
ಟಾಟಾ ಸ್ಟೀಲ್ ಘಟಕದಲ್ಲಿ ಬೆಂಕಿ
ಜಮ್‌ಶೆಡ್‌ಪುರ: ಟಾಟಾ ಉಕ್ಕು ಕಾರ್ಖಾನೆಯಲ್ಲಿ ಭೀಕರ ಸ್ಫೋಟ ಸಂಭವಿಸಿದ್ದು, ಬಳಿಕ ಭಾರಿ ಅಗ್ನಿ ಅವಘಡ ಸಂಭವಿಸಿದೆ.
#WATCH Jharkhand | A fire broke out in a Coke plant of Tata Steel Factory in Jamshedpur due to an alleged blast in a battery. Five fire tenders at the spot, 2 labourers reportedly injured. pic.twitter.com/Y7cBhVSe1A
— ANI (@ANI) May 7, 2022
ಜಾರ್ಖಂಡ್ ನ ಜಮ್‌ಶೆಡ್‌ಪುರದಲ್ಲಿರುವ ಟಾಟಾ ಉಕ್ಕು ಕಾರ್ಖಾನೆಯ ಘಟಕದಲ್ಲಿ ಸ್ಫೋಟ ಸಂಭವಿಸಿದ್ದು, ಸ್ಫೋಟದ ತೀವ್ರತೆಗೆ ಘಟಕದ ಒಂದು ಭಾಗದಲ್ಲಿ ಸಂಪೂರ್ಣ ಅಗ್ನಿ ಆವರಿಸಿದೆ. ಈ ಕುರಿತು ಜಾರ್ಖಂಡ್ ಸಿಎಂ ಹೇಮಂತ್ ಸೊರೇನ್ ಅವರು ಟ್ವೀಟ್ ಮಾಡಿದ್ದು, ಜಿಲ್ಲಾಡಳಿತವು ಟಾಟಾ ಉಕ್ಕು ಘಟಕದ ಆಡಳಿತದ ಜತೆಗೂಡಿ ತೆರವು ಕಾರ್ಯಾಚರಣೆ ಮತ್ತು ಗಾಯಾಳುಗಳ ತ್ವರಿತ ಚಿಕಿತ್ಸೆಗೆ ಕ್ರಮ ಕೈಗೊಳ್ಳುತ್ತಿದೆ’ ಎಂದು ಅವರು ಹೇಳಿದ್ದಾರೆ.
Blast and fire at Tata Steel factory | Jharkhand CM Hemant Soren tweets that Jamshedpur district administration is working in coordination with Tata Steel management for the immediate medical treatment of the injured. pic.twitter.com/AUS2nffQyH
— ANI (@ANI) May 7, 2022
‘ಬ್ಯಾಟರಿ ಸ್ಫೋಟದಿಂದಾಗಿ ಘಟಕದಲ್ಲಿ ಬೆಂಕಿ ಹೊತ್ತಿಕೊಂಡಿದೆ. ಪರಿಣಾಮವಾಗಿ ಘಟಕದಲ್ಲಿ ಬೆಂಕಿ ಆವರಿಸಿದ್ದು, ಅಗ್ನಿಶಾಮಕ ದಳದ ಐದು ವಾಹನಗಳು ಸ್ಥಳಕ್ಕೆ ಧಾವಿಸಿವೆ. ಇಬ್ಬರು ಕಾರ್ಮಿಕರಿಗೆ ಗಾಯಗಳಾಗೊವೆ. ಕೋಕ್ ಪ್ಲಾಂಟ್‌ನ ಬ್ಯಾಟರಿ ವಿಭಾಗದಲ್ಲಿ ಸ್ಫೋಟ ಸಂಭವಿಸಿದೆ. ತಕ್ಷಣ ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿ ಪರಿಸ್ಥಿತಿಯನ್ನು ಹತೋಟಿಗೆ ತರಲಾಯಿತು ಎಂದು ತಿಳಿದುಬಂದಿದೆ.
2 ಗುತ್ತಿಗೆ ನೌಕರರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ನೌಕರನೊಬ್ಬ ಎದೆನೋವಿನ ಬಗ್ಗೆ ದೂರು ನೀಡಿದ್ದು, ಅವರ ಸ್ಥಿತಿ ಸ್ಥಿರವಾಗಿದೆ. ಕಾರಣವನ್ನು ನಿರ್ಣಯಿಸಲು ತನಿಖೆ ನಡೆಯುತ್ತಿದೆ ಎಂದು ಟಾಟಾ ಸ್ಟೀಲ್ ಸಂಸ್ಥೆ ಮಾಹಿತಿ ನೀಡಿದೆ.