ಮಾಜಿ ಶಾಸಕರಿಗೆ ಒಂದು ಅವಧಿಗೆ ಮಾತ್ರ ಪಿಂಚಣಿ: ಪಂಜಾಬ್ ಸಿಎಂ ಮಾನ್ ಮಹತ್ವದ ಆದೇಶ

ಪಂಜಾಬ್ ಮಾಜಿ ಶಾಸಕರು ಇನ್ನುಮುಂದೆ ಒಂದು ಅವಧಿಗೆ ಮಾತ್ರ ಪಿಂಚಣಿ ಪಡೆಯಲಿದ್ದಾರೆ ಮತ್ತು ಅವರು ಸೇವೆ ಸಲ್ಲಿಸಿದ ಪ್ರತಿ ಅವಧಿಗೆ ಪಿಂಚಣಿ ಪಡೆಯುವ ಅಭ್ಯಾಸವನ್ನು ತೆಗೆದುಹಾಕಲಾಗುವುದು...

Published: 25th March 2022 05:00 PM  |   Last Updated: 25th March 2022 05:00 PM   |  A+A-


Bhagwant Mann

ಭಗವಂತ್ ಮಾನ್

PTI

ಚಂಡೀಗಢ: ಪಂಜಾಬ್ ಮಾಜಿ ಶಾಸಕರು ಇನ್ನುಮುಂದೆ ಒಂದು ಅವಧಿಗೆ ಮಾತ್ರ ಪಿಂಚಣಿ ಪಡೆಯಲಿದ್ದಾರೆ ಮತ್ತು ಅವರು ಸೇವೆ ಸಲ್ಲಿಸಿದ ಪ್ರತಿ ಅವಧಿಗೆ ಪಿಂಚಣಿ ಪಡೆಯುವ ಅಭ್ಯಾಸವನ್ನು ತೆಗೆದುಹಾಕಲಾಗುವುದು ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರು ಶುಕ್ರವಾರ ಹೇಳಿದ್ದಾರೆ.

"ಪಂಜಾಬ್‌ನ ಮಾಜಿ ಶಾಸಕರು, ಅವರು ಎರಡು ಬಾರಿ, ಐದು ಬಾರಿ ಅಥವಾ ಹತ್ತು ಬಾರಿ ಗೆದ್ದಿದ್ದರೂ ಅವರು ಇನ್ನುಮುಂದೆ ಒಂದು ಅವಧಿಗೆ ಮಾತ್ರ ಪಿಂಚಣಿ ಪಡೆಯುತ್ತಾರೆ" ಎಂದು ವೀಡಿಯೊ ಸಂದೇಶದಲ್ಲಿ ಮಾನ್ ತಿಳಿಸಿದ್ದಾರೆ. ಅಲ್ಲದೆ ಈ ಹಿಂದೆ ಶಾಸಕರಾಗಿದ್ದ ಹಲವಾರು ಸಂಸದರು ಸಹ ಪಿಂಚಣಿ ಪಡೆಯುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.

