ಕರ್ನಾಟಕದಲ್ಲಿ ಕಬ್ಬಿಣದ ಅದಿರು ರಫ್ತಿನ ಬಗ್ಗೆ ನಿಮ್ಮ ನಿಲುವು ಸ್ಪಷ್ಟಪಡಿಸಿ: ಕೇಂದ್ರಕ್ಕೆ ಸುಪ್ರೀಂ ಸೂಚನೆ
ಕರ್ನಾಟಕದಲ್ಲಿ ಹೊರತೆಗೆಯಲಾದ ಕಬ್ಬಿಣದ ಅದಿರನ್ನು ರಫ್ತು ಮಾಡುವ ಬಗ್ಗೆ ನಿಮ್ಮ ನಿಲುವು ಸ್ಪಷ್ಟಪಡಿಸುವಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಬುಧವಾರ ಸೂಚಿಸಿದೆ.
Published: 30th March 2022 03:38 PM | Last Updated: 30th March 2022 03:38 PM | A+A A-

ಸುಪ್ರೀಂ ಕೋರ್ಟ್
ನವದೆಹಲಿ: ಕರ್ನಾಟಕದಲ್ಲಿ ಹೊರತೆಗೆಯಲಾದ ಕಬ್ಬಿಣದ ಅದಿರನ್ನು ರಫ್ತು ಮಾಡುವ ಬಗ್ಗೆ ನಿಮ್ಮ ನಿಲುವು ಸ್ಪಷ್ಟಪಡಿಸುವಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಬುಧವಾರ ಸೂಚಿಸಿದೆ.
ಮುಖ್ಯ ನ್ಯಾಯಮೂರ್ತಿ ಎನ್ ವಿ ರಮಣ ನೇತೃತ್ವದ ಸುಪ್ರೀಂ ಪೀಠ, ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರಿಗೆ ಈ ವಿಷಯದ ಬಗ್ಗೆ ಮಾಹಿತಿ ಪಡೆದು ಏಪ್ರಿಲ್ 8 ರೊಳಗೆ ಪ್ರತಿಕ್ರಿಯೆ ಸಲ್ಲಿಸುವಂತೆ ಆದೇಶಿಸಿದೆ.
ಇದನ್ನು ಓದಿ: ಕಬ್ಬಿಣದ ಅದಿರಿನ ರಫ್ತು ನಿಷೇಧ ತೆರವಾದರೆ ರಾಜ್ಯದ ಆದಾಯ ಮೂರು ಪಟ್ಟು ಹೆಚ್ಚಳ: ಸಚಿವ ನಿರಾಣಿ
ಸುಪ್ರೀಂ ಕೋರ್ಟ್ ನೇಮಿಸಿದ ಕೇಂದ್ರೀಯ ಸಶಕ್ತ ಸಮಿತಿ ಮತ್ತು ಮೇಲ್ವಿಚಾರಣಾ ಸಮಿತಿಗೆ ಪ್ರಸ್ತುತ ಲಭ್ಯವಿರುವ ಕಬ್ಬಿಣದ ಅದಿರಿನ ಅಂದಾಜು ಪ್ರಮಾಣವನ್ನು ಸೂಚಿಸುವ ಸ್ಥಿತಿಗತಿ ವರದಿ ಸಲ್ಲಿಸುವಂತೆ ಸೂಚಿಸಿದೆ.
“ಹೊರತೆಗೆದ ಕಬ್ಬಿಣವನ್ನು ಹಾಗೆ ಇಡುವುದರಲ್ಲಿ ಯಾವುದೇ ಅರ್ಥವಿಲ್ಲ, ಅದನ್ನು ಬಳಸಬೇಕು, ಮಾರಾಟ ಮಾಡಬೇಕು ಅಥವಾ ಅಲ್ಲಿಂದ ಸಾಗಿಸಬೇಕು. ಮೊದಲು ಸಂಗ್ರಹವಾಗಿರುವ ಅದಿರನ್ನು ತೆರವುಗೊಳಿಸೋಣ ನಂತರ ಏನು ಮಾಡಬೇಕೆಂದು ನೋಡೋಣ. ಅದರಿಂದ ರಾಜ್ಯ ಸರ್ಕಾರ ಮತ್ತು ಅಭಿವೃದ್ಧಿ ನಿಧಿಗೆ ಸ್ವಲ್ಪ ಹಣ ಸಿಗಬಹುದು" ಎಂದು ನ್ಯಾಯಮೂರ್ತಿಗಳಾದ ಕೃಷ್ಣ ಮುರಾರಿ ಮತ್ತು ಹಿಮಾ ಕೊಹ್ಲಿ ಅವರನ್ನೊಳಗೊಂಡ ಪೀಠ ಹೇಳಿದೆ.
ಈ ಹಿಂದೆ ಕರ್ನಾಟಕದಲ್ಲಿ ಕಬ್ಬಿಣದ ಅದಿರು ರಫ್ತು ಮೇಲಿನ ನಿಷೇಧವನ್ನು ತೆಗೆದುಹಾಕಲು ಸುಪ್ರೀಂ ಕೋರ್ಟ್ ನಿರಾಕರಿಸಿತ್ತು.