ವಿಶೇಷ ಚೇತನ ಮಗು ವಿಮಾನ ಹತ್ತದಂತೆ ನಿರ್ಬಂಧ: ಇಂಡಿಗೋ ವಿರುದ್ಧ ಕ್ರಮ- ಎನ್ ಸಿಪಿಸಿಆರ್
ರಾಂಚಿ ವಿಮಾನ ನಿಲ್ದಾಣದಲ್ಲಿ ಗಾಬರಿಯ ಸ್ಥಿತಿಯಲ್ಲಿದ್ದ ವಿಶೇಷ ಚೇತನ ಮಗುವನ್ನು ವಿಮಾನ ಹತ್ತುವುದನ್ನು ಇಂಡಿಗೋ ನಿರ್ಬಂಧಿಸಿದೆ. ಈ ಘಟನೆ ಕುರಿತು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿರುವ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಸೂಕ್ತ ಕ್ರಮ ಕೈಗೊಳ್ಳುವುದಾಗಿ ಹೇಳಿದೆ.
Published: 09th May 2022 12:21 PM | Last Updated: 09th May 2022 01:33 PM | A+A A-

ಇಂಡಿಗೋ ವಿಮಾನದ ಸಾಂದರ್ಭಿಕ ಚಿತ್ರ
ನವದೆಹಲಿ: ರಾಂಚಿ ವಿಮಾನ ನಿಲ್ದಾಣದಲ್ಲಿ ಗಾಬರಿಯ ಸ್ಥಿತಿಯಲ್ಲಿದ್ದ ವಿಶೇಷ ಚೇತನ ಮಗುವನ್ನು ವಿಮಾನ ಹತ್ತುವುದನ್ನು ಇಂಡಿಗೋ ನಿರ್ಬಂಧಿಸಿದೆ. ಈ ಘಟನೆ ಕುರಿತು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿರುವ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಸೂಕ್ತ ಕ್ರಮ ಕೈಗೊಳ್ಳುವುದಾಗಿ ಹೇಳಿದೆ.
ಇದನ್ನೂ ಓದಿ:ಗಾಬರಿಗೊಂಡಿದ್ದ ವಿಶೇಷ ಚೇತನ ಮಗುವನ್ನು ವಿಮಾನ ಹತ್ತದಂತೆ ಇಂಡಿಗೋ ನಿರ್ಬಂಧ: ತನಿಖೆ ಆರಂಭಿಸಿದ ಡಿಜಿಸಿಎ
ವಿಮಾನಯಾನ ನಿಯಂತ್ರಕ ಡಿಜಿಸಿಎ ತನಿಖೆಯನ್ನು ಪ್ರಾರಂಭಿಸಿದ್ದು ವರದಿಯನ್ನು ಸಲ್ಲಿಸಲು ವಿಮಾನಯಾನ ಸಂಸ್ಥೆಯನ್ನು ಕೇಳಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ರಾಂಚಿ ವಿಮಾನ ನಿಲ್ದಾಣದಲ್ಲಿ ಗಾಬರಿಯ ಸ್ಥಿತಿಯಲ್ಲಿದ್ದ ವಿಶೇಷ ಚೇತನ ಮಗುವನ್ನು ವಿಮಾನ ಹತ್ತುವುದನ್ನು ಇಂಡಿಗೋ ಶನಿವಾರ ನಿರ್ಬಂಧಿಸಿತ್ತು. ಈ ಘಟನೆ ನಂತರ ವಿಮಾನಯಾನ ನಿಯಂತ್ರಕ ಡಿಜಿಸಿಎ ತನಿಖೆಯನ್ನು ಪ್ರಾರಂಭಿಸಿದ್ದು ವರದಿಯನ್ನು ಸಲ್ಲಿಸಲು ವಿಮಾನಯಾನ ಸಂಸ್ಥೆಯನ್ನು ಕೇಳಿದೆ.
ಈ ಸಂಬಂಧ ಟ್ವೀಟ್ ಮಾಡಿರುವ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಮುಖ್ಯಸ್ಥೆ ಪ್ರಿಯಾಂಕ್ ಕಾನೊಂಗ್ ರಾಂಚಿ ವಿಮಾನ ನಿಲ್ದಾಣದಲ್ಲಿ ಇಂಡಿಗೋ ವಿಮಾನದ ಸಿಬ್ಬಂದಿ ವಿಶೇಷ ಚೇತನ ಮಗುವಿನೊಂದಿಗೆ ಅನುಚಿತವಾಗಿ ವರ್ತಿಸಿರುವುದು ತಿಳಿದುಬಂದಿದೆ. ಸೂಕ್ತ ಕ್ರಮಕ್ಕಾಗಿ ಗಮನ ಹರಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಈ ಮಧ್ಯೆ ವಿಮಾನಯಾನ ಸಚಿವ ಜ್ಯೋತಿರಾಧಿತ್ಯ ಸಿಂಧಿಯಾ ಕೂಡಾ ಘಟನೆಗೆ ಅಸಮಾಧಾನ ವ್ಯಕ್ತಪಡಿಸಿದ್ದು, ಮನುಷ್ಯರನ್ನು ಈ ರೀತಿಯಲ್ಲಿ ನಡೆಸಿಕೊಳ್ಳಬಾರದು. ಘಟನೆ ಬಗ್ಗೆ ತಾವೇ ತನಿಖೆ ನಡೆಸಿ, ಸೂಕ್ತ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.