ಇದನ್ನು ಓದಿ: ಪಂಜಾಬ್: ಐವರು ಎಎಪಿ ಅಭ್ಯರ್ಥಿಗಳು ರಾಜ್ಯಸಭೆಗೆ ಅವಿರೋಧ ಆಯ್ಕೆ 

ಇದರಿಂದ ಉಳಿತಾಯವಾಗುವ ಹಣವನ್ನು ಜನರ ಕಲ್ಯಾಣಕ್ಕೆ ವಿನಿಯೋಗಿಸಲಾಗುವುದು ಎಂದಿರುವ ಪಂಜಾಬ್ ಸಿಎಂ, "ನಮ್ಮ ರಾಜಕೀಯ ನಾಯಕರು, ಶಾಸಕರು ಸೇರಿದಂತೆ, ನಿಮ್ಮ ಸೇವೆ ಮಾಡಲು ನಮಗೆ ಅವಕಾಶ ನೀಡಿ ಎಂದು ಕೈ ಜೋಡಿಸಿ ಹೇಳುವ ಮೂಲಕ ನಿಮ್ಮಿಂದ ಮತ ಪಡೆದು ಗೆಲ್ಲುತ್ತಾರೆ. ಆದರೆ ಮೂರು ಬಾರಿ, ನಾಲ್ಕು ಬಾರಿ ಅಥವಾ ಐದು ಬಾರಿ ಗೆದ್ದ ಹಲವಾರು ಶಾಸಕರು ಚುನಾವಣೆಯಲ್ಲಿ ಸೋತ ನಂತರ ಅಥವಾ ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ಸಿಗದಿದ್ದರೂ ತಿಂಗಳಿಗೆ ಲಕ್ಷಾಂತರ ರೂಪಾಯಿ ಪಿಂಚಣಿ ಪಡೆಯುತ್ತಾರೆ. ಇದು ರಾಜ್ಯದ ಬೊಕ್ಕಸಕ್ಕೆ ದೊಡ್ಡ ಹೊಡೆತ ನೀಡುತ್ತಿದೆ" ಎಂದು ಮಾನ್ ಜನರನ್ನು ಉದ್ದೇಶಿಸಿ ಹೇಳಿದ್ದಾರೆ.

ಚುನಾವಣೆಯಲ್ಲಿ ಸೋತರೋ ಕೆಲವರು 3.50 ಲಕ್ಷ, ಇನ್ನು ಕೆಲವರು 4.50 ಲಕ್ಷ, 5.25 ಲಕ್ಷ ರೂಪಾಯಿ ಪಿಂಚಣಿಯಾಗಿ ಪಡೆಯುತ್ತಾರೆ. ಇದು ಬೊಕ್ಕಸಕ್ಕೆ ಕೋಟ್ಯಂತರ ರೂಪಾಯಿಗಳ ಆರ್ಥಿಕ ಹೊರೆಯಾಗುತ್ತಿದೆ ಎಂದು ಮಾನ್ ಹೇಳಿದ್ದಾರೆ.

ಕೇವಲ ಒಂದು ಅವಧಿಗೆ ಮಾತ್ರ ಶಾಸಕರಾಗಿ ಆಯ್ಕೆಯಾದರೂ ಕೂಡ ಅವರಿಗೆ ಜೀವನಪರ್ಯಂತ ಪಿಂಚಣಿ ಹಣ ನೀಡಲಾಗುತ್ತದೆ. ಬಹುತೇಕ ಎಲ್ಲ ರಾಜ್ಯಗಳಲ್ಲೂ ಈ ಸಂಪ್ರದಾಯ ಜಾರಿಯಲ್ಲಿದೆ. ಆದರೆ, ಪಂಜಾಬ್​ನಲ್ಲಿ ಭಗವಂತ್ ಮಾನ್​ ಸರ್ಕಾರ ಈ ಯೋಜನೆಗೆ ಕಡಿವಾಣ​ ಹಾಕಲು ಮುಂದಾಗಿದೆ. ಇನ್ಮುಂದೆ, ಶಾಸಕರು ಎಷ್ಟು ಬಾರಿ ಗೆದ್ದರೂ ಕೂಡ ಒಂದೇ ಅವಧಿಗೆ ಪಿಂಚಣಿ ಪಡೆದುಕೊಳ್ಳಲು ಅರ್ಹರಾಗಿರುತ್ತಾರೆ.


Stay up to date on all the latest ರಾಷ್ಟ್ರೀಯ news
Poll
Vidhana Saudha

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಬೊಮ್ಮಾಯಿ ಸರ್ಕಾರ ವಿಫಲವಾಗಿದೆಯೇ?


Result
ಹೌದು
ಇಲ್ಲ

Comments(1)

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

  • chandrashekhar shetti

    Hope the karmataka CM will also fallow the same rule
    4 months ago reply
flipboard facebook twitter whatsapp