ಮಹಾ ಸಚಿವ ನವಾಬ್ ಮಲಿಕ್ ಆಸ್ಪತ್ರೆಗೆ ದಾಖಲು, ಆರೋಗ್ಯ ಸ್ಥಿತಿ ಗಂಭೀರ
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿಯಿಂದ ಬಂಧನಕ್ಕೊಳಗಾಗಿರುವ ಮಹಾರಾಷ್ಟ್ರ ಸಚಿವ ನವಾಬ್ ಮಲಿಕ್ ಅವರ ಆರೋಗ್ಯ ಹದಗೆಟ್ಟಿದ್ದು, ಅವರ ಸ್ಥಿತಿ ಗಂಭೀರವಾಗಿದೆ ಎಂದು ಮಲಿಕ್ ಅವರ ವಕೀಲರು ಹೇಳಿದ್ದಾರೆ.
Published: 02nd May 2022 08:45 PM | Last Updated: 03rd May 2022 01:10 PM | A+A A-

ಮಹಾರಾಷ್ಟ್ರ ಸಚಿವ ನವಾಬ್ ಮಲಿಕ್
ಮುಂಬೈ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿಯಿಂದ ಬಂಧನಕ್ಕೊಳಗಾಗಿರುವ ಮಹಾರಾಷ್ಟ್ರ ಸಚಿವ ನವಾಬ್ ಮಲಿಕ್ ಅವರ ಆರೋಗ್ಯ ಹದಗೆಟ್ಟಿದ್ದು, ಅವರ ಸ್ಥಿತಿ ಗಂಭೀರವಾಗಿದೆ ಎಂದು ಮಲಿಕ್ ಅವರ ವಕೀಲರು ಹೇಳಿದ್ದಾರೆ.
ನವಾಬ್ ಮಲಿಕ್ ಜ್ವರ ಮತ್ತು ಅತಿಸಾರದಿಂದ ಅನಾರೋಗ್ಯಕ್ಕೆ ಒಳಗಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಸಚಿವರ ಪರ ವಕೀಲರು ಇಲ್ಲಿನ ವಿಶೇಷ ನ್ಯಾಯಾಲಯಕ್ಕೆ ತಿಳಿಸಿದ್ದಾರೆ.
ಕಳೆದ ವಾರ, ಇಲ್ಲಿನ ಆರ್ಥರ್ ರೋಡ್ ಜೈಲಿನಲ್ಲಿದ್ದ ನವಾಬ್ ಮಲಿಕ್ (62)ಅವರು ವೈದ್ಯಕೀಯ ಕಾರಣಕ್ಕಾಗಿ ಮಧ್ಯಂತರ ಜಾಮೀನು ನೀಡುವಂತೆ ವಿಶೇಷ ನ್ಯಾಯಾಲಯಕ್ಕೆ ಮನವಿ ಮಾಡಿದ್ದರು.
ನವಾಬ್ ಮಲಿಕ್ ಅವರ ಕುಟುಂಬದವರು ಊಟ ನೀಡಲು ಹೋದಾಗ ಅನಾರೋಗ್ಯದ ಕಾರಣ ಜೆಜೆ ಆಸ್ಪತ್ರೆಗೆ ದಾಖಲಾಗಿರುವ ವಿಚಾರ ತಿಳಿದು ಬಂದಿದೆ ಎಂದು ವಕೀಲ ಕುಶಾಲ್ ಮೋರ್ ನ್ಯಾಯಾಲಯಕ್ಕೆ ತಿಳಿಸಿದ್ದಾರೆ.
ಇದನ್ನು ಓದಿ: ಅಕ್ರಮ ಹಣ ವರ್ಗಾವಣೆ ಪ್ರಕರಣ: ನವಾಬ್ ಮಲಿಕ್ ವಿರುದ್ಧ 5,000 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದ ಇಡಿ
ಕಳೆದ ಮೂರು ದಿನಗಳಿಂದ ಮಲಿಕ್ ಅನಾರೋಗ್ಯದಿಂದ ಬಳಲುತ್ತಿದ್ದಾರೆ ಮತ್ತು ಅವರ ಸ್ಥಿತಿ ಹದಗೆಟ್ಟಿದೆ ಮತ್ತು ಗಂಭೀರವಾಗಿದೆ ಎಂದು ಮೊರ್ ನ್ಯಾಯಾಲಯಕ್ಕೆ ಮಾಹಿತಿ ನೀಡಿದ್ದಾರೆ.
ಜೆಜೆ ಆಸ್ಪತ್ರೆಯಲ್ಲಿ ಹಲವಾರು ವೈದ್ಯಕೀಯ ಪರೀಕ್ಷಾ ಸೌಲಭ್ಯಗಳು ಲಭ್ಯವಿಲ್ಲ ಎಂದು ಹೇಳಿದ ವಕೀಲರು ಮಲಿಕ್ ಅವರನ್ನು ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಬೇಕೆಂದು ಮನವಿ ಮಾಡಿದ್ದಾರೆ.
ಮಲಿಕ್ ಅವರ ಆರೋಗ್ಯ ಸ್ಥಿತಿಯ ಬಗ್ಗೆ ಜೈಲು ಅಧಿಕಾರಿಗಳು ಕೋರ್ಟ್ ಗೆ ಮಾಹಿತಿ ನೀಡದಿರುವ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ ವಿಶೇಷ ನ್ಯಾಯಾಧೀಶ ಆರ್ ಎನ್ ರೋಕಡೆ ಅವರು, ವರದಿ ನೀಡುವಂತೆ ಆಸ್ಪತ್ರೆ ಸೂಚಿಸಿ ಪ್ರಕರಣದ ವಿಚಾರಣೆಯನ್ನು ಮೇ 5ಕ್ಕೆ ಮುಂದೂಡಿದ್ದಾರೆ.