ಹಿಜಾಬ್ ತೀರ್ಪು: ಕರ್ನಾಟಕದ ನ್ಯಾಯಾಧೀಶರಿಗೆ ಕೊಲೆ ಬೆದರಿಕೆ; ಮಧುರೈನಲ್ಲಿ ಇಬ್ಬರ ಬಂಧನ!
ಹಿಜಬ್ ತೀರ್ಪು ಪ್ರಕಟಿಸಿದ ಕರ್ನಾಟಕ ಹೈಕೋಟ್ ಮುಖ್ಯನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಸೇರಿದಂತೆ ಮೂವರು ನ್ಯಾಯಾಧೀಶರಿಗೆ ಕೊಲೆ ಬೆದರಿಕೆ ಹಾಕಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
Published: 20th March 2022 06:43 PM | Last Updated: 20th March 2022 06:43 PM | A+A A-

ನ್ಯಾಯಾಧೀಶರು
ಮಧುರೈ: ಹಿಜಬ್ ತೀರ್ಪು ಪ್ರಕಟಿಸಿದ ಕರ್ನಾಟಕ ಹೈಕೋಟ್ ಮುಖ್ಯನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಸೇರಿದಂತೆ ಮೂವರು ನ್ಯಾಯಾಧೀಶರಿಗೆ ಕೊಲೆ ಬೆದರಿಕೆ ಹಾಕಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ತಮಿಳುನಾಡು ಪೊಲೀಸರು ತಿರುನಲ್ವೇಲಿಯಿಂದ ಕೋವೈ ರಹಮತುಲ್ಲಾ ಮತ್ತು ತಂಜಾವೂರಿನ ಎಸ್ ಜಮಾಲ್ ಮೊಹಮ್ಮದ್ ಉಸ್ಮಾನಿಯನ್ನು ಬಂಧಿಸಿದ್ದಾರೆ. ಇಬ್ಬರೂ ಆರೋಪಿಗಳು ಇಸ್ಲಾಮಿಕ್ ಧಾರ್ಮಿಕ ಸಂಘಟನೆಯಾದ ತಮಿಳುನಾಡು ತೌಹೀದ್ ಜಮಾತ್ ಸದಸ್ಯರಾಗಿದ್ದರು.
ಕರ್ನಾಟಕ ಮತ್ತು ತಮಿಳುನಾಡಿನಲ್ಲಿ ಹಲವು ದೂರುಗಳು ದಾಖಲಾದ ಬೆನ್ನಲ್ಲೇ ತಮಿಳುನಾಡು ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಇದೇ ವೇಳೆ ಈ ಇಬ್ಬರ ಹೊರತಾಗಿ ಹಲವರ ವಿರುದ್ಧ ದೂರುಗಳು ದಾಖಲಾಗಿದ್ದು, ಪ್ರಕರಣದ ತನಿಖೆ ಮುಂದುವರೆದಿದೆ.
ಹಿಜಾಬ್ ಪ್ರಕರಣ ಕುರಿತಂತೆ ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ರಿತು ರಾಜ್ ಆವಸ್ಥಿ ನೇತೃತ್ವದ ನ್ಯಾ.ಕೃಷ್ಣ ಎಸ್.ದೀಕ್ಷಿತ್ ಹಾಗು ಖಾಜಿ ಜೈಬುನ್ನೀಸಾ ಮೊಹಿಯುದ್ದೀನ್ ಅವರಿದ್ದ ವಿಶೇಷ ನ್ಯಾಯಪೀಠ ರಿಟ್ ಅರ್ಜಿಗಳ ಸುದೀರ್ಘ ವಿಚಾರಣೆ ನಡೆಸಿ ಹಿಜಾಬ್ ಇಸ್ಲಾಂ ಧರ್ಮದ ಅಗತ್ಯ ಆಚರಣೆಯಲ್ಲ ಎಂದು ಮಹತ್ವದ ತೀರ್ಪು ನೀಡಿತ್ತು.