ಮಾ.29ಕ್ಕೆ ಮತ್ತೆ ವಿಚಾರಣೆಗೆ ಹಾಜರಾಗಲು ಅಭಿಷೇಕ್ ಬ್ಯಾನರ್ಜಿಗೆ ಇಡಿ ಸಮನ್ಸ್
ಕಲ್ಲಿದ್ದಲು ಹಗರಣದ ಆರೋಪದಲ್ಲಿ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾರ್ಚ್ 29 ರಂದು ವಿಚಾರಣೆಗೆ ಹಾಜರಾಗುವಂತೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಸೋದರಳಿಯ ಹಾಗೂ ಟಿಎಂಸಿ ಸಂಸದ ಅಭಿಷೇಕ್ ಬ್ಯಾನರ್ಜಿಗೆ ಜಾರಿ ನಿರ್ದೇಶನ ಹೊಸದಾಗಿ ಗುರುವಾರ ಸಮನ್ಸ್ ನೀಡಿದೆ.
Published: 24th March 2022 08:32 PM | Last Updated: 24th March 2022 08:32 PM | A+A A-

ಅಭಿಷೇಕ್ ಬ್ಯಾನರ್ಜಿ
ನವದೆಹಲಿ: ಕಲ್ಲಿದ್ದಲು ಹಗರಣದ ಆರೋಪದಲ್ಲಿ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾರ್ಚ್ 29 ರಂದು ವಿಚಾರಣೆಗೆ ಹಾಜರಾಗುವಂತೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಸೋದರಳಿಯ ಹಾಗೂ ಟಿಎಂಸಿ ಸಂಸದ ಅಭಿಷೇಕ್ ಬ್ಯಾನರ್ಜಿಗೆ ಜಾರಿ ನಿರ್ದೇಶನ ಹೊಸದಾಗಿ ಗುರುವಾರ ಸಮನ್ಸ್ ನೀಡಿದೆ.
ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್ ಎ) ಅಡಿಯಲ್ಲಿ ದಾಖಲಾಗಿರುವ ಕೇಸ್ ನಲ್ಲಿ ಬ್ಯಾನರ್ಜಿ ಅವರ ಹೇಳಿಕೆ ದಾಖಲು ಮುಂದುವರೆಯಲಿದೆ ಎಂದು ಏಜೆನ್ಸಿ ಹೇಳಿದೆ.
ಈ ಪ್ರಕರಣದಲ್ಲಿ ಕಳೆದ ವರ್ಷ ಸೆಪ್ಟೆಂಬರ್ ನಲ್ಲಿ ಮೊದಲ ಬಾರಿಗೆ ಇಡಿ ಮುಂದೆ ವಿಚಾರಣೆಗೆ ಹಾಜರಾಗಿದ್ದ ಅಭಿಷೇಕ್ ಬ್ಯಾನರ್ಜಿ ಮಾರ್ಚ್ 21 ಸೋಮವಾರದಂದು ಎರಡನೇ ಬಾರಿಗೆ ಸುಮಾರು 8 ತಾಸು ವಿಚಾರಣೆ ಎದುರಿಸಿದ್ದರು.
ಈ ಹಗರಣದಲ್ಲಿ ಮಮತಾ ಬ್ಯಾನರ್ಜಿ ಅವರ ಪಾತ್ರ ಮತ್ತಿತರ ಆರೋಪಿಗಳ ನಂಟಿನ ಬಗ್ಗೆ ವಿಚಾರಣೆ ನಡೆಸಲಾಗುತ್ತಿದೆ ಎಂದು ಇಡಿ ಅಧಿಕಾರಿಗಳು ತಿಳಿಸಿದ್ದಾರೆ.