ದೇಶದಲ್ಲಿ ಮತ್ತೆ ಕೊರೋನಾ ಹೆಚ್ಚಳ: ಒಂದೇ ದಿನ 26 ಸಾವು, 3,157 ಹೊಸ ಪ್ರಕರಣ ಪತ್ತೆ!
ದೇಶದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ 3,157 ಹೊಸ ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 4,30,82,345ಕ್ಕೆ ಏರಿಕೆಯಾಗಿದೆ. 26 ಸೋಂಕಿತರು ಸಾವನ್ನಪ್ಪಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.
Published: 02nd May 2022 10:52 AM | Last Updated: 02nd May 2022 11:00 AM | A+A A-

ಕೋವಿಡ್-19 ಸಾಂದರ್ಭಿಕ ಚಿತ್ರ
ನವದೆಹಲಿ: ದೇಶದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ 3,157 ಹೊಸ ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 4,30,82,345ಕ್ಕೆ ಏರಿಕೆಯಾಗಿದೆ. 26 ಸೋಂಕಿತರು ಸಾವನ್ನಪ್ಪಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.
ದೇಶದಲ್ಲಿ ಸದ್ಯ 19,500 ಸಕ್ರಿಯ ಪ್ರಕರಣಗಳಿದ್ದು, ಕಳೆದ 24 ಗಂಟೆಗಳಲ್ಲಿ ಸೋಂಕಿನಿಂದ 2,723 ಮಂದಿ ಚೇತರಿಸಿಕೊಂಡಿದ್ದಾರೆ. ಒಟ್ಟು ಗುಣಮುಖರಾದವರ ಸಂಖ್ಯೆ 4,25,38,976ಕ್ಕೆ ಏರಿಕೆಯಾಗಿದೆ. ಕೋವಿಡ್-19 ಚೇತರಿಕೆ ಪ್ರಮಾಣ ಶೇ. 98.74 ರಷ್ಟಿದೆ ಎಂದು ಸಚಿವಾಲಯ ಹೇಳಿದೆ.
ದೈನಂದಿನ ಪಾಸಿಟಿವಿಟಿ ಪ್ರಮಾಣ ಶೇ. 1.07 ರಷ್ಟಿದ್ದು, ಸಾಪ್ತಾಹಿಕ ಪಾಸಿಟಿವಿ ಪ್ರಮಾಣ ಶೇ. 0.70 ರಷ್ಟಿದೆ. ಇಲ್ಲಿಯವರೆಗೂ ದೇಶದಲ್ಲಿ 189.23 ಕೋಟಿಗೂ ಹೆಚ್ಚು ಡೋಸ್ ಲಸಿಕೆ ನೀಡಲಾಗಿದೆ.
India records 3,157 new COVID19 cases today; Active caseload at 19,500 pic.twitter.com/CWfFIq2KJY
— ANI (@ANI) May 2, 2022