
ಸಾಂದರ್ಭಿಕ ಚಿತ್ರ
ಇಡುಕ್ಕಿ: ಕೇರಳದ ಇಡುಕ್ಕಿ ಜಿಲ್ಲೆಯ ಮೂಲಮಟ್ಟಂ ಪ್ರದೇಶದಲ್ಲಿ ಶನಿವಾರ ರಾತ್ರಿ ನಡೆದ ಗುಂಡಿನ ದಾಳಿಯಲ್ಲಿ 32 ವರ್ಷದ ಯುವಕ ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿದ್ದಾರೆ. ಆರೋಪಿ ಕುಡಿದ ಮತ್ತಿನಲ್ಲಿದ್ದ ಎಂದು ಸ್ಥಳೀಯರು ತಿಳಿಸಿದ್ದಾರೆ.
ಇದನ್ನೂ ಓದಿ: ಆಂಧ್ರಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ: ಬಸ್ ಮಗುಚಿ ಬಿದ್ದು 7 ಸಾವು, 45 ಮಂದಿಗೆ ಗಾಯ
ಮೃತಪಟ್ಟ ವ್ಯಕ್ತಿಯನ್ನು ಕೀರಿತೋಡಿನ ಬಸ್ ಚಾಲಕ ಸೋನಾಲ್ ಸಾಬು ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಆತನ ಸ್ನೇಹಿತ ಪ್ರದೀಪ್ ಮತ್ತು ಮೂಲಮಟ್ಟಂನ ಇತರ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತೊಡುಪುಳದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇದನ್ನೂ ಓದಿ: ಬಿಎಂಟಿಸಿ ಬಸ್ ಡಿಕ್ಕಿ ಹೊಡೆದು ಆನೆ ಸಾವು: ಪ್ರಕರಣ ದಾಖಲಿಸಿದ ಅರಣ್ಯ ಇಲಾಖೆ
ಶನಿವಾರ ರಾತ್ರಿ ಹೊಟೇಲ್‌ನಲ್ಲಿ ಮಾತಿಗೆ ಮಾತು ಬೆಳೆದು ವಾಗ್ವಾದ ವಿಕೋಪಕ್ಕೆ ತಿರುಗಿತ್ತು. ಆಗ ಫಿಲಿಪ್ ಮತೀನ್ ಎಂಬ ವ್ಯಕ್ತಿ ನಾಲ್ವರ ಮೇಲೆ ಗುಂಡು ಹಾರಿಸಿದ್ದು, ಓರ್ವ ಮೃತಪಟ್ಟು ಮೂವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿ ಫಿಲಿಪ್ ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಇದನ್ನೂ ಓದಿ: ಕೆಲಸದಿಂದ ತೆಗೆದುಹಾಕಿದ್ದಕ್ಕೆ ದ್ವೇಷ; ಹೆಚ್ ಆರ್ ಕೊಲೆಗೆ ಸ್ಕೆಚ್ ಹಾಕಿದ್ದವರ ಬಂಧನ!