ಕೋವಿಡ್ ಸಾವು ಕುರಿತು ವಿಶ್ವ ಆರೋಗ್ಯ ಸಂಸ್ಥೆ ವರದಿ: ಪ್ರಧಾನಿ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ
ದೇಶದಲ್ಲಿ ಕೋವಿಡ್-19 ಸಾಂಕ್ರಾಮಿಕದಿಂದ 4.7 ಮಿಲಿಯನ್ ಜನರು ಸಾವನ್ನಪ್ಪಿದ್ದಾರೆ ಎಂಬ ವಿಶ್ವ ಆರೋಗ್ಯ ಸಂಸ್ಥೆ ವರದಿ ಹಿನ್ನೆಲೆಯಲ್ಲಿ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಶುಕ್ರವಾರ ವಾಗ್ದಾಳಿ ನಡೆಸಿದ್ದಾರೆ.
Published: 06th May 2022 12:42 PM | Last Updated: 06th May 2022 12:49 PM | A+A A-

ಪ್ರಧಾನಿ ಮೋದಿ, ರಾಹುಲ್ ಗಾಂಧಿ
ನವದೆಹಲಿ: ದೇಶದಲ್ಲಿ ಕೋವಿಡ್-19 ಸಾಂಕ್ರಾಮಿಕದಿಂದ 4.7 ಮಿಲಿಯನ್ ಜನರು ಸಾವನ್ನಪ್ಪಿದ್ದಾರೆ ಎಂಬ ವಿಶ್ವ ಆರೋಗ್ಯ ಸಂಸ್ಥೆ ವರದಿ ಹಿನ್ನೆಲೆಯಲ್ಲಿ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಶುಕ್ರವಾರ ವಾಗ್ದಾಳಿ ನಡೆಸಿದ್ದಾರೆ.
ಈ ಸಂಬಂಧ ಅವರಿಂದು ಟ್ವೀಟ್ ಮಾಡಿದ್ದು, ಕೋವಿಡ್ ಸಾಂಕ್ರಾಮಿಕದಿಂದ 47 ಲಕ್ಷ ಜನರು ಸಾವನ್ನಪ್ಪಿದ್ದಾರೆ. ಸರ್ಕಾರ ಹೇಳಿದಂತೆ 4.8 ಲಕ್ಷ ಜನರು ಸತ್ತಿಲ್ಲ. ವಿಜ್ಞಾನ ಸುಳ್ಳು ಹೇಳಲ್ಲ, ಮೋದಿ ಹೇಳುತ್ತಾರೆ ಎಂದಿದ್ದಾರೆ.
ಇದನ್ನೂ ಓದಿ: ಕೋವಿಡ್ 19 ಸಾವಿನಲ್ಲಿ ಸುಳ್ಳು ಲೆಕ್ಕ ಹೇಳಿ ಜಗತ್ತಿನ ಕಣ್ಣಿಗೆ ಮಣ್ಣೆರಚಿದ್ದ ಕೇಂದ್ರ ಸರ್ಕಾರ- ದಿನೇಶ್ ಗುಂಡೂರಾವ್
ಕೋವಿಡ್-19 ಸಾಂಕ್ರಾಮಿಕದಿಂದ ಮೃತಪಟ್ಟವರ ಕುಟುಂಬ ಸದಸ್ಯರಿಗೆ ನಾಲ್ಕು ಲಕ್ಷ ರೂಪಾಯಿ ಪರಿಹಾರವನ್ನು ಕಡ್ಡಾಯಪಡಿಸಬೇಕೆಂದು ರಾಹುಲ್ ಗಾಂಧಿ ಒತ್ತಾಯಿಸಿದ್ದಾರೆ.
47 lakh Indians died due to the Covid pandemic. NOT 4.8 lakh as claimed by the Govt.
— Rahul Gandhi (@RahulGandhi) May 6, 2022
Science doesn't LIE. Modi does.
Respect families who've lost loved ones. Support them with the mandated ₹4 lakh compensation. pic.twitter.com/p9y1VdVFsA
ಕೋವಿಡ್-19 ಸಾಂಕ್ರಾಮಿಕದಿಂದ ಭಾರತದಲ್ಲಿ 4.7 ಮಿಲಿಯನ್ ಜನರು ಸಾವನ್ನಪ್ಪಿರುವುದಾಗಿ ವಿಶ್ವ ಆರೋಗ್ಯ ಸಂಸ್ಥೆ ಗುರುವಾರ ಹೇಳಿತ್ತು. ಇದು ಸರ್ಕಾರ ಅಧಿಕೃತವಾಗಿ ಘೋಷಿಸಿದ್ದಕ್ಕಿಂತಲೂ ಬಹುತೇಕ 10 ಪಟ್ಟು ಹೆಚ್ಚಾಗಿದೆ.