
ಶಾಲಾ ಮಕ್ಕಳು ದಾಖಲಾಗಿರುವ ಆಸ್ಪತ್ರೆ ಚಿತ್ರ
ರಾಯಗಡ: ಒಡಿಶಾದ ರಾಯಗಡ ಜಿಲ್ಲೆಯ ಎರಡು ಹಾಸ್ಟೆಲ್ಗಳಲ್ಲಿದ್ದ ಸುಮಾರು 64 ಶಾಲಾ ಮಕ್ಕಳಿಗೆ ಭಾನುವಾರ ಕೋವಿಡ್-19 ಪಾಸಿಟಿವ್ ದೃಢಪಟ್ಟಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಯಾದೃಚಿಕವಾಗಿ ಪರೀಕ್ಷೆ ನಡೆಸಿದ ನಂತರ ವಿದ್ಯಾರ್ಥಿಗಳಲ್ಲಿ ಕೋವಿಡ್ ಸೋಂಕು ಪತ್ತೆಯಾಗಿದೆ. ಆದರೆ, ಅವರಲ್ಲಿ ಯಾರಿಗೂ ಕೋವಿಡ್-19 ಲಕ್ಷಣ ಕಂಡುಬಂದಿಲ್ಲ. ಅವರೆಲ್ಲರನ್ನೂ ಐಸೋಲೇಷನಲ್ಲಿದ್ದಾರೆ ಎಂದು ಅವರು ಹೇಳಿದ್ದಾರೆ. ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದ್ದು, ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ ಎಂದು ರಾಯಗಡ ಜಿಲ್ಲಾಧಾರಿ ಸರೋಜ್ ಕುಮಾರ್ ಮಿಶ್ರಾ ತಿಳಿಸಿದ್ದಾರೆ.
ಕೊರೋನಾ ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳ ಕಂಡುಬಂದಿಲ್ಲ. ಆದರೆ, ಯಾದೃಚಿಕ ಪರೀಕ್ಷೆ ವೇಳೆಯಲ್ಲಿ ಎರಡು ವಸತಿ ನಿಲಯಗಳಲ್ಲಿ ಕೆಲ ಪಾಸಿಟಿವ್ ಕೇಸ್ ಗಳು ವರದಿಯಾಗಿವೆ. 64 ವಿದ್ಯಾರ್ಥಿಗಳಲ್ಲಿ ಸೋಂಕು ಪತ್ತೆಯಾಗಿದೆ. ಆದಾಗ್ಯೂ, ಅವರ ಸ್ಯಾಂಪಲ್ ಗಳನ್ನು ಸಂಗ್ರಹಿಸಿ ಮರು ತಪಾಸಣೆಗಾಗಿ ರಾಜ್ಯದ ಕೇಂದ್ರ ಕಚೇರಿಗಳಿಗೆ ಕಳುಹಿಸಲಾಗಿದೆ. ಹಾಸ್ಟೆಲ್ ನಲ್ಲಿ ವೈದ್ಯಕೀಯ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಇದೇ ರೀತಿಯಲ್ಲಿ ಜಿಲ್ಲೆಯ ಮತ್ತೊಂದು ಹಾಸ್ಟೆಲ್ ನಲ್ಲಿ 22 ವಿದ್ಯಾರ್ಥಿಗಳಿಗೆ ಕೋವಿಡ್-19 ಸೋಂಕು ಕಂಡುಬಂದಿದೆ. ಸೋಂಕು ತಗುಲಿರುವ ಮಕ್ಕಳು ಪರಿಪೂರ್ಣರಾಗಿದ್ದಾರೆ ಎಂದು ರಾಜ್ಯ ಸಾರ್ವಜನಿಕ ಆರೋಗ್ಯ ಇಲಾಖೆ ಅಧಿಕಾರಿ ತಿಳಿಸಿದ್ದಾರೆ.