ದೆಹಲಿ ಭಾರೀ ಅಗ್ನಿ ದುರಂತ: ಹೊತ್ತಿ ಉರಿದ ಮೂರು ಅಂತಸ್ಥಿನ ಕಟ್ಟಡ, 27 ಮಂದಿ ಸಜೀವ ದಹನ!
ಪಶ್ಚಿಮ ದೆಹಲಿಯ ಮುಂಡ್ಕಾ ಮೆಟ್ರೋ ನಿಲ್ದಾಣದ ಸಮೀಪವಿರುವ ಕಟ್ಟಡದಲ್ಲಿ ಇಂದು ಭಾರೀ ಅಗ್ನಿ ಅವಘಡ ಸಂಭವಿಸಿದ್ದು ರಾಷ್ಟ್ರಪತಿ ರಾಮನಾಥ ಕೋವಿಂದ್ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದಾರೆ.
Published: 13th May 2022 08:45 PM | Last Updated: 14th May 2022 12:59 AM | A+A A-

ಅಗ್ನಿ ಅವಘಡದ ದೃಶ್ಯ
ನವದೆಹಲಿ: ಪಶ್ಚಿಮ ದೆಹಲಿಯ ಮುಂಡ್ಕಾ ಮೆಟ್ರೋ ನಿಲ್ದಾಣದ ಸಮೀಪವಿರುವ ಕಟ್ಟಡದಲ್ಲಿ ಇಂದು ಭಾರೀ ಅಗ್ನಿ ಅವಘಡ ಸಂಭವಿಸಿದೆ.
ಸಂಜೆ 4.40ರ ವೇಳೆಗೆ ಬೆಂಕಿ ಹೊತ್ತಿಕೊಂಡ ಬಗ್ಗೆ ಮಾಹಿತಿ ಲಭಿಸಿದ್ದು, 30 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿವೆ ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದೆ. ಇಲ್ಲಿಯವರೆಗೂ 27 ಮಂದಿ ಸಾವನ್ನಪ್ಪಿದ್ದು ಹಲವರಿಗೆ ಗಂಭೀರ ಸುಟ್ಟ ಗಾಯಗಳಾಗಿವೆ.
ಮುಂಡ್ಕಾ ಮೆಟ್ರೋ ನಿಲ್ದಾಣದ ಪಿಲ್ಲರ್ ಸಂಖ್ಯೆ 544ರ ಸಮೀಪವಿರುವ ಮೂರಂತಸ್ಥಿನ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಇನ್ನು ಅಗ್ನಿ ಅವಘಡದಲ್ಲಿ ಕನಿಷ್ಠ 27 ಮಂದಿ ಸಜೀವ ದಹನವಾಗಿದ್ದು ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆ ಇದೆ.
ದೆಹಲಿಯ ವಾಣಿಜ್ಯ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಸಿಸಿಟಿವಿ ಗೋದಾಮಿನಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಹಲವು ಕಾರ್ಮಿಕರು ಕಟ್ಟಡದಿಂದ ಜಿಗಿದು ಪ್ರಾಣ ಉಳಿಸಿಕೊಂಡಿದ್ದಾರೆ.
ಸುಮಾರು 60-70 ಮಂದಿಯನ್ನು ರಕ್ಷಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದು ಇನ್ನು ಹಲವು ಕಟ್ಟಡದೊಳಗೆ ಸಿಲುಕಿಕೊಂಡಿದ್ದಾರೆ ಎಂದು ಅಗ್ನಿಶಾಮಕ ಸಿಬ್ಬಂದಿಗಳು ತಿಳಿಸಿದ್ದಾರೆ.
ಕಂಪನಿಯ ಮಾಲೀಕರಾದ ಹರೀಶ್ ಗೋಯೆಲ್ ಮತ್ತು ವರುಣ್ ಗೋಯೆಲ್ ಅವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕಟ್ಟಡದ ಮಾಲೀಕರನ್ನು ಮೇಲಿನ ಮಹಡಿಯಲ್ಲಿ ವಾಸಿಸುತ್ತಿದ್ದ ಮನೀಶ್ ಲಾಕ್ರಾ ಎಂದು ಗುರುತಿಸಲಾಗಿದ್ದು ಅವರ ವಿರುದ್ಧ ಎಫ್‌ಐಆರ್ ದಾಖಲಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ದೆಹಲಿಯ ಮುಂಡ್ಕಾ ಮೆಟ್ರೋ ನಿಲ್ದಾಣದ ಬಳಿಯ ಕಟ್ಟಡದಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಿಂದ ಆತಂಕವಾಗಿದೆ. ಇದೊಂದು ದುರದೃಷ್ಟಕರ ಘಟನೆಯಾಗಿದ್ದು ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸುತ್ತಿದ್ದು, ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.
Distressed by the tragic fire accident at a building near Mundka Metro Station in Delhi. My condolences to the bereaved families. I wish for speedy recovery of the injured.
— President of India (@rashtrapatibhvn) May 13, 2022
ದೆಹಲಿಯಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಿಂದ ಪ್ರಾಣಹಾನಿಯಾಗಿರುವುದು ