ಪ್ರಧಾನಿ ಮೋದಿ ಸಲಹೆಗಾರರಾಗಿ ಪೆಟ್ರೋಲಿಯಂ ಮಾಜಿ ಕಾರ್ಯದರ್ಶಿ ತರುಣ್ ಕಪೂರ್ ನೇಮಕ
ಪೆಟ್ರೋಲಿಯಂ ಮಾಜಿ ಕಾರ್ಯದರ್ಶಿ ತರುಣ್ ಕಪೂರ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ಅವರ ಸಲಹೆಗಾರರನ್ನಾಗಿ ನೇಮಿಸಲಾಗಿದೆ ಎಂದು ಸಿಬ್ಬಂದಿ ಸಚಿವಾಲಯ ಸೋಮವಾರ ಹೊರಡಿಸಿದ ಆದೇಶದಲ್ಲಿ ತಿಳಿಸಿದೆ.
Published: 02nd May 2022 03:34 PM | Last Updated: 02nd May 2022 05:12 PM | A+A A-

ತರುಣ್ ಕಪೂರ್
ನವದೆಹಲಿ: ಪೆಟ್ರೋಲಿಯಂ ಮಾಜಿ ಕಾರ್ಯದರ್ಶಿ ತರುಣ್ ಕಪೂರ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ಅವರ ಸಲಹೆಗಾರರನ್ನಾಗಿ ನೇಮಿಸಲಾಗಿದೆ ಎಂದು ಸಿಬ್ಬಂದಿ ಸಚಿವಾಲಯ ಸೋಮವಾರ ಹೊರಡಿಸಿದ ಆದೇಶದಲ್ಲಿ ತಿಳಿಸಿದೆ.
ಹಿಮಾಚಲ ಪ್ರದೇಶ ಕೇಡರ್ನ 1987-ಬ್ಯಾಚ್ನ IAS ಅಧಿಕಾರಿ ತರುಣ್ ಕಪೂರ್ ಅವರು ನವೆಂಬರ್ 30, 2021 ರಂದು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯದ ಕಾರ್ಯದರ್ಶಿಯಾಗಿ ಅಧಿಕಾರ ವಹಿಸಿಕೊಂಡಿದ್ದರು.
ಸಂಪುಟ ನೇಮಕಾತಿ ಸಮಿತಿಯು ತರುಣ್ ಕಪೂರ್ ಅವರನ್ನು ಪ್ರಧಾನ ಮಂತ್ರಿಗಳ ಸಲಹೆಗಾರರಾಗಿ, ಪ್ರಧಾನ ಮಂತ್ರಿ ಕಚೇರಿಯಲ್ಲಿ(PMO), ಭಾರತ ಸರ್ಕಾರದ ಕಾರ್ಯದರ್ಶಿಯ ಶ್ರೇಣಿಯಲ್ಲಿ ಎರಡು ವರ್ಷಗಳ ಅವಧಿಗೆ ನೇಮಕ ಮಾಡಲು ಅನುಮೋದಿಸಿದೆ ಎಂದು ಸಿಬ್ಬಂದಿ ಸಚಿವಾಲಯ ಹೇಳಿದೆ.
ಇದನ್ನು ಓದಿ: 3 ದೇಶಗಳ ಯುರೋಪ್ ಪ್ರವಾಸ: ಬರ್ಲಿನ್ ಗೆ ಪ್ರಧಾನಿ ಮೋದಿ ಆಗಮನ; ಅದ್ಧೂರಿ ಸ್ವಾಗತ; ದೇಶಭಕ್ತಿಗೀತೆ ಹಾಡಿ ರಂಜಿಸಿದ ಬಾಲಕ!
ಇನ್ನೂ ಹಿರಿಯ ಅಧಿಕಾರಿಗಳಾದ ಹರಿರಂಜನ್ ರಾವ್ ಮತ್ತು ಅತಿಶ್ ಚಂದ್ರ ಅವರನ್ನು ಪ್ರಧಾನಿ ಕಚೇರಿಯಲ್ಲಿ ಹೆಚ್ಚುವರಿ ಕಾರ್ಯದರ್ಶಿಗಳಾಗಿ ನೇಮಿಸಲಾಗಿದೆ.