬಹುಮತ ಪಡೆದ ಆಮ್ ಆದ್ಮಿ ಪಕ್ಷ ಭರ್ಜರಿ ಗೆಲುವು ಸಾಧಿಸಿದ್ದು, ಪಕ್ಷದ 10 ಶಾಸಕರು ಶನಿವಾರ ಸಂಪುಟ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು.
ಪಂಜಾಬ್‌ನ ನೂತನ ಮುಖ್ಯಮಂತ್ರಿಯಾಗಿ ಭಗವಂತ್ ಮಾನ್ ಪ್ರಮಾಣ ವಚನ ಸ್ವೀಕರಿಸಿದ ಕೆಲವೇ ದಿನಗಳಲ್ಲಿ ನೂತನ ಸಂಪುಟ ರಚನೆಯಾಗಿದೆ.
ಹರ್ಪಾಲ್ ಸಿಂಗ್ ಚೀಮಾ, ಡಾ ಬಲ್ಜಿತ್ ಕೌರ್, ಹರ್ಭಜನ್ ಸಿಂಗ್, ಡಾ.ವಿಜಯ್ ಸಿಂಗ್ಲಾ, ಲಾಲ್ ಚಂದ್ ಕತರುಚಕ್, ಗುರ್ಮೀತ್ ಸಿಂಗ್, ಕುಲದೀಪ್ ಸಿಂಗ್ ಧಲಿವಾಲ್, ಲಾಲ್ಜಿತ್ ಸಿಂಗ್ ಭುಲ್ಲರ್, ಬ್ರಹ್ಮ ಶಂಕರ್ (ಜಿಂಪಾ), ಹರ್ಜೋತ್ ಸಿಂಗ್ ಬೈನ್ಸ್ ಚಂಡೀಗಢದ ರಾಜಭವನದಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಿತು.
ಪಂಜಾಬ್‌ನ ನೂತನ ಮುಖ್ಯಮಂತ್ರಿಯಾಗಿ ಭಗವಂತ ಮಾನ್ ಅವರು ಇದೇ 16ರಂದು ಭಗತ್ ಸಿಂಗ್ ಗ್ರಾಮವಾದ ಖಟಕಡಕಲಾನ್‌ನಲ್ಲಿ ಪ್ರಮಾಣವಚನ ಸ್ವೀಕರಿಸಿದ್ದರು. 117 ಸದಸ್ಯ ಬಲದ ಪಂಜಾಬ್ ವಿಧಾನಸಭೆಗೆ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಅರವಿಂದ ಕೇಜ್ರಿವಾಲ್ ನೇತೃತ್ವದ ಎಎಪಿಯ 92 ಅಭ್ಯರ್ಥಿಗಳು ಗೆಲುವು ಸಾಧಿಸಿದ್ದು, ಬಹುಮತದ ಸರ್ಕಾರ ರಚಿಸಿದೆ.