ಸೊಪೋರ್'ನಲ್ಲಿ ಸೇನಾಪಡೆ ಭರ್ಜರಿ ಕಾರ್ಯಾಚರಣೆ: 3 ಎಲ್ಇಟಿ ಉಗ್ರರ ಬಂಧನ
ಉತ್ತರ ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಸೊಪೋರ್ನ ಹೈಗಾಮ್ ಪ್ರದೇಶದಲ್ಲಿ ಭಾರತೀಯ ಸೇನಾಪಡೆ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಲಷ್ಕರ್-ಇ-ತೊಯ್ಬಾ ಉಗ್ರ ಸಂಘಟನೆಯ ಮೂವರು ಉಗ್ರರನ್ನು ಬಂಧಿಸಿದ್ದಾರೆಂದು ಜಮ್ಮು ಮತ್ತು ಕಾಶ್ಮೀರದ ಪೊಲೀಸರು ಮಾಹಿತಿ ನೀಡಿದ್ದಾರೆ.
Published: 03rd May 2022 07:38 AM | Last Updated: 03rd May 2022 01:12 PM | A+A A-

ಸಂಗ್ರಹ ಚಿತ್ರ
ಬಾರಾಮುಲ್ಲಾ: ಉತ್ತರ ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಸೊಪೋರ್ನ ಹೈಗಾಮ್ ಪ್ರದೇಶದಲ್ಲಿ ಭಾರತೀಯ ಸೇನಾಪಡೆ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಲಷ್ಕರ್-ಇ-ತೊಯ್ಬಾ ಉಗ್ರ ಸಂಘಟನೆಯ ಮೂವರು ಉಗ್ರರನ್ನು ಬಂಧಿಸಿದ್ದಾರೆಂದು ಜಮ್ಮು ಮತ್ತು ಕಾಶ್ಮೀರದ ಪೊಲೀಸರು ಮಾಹಿತಿ ನೀಡಿದ್ದಾರೆ.
ಇತ್ತೀಚಿಗೆ ಸ್ಥಳೀಯರಲ್ಲದ ಜನರ ಹತ್ಯೆಗಳು ಮತ್ತು ವಿವಿಧೆಡೆ ನಡೆದ ಗ್ರೆನೇಡ್ ದಾಳಿಗಳ ಬಗ್ಗೆ ಪೊಲೀಸರು ತನಿಖೆ ನಡೆಸಿದ್ದು, ಇದರಂತೆ ವಿವಿಧ ಸ್ಥಳಗಳಲ್ಲಿ ನಡೆಸಿದ ಕಾರ್ಯಾಚರಣೆ ವೇಳೆ ಮೂವರು ಉಗ್ರರನ್ನು ಬಂಧನಕ್ಕೊಳಪಡಿಸಲಾಗಿದೆ ಎಂದು ತಿಳಿದುಬಂದಿದೆ.
ಇದನ್ನೂ ಓದಿ: ಪುಲ್ವಾಮಾದಲ್ಲಿ ಎನ್ಕೌಂಟರ್: ಇಬ್ಬರು ಉಗ್ರರ ಹೊಡೆದುರುಳಿಸಿದ ಸೇನಾಪಡೆ
ಸತತ ವಿಚಾರಣೆಯ ನಂತರ ಈ ಮೂವರು ಉಗ್ರರು ಲಷ್ಕರ್-ಎ-ತೊಯ್ಬಾದ ಸಂಘಟನೆಗೆ ಸೇರಿದವರು ಎಂದು ತಿಳಿದುಬಂದಿದೆ. ಬಂಧಿತರಿಂದ ಮೂರು ಚೀನಾ ನಿರ್ಮಿತ ಪಿಸ್ತೂಲ್ಗಳು, ಮದ್ದುಗುಂಡುಗಳು ಹಾಗೂ ಇತರ ಅಪರಾಧ ಸಾಮಗ್ರಿಗಳನ್ನು ವಶಪಡಿಸಿಕೊಳ್ಳಲಾಗಿದೆ ಪೊಲೀಸರು ತಿಳಿಸಿದ್ದಾರೆ.