ಬಿರ್ಭೂಮ್ ಹತ್ಯೆ ಪ್ರಕರಣ: ಸಿಬಿಐ ತನಿಖೆಗೆ ಕೋಲ್ಕತ್ತಾ ಹೈಕೋರ್ಟ್ ಆದೇಶ
ಪಶ್ಚಿಮ ಬಂಗಾಳದ ಬಿರ್ಭೂಮ್ ಜಿಲ್ಲೆಯ ಬೊಗ್ಟುಯಿ ಗ್ರಾಮದಲ್ಲಿ ನಡೆದಿರುವ ಅಮಾನವೀಯ ಎಂಟು ಜನರ ಸಜೀವ ದಹನ ಪ್ರಕರಣವನ್ನು ಸಿಬಿಐ ತನಿಖೆ ನಡೆಸಲು ಕೋಲ್ಕತ್ತಾ ಹೈಕೋರ್ಟ್ ಆದೇಶ ಹೊರಡಿಸಿದೆ.
Published: 25th March 2022 11:33 AM | Last Updated: 25th March 2022 11:34 AM | A+A A-

ಎಂಟು ಜನ ಸಜೀವ ದಹನವಾದ ಬೊಗ್ಟುಯಿ ಗ್ರಾಮದ ಸುಟ್ಟ ಮನೆಯ ಚಿತ್ರ
ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿರ್ಭೂಮ್ ಜಿಲ್ಲೆಯ ಬೊಗ್ಟುಯಿ ಗ್ರಾಮದಲ್ಲಿ ನಡೆದಿರುವ ಅಮಾನವೀಯ ಎಂಟು ಜನರ ಸಜೀವ ದಹನ ಪ್ರಕರಣವನ್ನು ಸಿಬಿಐ ತನಿಖೆ ನಡೆಸಲು ಕೋಲ್ಕತ್ತಾ ಹೈಕೋರ್ಟ್ ಆದೇಶ ಹೊರಡಿಸಿದೆ.
ಸದ್ಯ ಎಸ್ ಐಟಿ ಈ ಪ್ರಕರಣದ ತನಿಖೆ ನಡೆಸುತ್ತಿದ್ದು, ಏಪ್ರಿಲ್ 7ರೊಳಗೆ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ. ಈ ಪ್ರಕರಣದಲ್ಲಿ ಬಂಧಿತರಾದವರು ಹಾಗೂ ಸಂಬಂಧಿಸಿದ ಕಾಗದ ಪತ್ರಗಳನ್ನು ಪಶ್ಚಿಮ ಬಂಗಾಳ ಸರ್ಕಾರ ರಚಿಸಿರುವ ಎಸ್ ಐಟಿ ಸಿಬಿಐಗೆ ಹಸ್ತಾಂತರಿಸುವಂತೆ ಹೈಕೋರ್ಟ್ ಸೂಚಿಸಿದೆ.
ಇದನ್ನೂ ಓದಿ: ಬಿರ್ಭೂಮ್ ಹತ್ಯೆ ಪ್ರಕರಣ: ಪಶ್ಚಿಮ ಬಂಗಾಳ ಸರ್ಕಾರ, ಡಿಜಿಪಿಗೆ ಎನ್ಎಚ್ಆರ್ ಸಿ ನೋಟಿಸ್
ಟಿಎಂಸಿಯ ಗ್ರಾಮ ಪಂಚಾಯತ್ ಸದಸ್ಯನೊಬ್ಬ ಮೃತಪಟ್ಟ ನಂತರ ಬೊಗ್ಟುಯಿ ಗ್ರಾಮದಲ್ಲಿ ನಡೆದಿರುವ ಹತ್ಯೆ ಪ್ರಕರಣದ ಬಗ್ಗೆ ಬುಧವಾರ ಕೋಲ್ಕತ್ತಾ ಹೈಕೋರ್ಟ್ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದೆ. ಈ ಪ್ರಕರಣದಲ್ಲಿ ಇಲ್ಲಿಯವರೆಗೂ ಸುಮಾರು 11 ಮಂದಿಯನ್ನು ಬಂಧಿಸಲಾಗಿದೆ ಎಂದು ಪಶ್ಚಿಮ ಬಂಗಾಳ ಪೊಲೀಸ್ ಮಹಾನಿರ್ದೇಶಕ ಮನೋಜ್ ಮಾಳವೀಯಾ ತಿಳಿಸಿದ್ದಾರೆ.