ಕೇಂದ್ರ ಮುಖ್ಯ ಚುನಾವಣಾ ಆಯುಕ್ತರಾಗಿ ರಾಜೀವ್ ಕುಮಾರ್ ನೇಮಕ
ಭಾರತದ ಮುಖ್ಯ ಚುನಾವಣಾ ಆಯುಕ್ತರಾಗಿ ರಾಜೀವ್ ಕುಮಾರ್ ನೇಮಕಗೊಂಡಿದ್ದಾರೆ. ಕೇಂದ್ರ ಮುಖ್ಯ ಚುನಾವಣಾ ಆಯುಕ್ತರಾಗಿ, ಅತಿ ಹಿರಿಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರು ಮೇ 15ರಂದು ಅಧಿಕಾರ ವಹಿಸಿಕೊಳ್ಳಲಿದ್ದಾರೆ.
Published: 12th May 2022 01:38 PM | Last Updated: 12th May 2022 01:38 PM | A+A A-

ಹಿರಿಯ ಅಧಿಕಾರಿ ರವಿ ಕುಮಾರ್
ನವದೆಹಲಿ: ಭಾರತದ ಮುಖ್ಯ ಚುನಾವಣಾ ಆಯುಕ್ತರಾಗಿ ರಾಜೀವ್ ಕುಮಾರ್ ನೇಮಕಗೊಂಡಿದ್ದಾರೆ. ಕೇಂದ್ರ ಮುಖ್ಯ ಚುನಾವಣಾ ಆಯುಕ್ತರಾಗಿ, ಅತಿ ಹಿರಿಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರು ಮೇ 15ರಂದು ಅಧಿಕಾರ ವಹಿಸಿಕೊಳ್ಳಲಿದ್ದಾರೆ.
ಈಗಿನ ಮುಖ್ಯ ಚುನಾವಣಾ ಆಯುಕ್ತ ಸುಶಿಲ್ ಚಂದ್ರ 14ರಂದು ಹುದ್ದೆಯಿಂದ ನಿರ್ಗಮಿಸಲಿದ್ದಾರೆ. ಕಾನೂನು ಸಚಿವಾಲಯವು ಹೊರಡಿಸಿದ ಮೇ 12ರ ಅಧಿಸೂಚನೆಯ ಪ್ರಕಾರ ಸಂವಿಧಾನದ 324ನೇ ವಿಧಿಯ ಷರತ್ತು (2) ರ ಅನುಸಾರವಾಗಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರು ನೇಮಕಾತಿಯನ್ನು ಮಾಡಿದ್ದಾರೆ. ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವ ಕಿರಣ್ ರಿಜಿಜು ಅವರು ಇಂದು ಟ್ವಿಟರ್ ಪೋಸ್ಟ್‌ನಲ್ಲಿ ಈ ಘೋಷಣೆ ಮಾಡಿದ್ದಾರೆ.
Rajiv Kumar has been appointed as the Chief Election Commissioner with effect from 15th May. pic.twitter.com/csUlIZwQib
— ANI (@ANI) May 12, 2022