ಹಿಮಾಚಲ ಪ್ರದೇಶ: ಬಿಜೆಪಿ ಕಾರ್ಯಕ್ರಮದಲ್ಲಿ ರಾಹುಲ್ ದ್ರಾವಿಡ್ ಭಾಗಿ
ಹಿಮಾಚಲ ಪ್ರದೇಶದ ಧರ್ಮಶಾಲಾದಲ್ಲಿ ಇದೇ ತಿಂಗಳ 12 ರಿಂದ 15ರವರೆಗೆ ನಡೆಯಲಿರುವ ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಕಾರ್ಯಕಾರಿಣಿ ಸಮಿತಿ ಅಧಿವೇಶನದಲ್ಲಿ ಟೀಂ ಇಂಡಿಯಾ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಭಾಗವಹಿಸಲಿದ್ದಾರೆ.
Published: 10th May 2022 11:28 AM | Last Updated: 10th May 2022 11:34 AM | A+A A-

ರಾಹುಲ್ ದ್ರಾವಿಡ್, ಜೆಪಿ ನಡ್ಡಾ ಅವರ ಚಿತ್ರ
ಧರ್ಮಶಾಲಾ: ಹಿಮಾಚಲ ಪ್ರದೇಶದ ಧರ್ಮಶಾಲಾದಲ್ಲಿ ಇದೇ ತಿಂಗಳ 12 ರಿಂದ 15ರವರೆಗೆ ನಡೆಯಲಿರುವ ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಕಾರ್ಯಕಾರಿಣಿ ಸಮಿತಿ ಅಧಿವೇಶನದಲ್ಲಿ ಟೀಂ ಇಂಡಿಯಾ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಭಾಗವಹಿಸಲಿದ್ದಾರೆ.
ಈ ಕಾರ್ಯಕ್ರಮದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಮತ್ತಿತರ ಪಕ್ಷದ ಪದಾಧಿಕಾರಿಗಳು ಮತ್ತು ಕೇಂದ್ರ ಸಚಿವರು ಪಾಲ್ಗೊಳ್ಳಲಿದ್ದಾರೆ ಎಂದು ಧರ್ಮಶಾಲಾ ಬಿಜೆಪಿ ಶಾಸಕ ವಿಶಾಲ್ ನೆಹ್ರಿಯಾ ತಿಳಿಸಿದ್ದಾರೆ.
ಮೂರು ದಿನಗಳ ಸೆಷನ್ಸ್ ನಲ್ಲಿ ಮುಖ್ಯಮಂತ್ರಿ ಜೈರಾಮ್ ಠಾಕೂರ್ ಪಾಲ್ಗೊಳ್ಳಲಿದ್ದು, ದೇಶಾದ್ಯಂತ 139 ಪ್ರತಿನಿಧಿಗಳು ಉಪಸ್ಥಿತರಿರುವರು ಎಂದು ಅವರು ಮಾಹಿತಿ ನೀಡಿದ್ದಾರೆ.
ಭಾರತದ ಕ್ರಿಕೆಟಿಗ ರಾಹುಲ್ ದ್ರಾವಿಡ್ ಕೂಡ ಇದರಲ್ಲಿ ಭಾಗವಹಿಸಲಿದ್ದಾರೆ. ಅವರ ಉಪಸ್ಥಿತಿಯಿಂದ ರಾಜಕೀಯದಲ್ಲಿ ಮಾತ್ರವಲ್ಲದೆ ಇತರ ಕ್ಷೇತ್ರಗಳಲ್ಲಿಯೂ ಯುವಜನತೆ ಮುಂದುವರಿಯಬಹುದು ಎಂಬ ಸಂದೇಶವನ್ನು ನೀಡಲಾಗುವುದು ಎಂದು ನೆಹ್ರಿಯಾ ಹೇಳಿದರು.
ಹಿಮಾಚಲ ಪ್ರದೇಶ ಅಸೆಂಬ್ಲಿ ಚುನಾವಣೆ ಸನ್ನಿಹದಲ್ಲಿರುವಂತೆಯೇ, ಧರ್ಮಶಾಲಾದಲ್ಲಿ ನಡೆಯುತ್ತಿರುವ ಕಾರ್ಯಕ್ರಮದಲ್ಲಿ ರಾಹುಲ್ ದ್ರಾವಿಡ್ ಪಾಲ್ಗೊಳ್ಳುತ್ತಿರುವುದು ತೀವ್ರ ಕುತೂಹಲ ಮೂಡಿಸಿದೆ.