ಅಕ್ರಮ ಹಣ ವರ್ಗಾವಣೆ ಪ್ರಕರಣ: ಬಂಧಿತ ಐಎಎಸ್ ಅಧಿಕಾರಿ ಪೂಜಾ ಸಿಂಘಾಲ್ ಅಮಾನತು
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ(ಇಡಿ)ಯಿಂದ ಬಂಧನಕ್ಕೊಳಗಾಗಿರುವ ಜಾರ್ಖಂಡ್ ಗಣಿ ಕಾರ್ಯದರ್ಶಿ ಪೂಜಾ ಸಿಂಘಾಲ್ ಅವರನ್ನು ಜಾರ್ಖಂಡ್ ಸರ್ಕಾರ ಗುರುವಾರ ಅಮಾನತುಗೊಳಿಸಿದೆ...
Published: 12th May 2022 05:11 PM | Last Updated: 12th May 2022 05:11 PM | A+A A-

ಪೂಜಾ ಸಿಂಘಾಲ್
ರಾಂಚಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ(ಇಡಿ)ಯಿಂದ ಬಂಧನಕ್ಕೊಳಗಾಗಿರುವ ಜಾರ್ಖಂಡ್ ಗಣಿ ಕಾರ್ಯದರ್ಶಿ ಪೂಜಾ ಸಿಂಘಾಲ್ ಅವರನ್ನು ಜಾರ್ಖಂಡ್ ಸರ್ಕಾರ ಗುರುವಾರ ಅಮಾನತುಗೊಳಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಕೇಂದ್ರ ತನಿಖಾ ಸಂಸ್ಥೆಯು ಮಂಗಳವಾರ ಮತ್ತು ಬುಧವಾರ ಸತತ ಎರಡು ದಿನಗಳ ವಿಚಾರಣೆ ನಂತರ ಐಎಎಸ್ ಅಧಿಕಾರಿ ಪೂಜಾ ಸಿಂಘಾಲ್ ಅವರನ್ನು ಪಿಎಂಎಲ್ಎ ಸೆಕ್ಷನ್ ಅಡಿಯಲ್ಲಿ ಬಂಧಿಸಿದ್ದು, ಹೆಚ್ಚಿನ ವಿಚಾರಣೆಗಾಗಿ ಐದು ದಿನಗಳ ಕಾಲ ವಶಕ್ಕೆ ಪಡೆದಿದೆ.
ಇದನ್ನು ಓದಿ: ಅಕ್ರಮ ಹಣ ವರ್ಗಾವಣೆ: ಐಎಎಸ್ ಅಧಿಕಾರಿ ಪೂಜಾ ಸಿಂಘಾಲ್ ಬಂಧನ
"ರಾಜ್ಯ ಸರ್ಕಾರವು ಅಖಿಲ ಭಾರತ ಸೇವೆಗಳ(ಶಿಸ್ತು ಮತ್ತು ಮೇಲ್ಮನವಿ ನಿಯಮಗಳು, 1969)ಅಡಿಯಲ್ಲಿ ತಕ್ಷಣವೇ ಜಾರಿಗೆ ಬರುವಂತೆ ಪೂಜಾ ಸಿಂಘಾಲ್ ಅವರನ್ನು ಅಮಾನತುಗೊಳಿಸಿದೆ" ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಇದನ್ನು ಓದಿ: ಇಡಿ ದಾಳಿ ವೇಳೆ 19.31 ಕೋಟಿ ರೂ. ನಗದು ಪತ್ತೆ; ಐಎಎಸ್ ಅಧಿಕಾರಿ ಪೂಜಾ ಸಿಂಘಾಲ್ ಗೆ 'ಇಡಿ' ಡ್ರಿಲ್!!
ಇನ್ನೂ ಐಎಎಸ್ ಅಧಿಕಾರಿ ಬಂಧನದ ಕುರಿತು ಪ್ರತಿಕ್ರಿಯಿಸಿದ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರು, ರಾಜ್ಯ ಸರ್ಕಾರವು "ಈ ವಿಷಯದಲ್ಲಿ ತೆಗೆದುಕೊಳ್ಳಬೇಕಾದ ಕಾನೂನು ಕ್ರಮವನ್ನು ತೆಗೆದುಕೊಳ್ಳಲಿದೆ" ಎಂದು ಹೇಳಿದ್ದಾರೆ.