ರಾಜಸ್ಥಾನದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಲು ಮಾಯಾವತಿ ಒತ್ತಾಯ
ದಲಿತರು ಮತ್ತು ಬುಡಕಟ್ಟು ಜನಾಂಗದವರ ಮೇಲೆ ಹೆಚ್ಚುತ್ತಿರುವ ದೌರ್ಜನ್ಯದ ಮಧ್ಯೆ ಕಾಂಗ್ರೆಸ್ ಆಡಳಿತವಿರುವ ರಾಜಸ್ಥಾನದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಬೇಕೆಂದು ಬಹುಜನ ಸಮಾಜ ಪಕ್ಷದ (ಬಿಎಸ್ ಪಿ) ಅಧ್ಯಕ್ಷೆ ಮಾಯಾವತಿ ಬುಧವಾರ ಒತ್ತಾಯಿಸಿದ್ದಾರೆ.
Published: 23rd March 2022 11:42 AM | Last Updated: 23rd March 2022 11:42 AM | A+A A-

ಮಾಯಾವತಿ
ಜೈಪುರ: ದಲಿತರು ಮತ್ತು ಬುಡಕಟ್ಟು ಜನಾಂಗದವರ ಮೇಲೆ ಹೆಚ್ಚುತ್ತಿರುವ ದೌರ್ಜನ್ಯದ ಮಧ್ಯೆ ಕಾಂಗ್ರೆಸ್ ಆಡಳಿತವಿರುವ ರಾಜಸ್ಥಾನದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಬೇಕೆಂದು ಬಹುಜನ ಸಮಾಜ ಪಕ್ಷದ (ಬಿಎಸ್ ಪಿ) ಅಧ್ಯಕ್ಷೆ ಮಾಯಾವತಿ ಬುಧವಾರ ಒತ್ತಾಯಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಮಾಯಾವತಿ, “ರಾಜಸ್ಥಾನದ ಕಾಂಗ್ರೆಸ್ ಸರ್ಕಾರದಲ್ಲಿ ದಲಿತರು ಮತ್ತು ಆದಿವಾಸಿಗಳ ಮೇಲಿನ ದೌರ್ಜನ್ಯಗಳು ಅಪಾರವಾಗಿ ಹೆಚ್ಚಿವೆ. ಇತ್ತೀಚೆಗೆ, ದಿವಾನಾ ಮತ್ತು ಧೋಲ್ ಪುರದಲ್ಲಿ ದಲಿತ ಬಾಲಕಿಯರ ಮೇಲೆ ಅತ್ಯಾಚಾರ, ಅಲ್ವಾರ್ ನಲ್ಲಿ ದಲಿತ ಯುವಕನ ಮೇಲೆ ಟ್ರ್ಯಾಕ್ಟರ್ ಹತ್ತಿಸಿ ಹತ್ಯೆ ಮತ್ತು ಇನ್ನೊಬ್ಬನನ್ನು ಕೂಡ ಹತ್ಯೆ ಮಾಡಲಾಗಿದೆ.
ರಾಜಸ್ಥಾನದಲ್ಲಿ ಅದರಲ್ಲೂ ದಲಿತರು ಮತ್ತು ಆದಿವಾಸಿಗಳ ರಕ್ಷಣೆ ಮಾಡುವಲ್ಲಿ ಕಾಂಗ್ರೆಸ್ ಸರಕಾರ ಸಂಪೂರ್ಣ ವಿಫಲವಾಗಿದೆ ಎಂಬುದು ಇದರಿಂದ ಸ್ಪಷ್ಟವಾಗುತ್ತದೆ. ಆದ್ದರಿಂದ ಈ ಸರಕಾರವನ್ನು ವಜಾಗೊಳಿಸಿ ರಾಷ್ಟ್ರಪತಿ ಆಳ್ವಿಕೆ ಹೇರುವುದು ಸೂಕ್ತ. ಇದು ಬಿಎಸ್ ಪಿಯ ಬೇಡಿಕೆ ಎಂದು ಹೇಳಿದ್ದಾರೆ.