
ಕಾಂಗ್ರೆಸ್ ನಾಯಕರ ಪ್ರತಿಭಟನೆ
ನವದೆಹಲಿ: ಇಂಧನ, ಅಡುಗೆ ಅನಿಲ ಬೆಲೆ ಏರಿಕೆ ಖಂಡಿಸಿ ರಾಹುಲ್ ಗಾಂಧಿ ನೇತೃತ್ವದಲ್ಲಿ ದೆಹಲಿಯ ವಿಜಯ್ ಚೌಕ್ ಮುಂದೆ ಕಾಂಗ್ರೆಸ್ ಸಂಸದರು ಗುರುವಾರ ಧರಣಿ ನಡೆಸಿದರು.
ಲೋಕಸಭೆ ಮತ್ತು ರಾಜ್ಯಸಭೆಯ ಕಾಂಗ್ರೆಸ್ ಸದಸ್ಯರು ಭಿತ್ತಿಪತ್ರಗಳನ್ನು ಹಿಡಿದು ಕೇಂದ್ರ ಸರ್ಕಾರ ವಿರುದ್ಧ ಘೋಷಣೆಗಳನ್ನು ಕೂಗಿದರು. ಲೋಕಸಭೆಯ ಪ್ರತಿಪಕ್ಷ ನಾಯಕ ಅಧೀರ್ ರಂಜನ್ ಚೌಧರಿ ಮತ್ತು ರಾಜ್ಯಸಭೆಯ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಹಲವು ನಾಯಕರು ಭಾಗವಹಿಸಿದ್ದಾರೆ.
महँगाई को हराना है, देश को जिताना है ! #महँगाई_मुक्त_भारत pic.twitter.com/VcnUP5zlKx
— All India Mahila Congress (@MahilaCongress) March 31, 2022
ಇಂಧನ, ಅಡುಗೆ ಅನಿಲ ಸೇರಿದಂತೆ ಹಣದುಬ್ಬರ ವಿರುದ್ಧ ಕಾಂಗ್ರೆಸ್ ವಾರದವರೆಗೆ ದೇಶಾದ್ಯಂತ ಪ್ರತಿಭಟನೆ ಕೈಗೊಳ್ಳಲಿದೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಇಂದು ಪ್ರತಿ ಲೀಟರ್‌ಗೆ 80 ಪೈಸೆಗಳಷ್ಟು ಏರಿಕೆಯಾಗಿದ್ದು, ಕಳೆದ 10 ದಿನಗಳಲ್ಲಿ ಪ್ರತಿ ಲೀಟರ್‌ಗೆ 6.40 ರೂಪಾಯಿಯಷ್ಟು ಹೆಚ್ಚಳವಾಗಿದೆ. ಸ್ಥಳೀಯ ತೆರಿಗೆಯನ್ನು ಅವಲಂಬಿಸಿ ಇಂಧನ ಬೆಲೆ ರಾಜ್ಯದಿಂದ ರಾಜ್ಯಕ್ಕೆ ವ್ಯತ್ಯಾಸವಾಗುತ್ತದೆ.
ನಾಲ್ಕೂವರೆ ತಿಂಗಳ ನಂತರ ಮಾರ್ಚ್ 22ರ ನಂತರ ಸತತ 9 ಬಾರಿ ಇಂಧನ ಬೆಲೆ ಹೆಚ್ಚಳವಾಗುತ್ತಿದೆ.
ಈ ಸಂದರ್ಭದಲ್ಲಿ ಮಾತನಾಡಿದ ಸಂಸದ ರಾಹುಲ್ ಗಾಂಧಿ, ಇಂದು ಕಾಂಗ್ರೆಸ್ ಪಕ್ಷ ದೆಹಲಿ ಸೇರಿದಂತೆ ಪ್ರತಿ ರಾಜ್ಯಗಳಲ್ಲಿ ಪ್ರತಿ ಜಿಲ್ಲೆ, ಬ್ಲಾಕ್ ಮಟ್ಟದಲ್ಲಿ ಕೂಡ ಅಡುಗೆ ಅನಿಲ, ಇಂಧನ ಬೆಲೆ ಏರಿಕೆ ಖಂಡಿಸಿ ಧರಣಿ ನಡೆಸುತ್ತಿದೆ. ಸರ್ಕಾರ ಬೆಲೆ ಏರಿಕೆಗೆ ಕಡಿವಾಣ ಹಾಕುವವರೆಗೆ ಕಾಂಗ್ರೆಸ್ ಪಕ್ಷದ ನಾಯಕರ ಧರಣಿ ಮುಂದುವರಿಯಲಿದೆ, ಈ ಬಗ್ಗೆ ಸಂಸತ್ತಿನಲ್ಲಿ ಸೋಮವಾರ ಪ್ರಸ್ತಾಪಿಸುತ್ತೇನೆ ಎಂದು ಹೇಳಿದರು.
भाजपा सरकार ने पिछले 10 दिन में 9 बार पेट्रोल-डीज़ल के दाम बढ़ाए गए हैं। इसकी चोट सीधे तौर पर गरीब, मिडिल क्लास पर पड़ती है।
— All India Mahila Congress (@MahilaCongress) March 31, 2022
हमारी माँग है कि भाजपा सरकार बढ़ रहे दामों और महंगाई को नियंत्रित करे: श्री @RahulGandhi #महँगाई_मुक्त_भारत pic.twitter.com/pt4wK3VKgl
ಕಾಂಗ್ರೆಸ್ ನಾಯಕರು ಸಿಲೆಂಡರ್, ದ್ವಿಚಕ್ರ ವಾಹನ ಮುಂದಿಟ್ಟು ಅದಕ್ಕೆ ಹೂವಿನ ಹಾರ ಹಾಕಿ ಸಹ ಧರಣಿ ನಡೆಸಿ ಗಮನ ಸೆಳೆದರು.