ಬಿರ್ಭೂಮ್ ಹತ್ಯೆ: ಎಂಟು ಜನರ ಸಜೀವ ದಹನಕ್ಕೂ ಮುನ್ನ ಮನಬಂದಂತೆ ಥಳಿತ, ಮರಣೋತ್ತರ ಪರೀಕ್ಷಾ ವರದಿ
ಪಶ್ಚಿಮ ಬಂಗಾಳದ ಬಿರ್ಭೂಮ್ ಜಿಲ್ಲೆಯ ಬೊಗ್ಟುಯಿ ಗ್ರಾಮದಲ್ಲಿ ಸಜೀವ ದಹನವಾದ ಮೂವರು ಮಹಿಳೆಯರು, ಇಬ್ಬರು ಮಕ್ಕಳು ಸೇರಿದಂತೆ ಎಂಟು ಜನರ ಕಗ್ಗೊಲೆಗೂ ಮುನ್ನ ಮನಬಂದಂತೆ ಥಳಿಸಲಾಗಿದೆ ಎಂದು ಅವರ ಮರಣೋತ್ತರ ಪರೀಕ್ಷೆಯಿಂದ ತಿಳಿದುಬಂದಿದೆ.
Published: 24th March 2022 03:52 PM | Last Updated: 24th March 2022 04:46 PM | A+A A-

ಸಜೀವ ದಹನವಾದ ಎಂಟು ಜನರ ಮನೆ ಹಾಗೂ ಸಂಬಂಧಿಕರ ರೋಧನದ ಚಿತ್ರ
ಕೋಲ್ಕತ್ತಾ/ರಾಮ್ ಪುರಹತ್: ಪಶ್ಚಿಮ ಬಂಗಾಳದ ಬಿರ್ಭೂಮ್ ಜಿಲ್ಲೆಯ ಬೊಗ್ಟುಯಿ ಗ್ರಾಮದಲ್ಲಿ ಸಜೀವ ದಹನವಾದ ಮೂವರು ಮಹಿಳೆಯರು, ಇಬ್ಬರು ಮಕ್ಕಳು ಸೇರಿದಂತೆ ಎಂಟು ಜನರ ಕಗ್ಗೊಲೆಗೂ ಮುನ್ನ ಮನಬಂದಂತೆ ಥಳಿಸಲಾಗಿದೆ ಎಂದು ಅವರ ಮರಣೋತ್ತರ ಪರೀಕ್ಷೆಯಿಂದ ತಿಳಿದುಬಂದಿದೆ.
ಮಂಗಳವಾರ ಮುಂಜಾನೆ ಅಪರಿಚಿತರಿಂದ ಬೆಂಕಿ ಹಚ್ಚಲಾಗಿದೆ ಎಂದು ಹೇಳಲಾದ ಮನೆಗಳಲ್ಲಿ ದೊರೆತ ಸುಟ್ಟ ಶವಗಳ ಮರಣೋತ್ತರ ಪರೀಕ್ಷೆ ನಡೆಸಿದ ವಿಧಿ ವಿಜ್ಞಾನ ಪ್ರಯೋಗಾಲಯ ತಂತ್ರಜ್ಞರ ಪ್ರಕಾರ, ಸಂತ್ರಸ್ತರನ್ನು ಮೊದಲು ಮನ ಬಂದಂತೆ ಥಳಿಸಿ, ತದನಂತರ ಜೀವಂತವಾಗಿ ಸುಟ್ಟು ಹಾಕಲಾಗಿದೆ ಎಂದು ರಾಮ್ ಹರತ್ ಪುರ ಆಸ್ಪತ್ರೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಇದನ್ನೂ ಓದಿ: ಬಿರ್ಭೂಮ್ ಹತ್ಯೆ: ಬೊಗ್ಟುಯಿ ಗ್ರಾಮಕ್ಕೆ ಮಮತಾ ಭೇಟಿ, ಮೃತರ ಸಂಬಂಧಿಕರೊಂದಿಗೆ ಮಾತುಕತೆ
ಘಟನೆಗೆ ಸಂಬಂಧಿಸಿದಂತೆ ಇಲ್ಲಿಯವರೆಗೂ ಕನಿಷ್ಠ 20 ಜನರನ್ನು ಬಂಧಿಸಲಾಗಿದೆ. ಸೋಮವಾರ ಸಂಜೆ ಸ್ಥಳೀಯ ಟಿಎಂಸಿ ನಾಯಕನ ಹತ್ಯೆಯಿಂದ ಪ್ರಚೋದಿಸಲ್ಪಟ್ಟಿದೆ ಎಂದು ಶಂಕಿಸಲಾಗಿದೆ ಮತ್ತು ಹಲವಾರು ಪೊಲೀಸ್ ಸಿಬ್ಬಂದಿ ಮತ್ತು ನಾಗರಿಕ ಸ್ವಯಂ ಸೇವಕರನ್ನು ನಿರ್ಲಕ್ಷ್ಯದ ಆಧಾರದ ಮೇಲೆ ತೆಗೆದುಹಾಕಲಾಗಿದೆ.