ಹನುಮಾನ್ ಚಾಲೀಸಾ ವಿವಾದ: ರಾಣಾ ದಂಪತಿಗೆ ಮುಂಬೈ ನ್ಯಾಯಾಲಯ ಷರತ್ತುಬದ್ಧ ಜಾಮೀನು
ಹನುಮಾನ್ ಚಾಲೀಸಾ ವಿವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪಕ್ಷೇತರ ಸಂಸದೆ ನವನೀತ್ ರಾಣಾ ಹಾಗೂ ಅವರ ಪತಿ ಹಾಗೂ ಪಕ್ಷೇತರ ಶಾಸಕ ರವಿ ರಾಣಾ ಅವರಿಗೆ ಮುಂಬೈನ ವಿಶೇಷ ನ್ಯಾಯಾಲಯ ಬುಧವಾರ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
Published: 04th May 2022 12:21 PM | Last Updated: 04th May 2022 01:48 PM | A+A A-

ಸಂಗ್ರಹ ಚಿತ್ರ
ಮುಂಬೈ: ಹನುಮಾನ್ ಚಾಲೀಸಾ ವಿವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪಕ್ಷೇತರ ಸಂಸದೆ ನವನೀತ್ ರಾಣಾ ಹಾಗೂ ಅವರ ಪತಿ ಹಾಗೂ ಪಕ್ಷೇತರ ಶಾಸಕ ರವಿ ರಾಣಾ ಅವರಿಗೆ ಮುಂಬೈನ ವಿಶೇಷ ನ್ಯಾಯಾಲಯ ಬುಧವಾರ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ನವ್ ನೀತಿ ರಾಣಾ ಹಾಗೂ ರವಿ ರಾಣಾ ಅವರನ್ನು ಷರತ್ತಿನ ಆಧಾರದ ಮೇಲೆ ಬಿಡುಗಡೆಗೊಳಿಸಲು ಅವಕಾಶ ನೀಡಿರುವುದಾಗಿ ನ್ಯಾಯಾಲಯ ಹೇಳಿದೆ.
ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ನಿವಾಸವಾದ ಬಾಂದ್ರಾದಲ್ಲಿನ (ಪೂರ್ವ) ಮಾತೋಶ್ರೀ ಹೊರಗೆ ಹನುಮಾನ್ ಚಾಲೀಸಾವನ್ನು ಪಠಿಸುವ ಉದ್ದೇಶವನ್ನು ಘೋಷಿಸಿದ್ದಕ್ಕಾಗಿ ರಾಣಾ ದಂಪತಿ ವಿರುದ್ಧ ಖಾರ್ ಪೊಲೀಸ್ ಠಾಣೆ ಅಧಿಕಾರಿಗಳು ಎಪ್ರಿಲ್ 23 ರಂದು ದೇಶದ್ರೋಹ ಹಾಗೂ ಸೌಹಾರ್ದದ ಉಲ್ಲಂಘನೆಯ ಆರೋಪದಲ್ಲಿ ಪ್ರಕರಣ ದಾಖಲಿಸಿ ಬಂಧನಕ್ಕೊಳಪಡಿಸಿದ್ದರು.
ಇದನ್ನೂ ಓದಿ: ಧ್ವನಿವರ್ಧಕ ವಿವಾದ: ಮುಂಬೈ ಮಸೀದಿ ಬಳಿ ಹನುಮಾನ್ ಚಾಲೀಸಾ ನುಡಿಸಿದ ಎಂಎನ್ಎಸ್ ಕಾರ್ಯಕರ್ತರು; ಭದ್ರತೆ ಹೆಚ್ಚಳ
ನಂತರ ಭಾನುವಾರ ಮುಂಬಯಿ ಕೋರ್ಟ್ ಸಂಸದೆ ನವ್ ನೀತ್ ರಾಣಾ ಹಾಗೂ ರವಿ ರಾಣಾಗೆ ಮೇ 6ರವರೆಗೆ ನ್ಯಾಯಾಂಗ ಬಂಧನ ವಿಧಿಸಿತ್ತು. ಮತ್ತೊಂದೆಡೆ ಜಾಮೀನು ನೀಡುವಂತೆ ಕೋರಿ ರಾಣಾ ದಂಪತಿ ವಿಶೇಷ ಕೋರ್ಟ್ ಮೆಟ್ಟಿಲೇರಿದ್ದರು.
ರಾಣಾ ದಂಪತಿ ತನಿಖೆಗೆ ಸಹಕರಿಸಬೇಕು. ಒಂದು ವೇಳೆ ಪೊಲೀಸರು ವಿಚಾರಣೆಗೆ ಕರೆದಾಗ ಇಬ್ಬರು ಹಾಜರಾಗಬೇಕು ಎಂದು ವಿಶೇಷ ಕೋರ್ಟ್ ಷರತ್ತು ವಿಧಿಸಿ ಜಾಮೀನು ಮಂಜೂರು ಮಾಡಿರುವುದಾಗಿ ವರದಿ ತಿಳಿಸಿದೆ.