ಕಾಶ್ಮೀರ: ಉಗ್ರರೊಂದಿಗೆ ಗುಂಡಿನ ಚಕಮಕಿ, ಪೊಲೀಸ್ ಪೇದೆ ಹುತಾತ್ಮ
ಜಮ್ಮು ಮತ್ತು ಕಾಶ್ಮೀರದ ಶ್ರೀನಗರದ ಸೌರಾ ಪ್ರದೇಶದಲ್ಲಿ ಮಂಗಳವಾರ ಪೊಲೀಸರು ಮತ್ತು ಭಯೋತ್ಪಾದಕರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಕಾನ್‌ಸ್ಟೆಬಲ್ ಒಬ್ಬರು ಹುತಾತ್ಮರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Published: 22nd March 2022 08:46 PM | Last Updated: 23rd March 2022 01:37 PM | A+A A-

ಸಾಂದರ್ಭಿಕ ಚಿತ್ರ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶ್ರೀನಗರದ ಸೌರಾ ಪ್ರದೇಶದಲ್ಲಿ ಮಂಗಳವಾರ ಪೊಲೀಸರು ಮತ್ತು ಭಯೋತ್ಪಾದಕರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಕಾನ್‌ಸ್ಟೆಬಲ್ ಒಬ್ಬರು ಹುತಾತ್ಮರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇಂದು ಮಧ್ಯಾಹ್ನ 2.30 ರ ಸುಮಾರಿಗೆ ನಡೆದ ಶೋಧ ಕಾರ್ಯಾಚರಣೆಯ ಸಮಯದಲ್ಲಿ ಸೌರಾ ಪ್ರದೇಶದ ಬಲೂಚಿಪೋರಾದಲ್ಲಿ ಕುಪ್ವಾರದ ಕಾನ್‌ಸ್ಟೆಬಲ್ ಅಮೀರ್ ಹುಸೇನ್ ಲೋನ್ ಮೇಲೆ ಉಗ್ರರು ಗುಂಡು ಹಾರಿಸಿದ್ದಾರೆ ಎಂದು ಅವರು ಹೇಳಿದ್ದಾರೆ.
ಇದನ್ನು ಓದಿ: ಕಾಶ್ಮೀರ: ಇಬ್ಬರು ನಾಗರಿಕರ ಮೇಲೆ ಗುಂಡಿನ ದಾಳಿ; ಓರ್ವ ಸಾವು, ಮತ್ತೋರ್ವನ ಸ್ಥಿತಿ ಗಂಭೀರ!
ಗುಂಡಿನ ದಾಳಿಯಲ್ಲಿ ಗಂಭೀರವಾಗಿ ಗಾಯಗಗೊಂಡಿದ್ದ ಹುಸೇನ್ ಅವರನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿದರು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಭದ್ರತಾ ಸಿಬ್ಬಂದಿ ಈ ಪ್ರದೇಶವನ್ನು ಸುತ್ತುವರಿದಿದ್ದು, ಶೋಧ ಕಾರ್ಯ ನಡೆಯುತ್ತಿದೆ ಎಂದು ಅಧಿಕಾರಿ ಹೇಳಿದ್ದಾರೆ.