'ಸಮಾಜವಾದಿ ಪಾರ್ಟಿ ನಿರ್ಮಿಸಿದ ಕ್ರೀಡಾಂಗಣದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಹೊಸ ಸರ್ಕಾರಕ್ಕೆ ಅಭಿನಂದನೆಗಳು'

ಲಕ್ನೋದ ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ ಏಕಾನಾ ಸ್ಟೇಡಿಯಂನಲ್ಲಿ ಶುಕ್ರವಾರ ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ ಯೋಗಿ ಆದಿತ್ಯನಾಥಅವರು ಎರಡನೇ ಬಾರಿಗೆ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

Published: 26th March 2022 01:53 PM  |   Last Updated: 26th March 2022 02:07 PM   |  A+A-


Yogi Adityanath

ಯೋಗಿ ಆದಿತ್ಯನಾಥ್

Online Desk

ಲಕ್ನೋ: ಸಮಾಜವಾದಿ ಪಾರ್ಟಿ ನಿರ್ಮಿಸಿದ ಕ್ರೀಡಾಂಗಣದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಹೊಸ ಸರ್ಕಾರಕ್ಕೆ ಅಭಿನಂದನೆಗಳು. ಕೇವಲ ಸರ್ಕಾರ ರಚಿಸಲು ಅಲ್ಲ, ಜನರ ಸೇವೆಗಾಗಿ ಪ್ರಮಾಣ ವಚನ ಸ್ವೀಕರಿಸಬೇಕು ಎಂದು  ಎಸ್ ಪಿ ಮುಖಂಡ ಅಖಿಲೇಶ್ ಯಾದವ್  ಟ್ವೀಟ್ ಮಾಡಿದ್ದಾರೆ.

ಲಕ್ನೋದ ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ ಏಕಾನಾ ಸ್ಟೇಡಿಯಂನಲ್ಲಿ ಶುಕ್ರವಾರ ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ ಯೋಗಿ ಆದಿತ್ಯನಾಥ ಅವರು ಎರಡನೇ ಬಾರಿಗೆ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಯೋಗಿ ಸರ್ಕಾರವನ್ನು ಅಭಿನಂದಿಸುವ ಬದಲು ಕುಟುಕಿದ್ದಾರೆ. ಯೋಗಿ ಆದಿತ್ಯನಾಥ್ ಹಾಗೂ ಸಚಿವರು ಪ್ರಮಾಣವಚನ ಸ್ವೀಕರಿಸಿದ ಕ್ರೀಡಾಂಗಣ ಸಮಾಜವಾದ ಪಾರ್ಟಿ ಕಟ್ಟಿದ ಕ್ರೀಡಾಂಗಣ ಎಂದು ಅಖಿಲೇಶ್ ಯಾದವ್ ಹೇಳಿದ್ದಾರೆ. ಅಖಿಲೇಶ್ ಹೇಳಿಕೆಗೆ ವಿರೋಧಗಳ ವ್ಯಕ್ತವಾಗಿದೆ. ಸೋಲಿನಿಂದ ಚೇತರಿಸಿಕೊಳ್ಳದ ಅಖಿಲೇಶ್ ಯಾದವ್ ತಮ್ಮ ನೋವನ್ನು ತೋಡಿಕೊಳ್ಳುತ್ತಿದ್ದಾರೆ  ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: ಡ್ಯಾನಿಶ್ ಅನ್ಸಾರಿ: ಯೋಗಿ 2.0 ಸರ್ಕಾರದಲ್ಲಿರುವ ಮುಸ್ಲಿಂ ಸಮುದಾಯದ ಏಕೈಕ ಸಚಿವ

ಯೋಗಿ ಅದಿತ್ಯನಾಥ್ ನೇತೃತ್ವದ ಉತ್ತರ ಪ್ರದೇಶದ 2.0 ಸರ್ಕಾರ ಎಕಾನಾ ಅಟಲ್ ಬಿಹಾರಿ ಕ್ರೀಡಾಂಗಣದಲ್ಲಿ ಯೋಗಿ ಆದಿತ್ಯನಾಥ್ ಸೇರಿ ಮಂತ್ರಿಗಳು ಪ್ರಮಾಣವಚನ ಸ್ವೀಕರಿಸಿದ್ದಾರೆ. 50 ಸಾವಿರಕ್ಕೂ ಹೆಚ್ಚು ಮಂದಿ ಈ ಕಾರ್ಯಕ್ರಮಕದಲ್ಲಿ ಪಾಲ್ಗೊಂಡಿದ್ದರು. ಇನ್ನು ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಸಚಿವೆ ಸ್ಮೃತಿ ಇರಾನಿ, ಕರ್ನಾಟಕ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸೇರಿದಂತೆ ಹಲವು ಗಣ್ಯರು ಪಾಲ್ಗೊಂಡಿದ್ದರು.

2017ರ ಚುನಾವಣೆಗೆ ಹೋಲಿಸಿದರೆ ಈ ಬಾರಿಯ ಚುನಾವಣೆಯಲ್ಲಿ ಅಖಿಲೇಶ್ ಯಾದವ್ ನೇೃತ್ವದ ಸಮಾಜವಾದಿ ಪಾರ್ಟಿ ಉತ್ತಮ ಪ್ರದರ್ಶನ ತೋರಿದೆ. 70ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಸಮಾಜವಾದಿ ಪಾರ್ಟಿ ಗೆಲುವು ಸಾಧಿಸಿದೆ. ಬಹಳ ಯೋಜಿತ ರೀತಿಯಲ್ಲಿ ಚುನಾವಣಾ ಅಖಾಡಕ್ಕೆ ಧುಮುಕಿದ್ದ ಸಮಾಜವಾದಿ ಪಕ್ಷ ಈ ಬಾರಿ ಸಣ್ಣ ಪುಟ್ಟಪಕ್ಷಗಳ ಜತೆ ಮೈತ್ರಿ ಮಾಡಿಕೊಂಡಿತ್ತು.


Stay up to date on all the latest ರಾಷ್ಟ್ರೀಯ news
Poll
BS yediyurappa

ಬಿಜೆಪಿ ಸಂಸದೀಯ ಮಂಡಳಿಗೆ ಬಿ.ಎಸ್. ಯಡಿಯೂರಪ್ಪ ಸೇರ್ಪಡೆಯಿಂದ 2023 ರ ಕರ್ನಾಟಕ ಚುನಾವಣೆಯಲ್ಲಿ ಪಕ್ಷಕ್ಕೆ ನೆರವಾಗುವುದೇ?


Result
ಹೌದು
ಇಲ್ಲ

Comments

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

flipboard facebook twitter whatsapp