ಮುಂಬೈ: ದಾವೂದ್ ಇಬ್ರಾಹಿಂ ಆಪ್ತರಿಗೆ ಸೇರಿದ ಹಲವೆಡೆ ಎನ್ಐಎ ದಾಳಿ, ಪರಿಶೀಲನೆ
ಭೂಗತ ಪಾತಕಿ ದಾವೂದ್ ಇಬ್ರಾಹಿಂ ಆಪ್ತರಿಗೆ ಸೇರಿದ ಹಲವು ಪ್ರದೇಶಗಳಲ್ಲಿ ರಾಷ್ಟ್ರೀಯ ತನಿಖಾ ದಳ ಸೋಮವಾರ ದಾಳಿ ನಡೆಸಿದ್ದು, ಪರಿಶೀಲನೆ ನಡೆಸುತ್ತಿದೆ ಎಂದು ತಿಳಿದುಬಂದಿದೆ.
Published: 09th May 2022 10:41 AM | Last Updated: 09th May 2022 01:32 PM | A+A A-

ಸಂಗ್ರಹ ಚಿತ್ರ
ಮುಂಬೈ: ಭೂಗತ ಪಾತಕಿ ದಾವೂದ್ ಇಬ್ರಾಹಿಂ ಆಪ್ತರಿಗೆ ಸೇರಿದ ಹಲವು ಪ್ರದೇಶಗಳಲ್ಲಿ ರಾಷ್ಟ್ರೀಯ ತನಿಖಾ ದಳ ಸೋಮವಾರ ದಾಳಿ ನಡೆಸಿದ್ದು, ಪರಿಶೀಲನೆ ನಡೆಸುತ್ತಿದೆ ಎಂದು ತಿಳಿದುಬಂದಿದೆ.
ಮುಂಬೈಯ 12ಕ್ಕೂ ಹೆಚ್ಚು ಪ್ರದೇಶಗಳಲ್ಲಿ ದಾವೂದ್ ಇಬ್ರಾಹಿಂ ಸಹಚರರು ಮತ್ತು ಹವಾಲಾ ದಂಧೆ ನಡೆಸುವವರ ಮೇಲೆ ಎನ್ಐಎ ದಾಳಿ ನಡೆಸಿದೆ ಎಂದು ವರದಿಗಳು ತಿಳಿಸಿವೆ.
ಇದನ್ನೂ ಓದಿ: ಭಯೋತ್ಪಾದನೆ: ಜಮ್ಮು-ಕಾಶ್ಮೀರ, ರಾಜಸ್ಥಾನ ಸೇರಿ 8 ಕಡೆ ಎನ್ಐಎ ದಾಳಿ
ಕಳೆದ ಫೆಬ್ರುವರಿ ತಿಂಗಳಿನಲ್ಲಿ ದಾವೂದ್ನೊಂದಿಗೆ ಸಂಬಂಧ ಹೊಂದಿದ್ದ ಹವಾಲಾ ಆಪರೇಟರ್ಗಳು ಮತ್ತು ಡ್ರಗ್ ಪೆಡ್ಲರ್ಗಳ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು. ಇದರಂತೆ ಇಂದು ದಾಳಿ ನಡೆಸಲಾಗಿದೆ ಎಂದು ತಿಳಿದುಬಂದಿದೆ.
ನಾಗಪದ, ಗೋರ್ಗಾಂವ್, ಬೊರಿವಲಿ, ಸಂತಾಕ್ರೂಜ್, ಮುಂಬ್ರಾ, ಭೆಂದಿ ಬಜಾರ್ ಹಾಗೂ ಇತರೆಡೆಗಳಲ್ಲಿ ದಾಳಿ ನಡೆದಿದೆ ಎಂದು ತಿಳಿದುಬಂದಿದೆ.