ಮಸೀದಿಗಳಲ್ಲಿ ಧ್ವನಿವರ್ಧಕಗಳ ಅಳವಡಿಕೆ ಮೂಲಭೂತ ಹಕ್ಕಲ್ಲ: ಅಲಹಾಬಾದ್ ಹೈಕೋರ್ಟ್
ಮಸೀದಿಗಳಲ್ಲಿ ಧ್ವನಿವರ್ಧಕಗಳನ್ನು ಅಳವಡಿಕೆ ಮೂಲಭೂತ ಹಕ್ಕಲ್ಲ ಎಂದು ಹೇಳಿರುವ ಅಲಹಾಬಾದ್ ಹೈಕೋರ್ಟ್, ಮಸೀದಿಗಳಲ್ಲಿ ಧ್ವನಿವರ್ಧಕಗಳ ಅಳವಡಿಕೆಗೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ವಜಾಗೊಳಿಸಿದೆ.
Published: 06th May 2022 01:27 PM | Last Updated: 06th May 2022 01:30 PM | A+A A-

ಮಸೀದಿ ಸಾಂದರ್ಭಿಕ ಚಿತ್ರ
ಅಲಹಾಬಾದ್: ಮಸೀದಿಗಳಲ್ಲಿ ಧ್ವನಿವರ್ಧಕಗಳನ್ನು ಅಳವಡಿಕೆ ಮೂಲಭೂತ ಹಕ್ಕಲ್ಲ ಎಂದು ಹೇಳಿರುವ ಅಲಹಾಬಾದ್ ಹೈಕೋರ್ಟ್, ಮಸೀದಿಗಳಲ್ಲಿ ಧ್ವನಿವರ್ಧಕಗಳ ಅಳವಡಿಕೆಗೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ವಜಾಗೊಳಿಸಿದೆ.
ನ್ಯಾಯಮೂರ್ತಿಗಳಾದ ವಿವೇಕ್ ಕುಮಾರ್ ಬಿರ್ಲಾ ಮತ್ತು ವಿಕಾಸ್ ಅವರಿದ್ದ ವಿಭಾಗೀಯ ಪೀಠ ಈ ಆದೇಶ ನೀಡಿದ್ದು, ಮಸೀದಿಗಳಲ್ಲಿ ಧ್ವನಿವರ್ಧಕ ಬಳಸುವುದು ಸಾಂವಿಧಾನಿಕ ಹಕ್ಕು ಅಲ್ಲ ಎಂದು ಕಾನೂನು ಹೇಳುತ್ತದೆ ಎಂದಿದ್ದಾರೆ.
ಡಿಸೆಂಬರ್ 3, 2021 ರಂದು ಬದೌನ್ ಜಿಲ್ಲೆಯ ಬಿಸೌಲಿ ಉಪ ವಿಭಾಗೀಯ ಮ್ಯಾಜಿಸ್ಟ್ರೇಟ್ ಹೊರಡಿಸಿದ ಆದೇಶವನ್ನು ಪ್ರಶ್ನಿಸಿ, ಇರ್ಫಾನ್ ಎಂಬ ವ್ಯಕ್ತಿ ಧೋರನ್ ಪುರ ಗ್ರಾಮದ ಮಸೀದಿಯಲ್ಲಿ ಧ್ವನಿವರ್ಧಕ ಸ್ಥಾಪಿಸಲು ಅನುಮತಿ ಕೋರಿ ಅರ್ಜಿ ಸಲ್ಲಿಸಿದ್ದರು.
ಎಸ್ ಡಿಎಂ ಆದೇಶವು ಕಾನೂನು ಬಾಹಿರ ಮತ್ತು ಇದು ಮೂಲಭೂತ ಹಕ್ಕುಗಳು, ಕಾನೂನನ್ನು ಉಲ್ಲಂಘಿಸುತ್ತದೆ ಎಂದು ಅರ್ಜಿದಾರರು ತಮ್ಮ ಮನವಿಯಲ್ಲಿ ಹೇಳಿದರು.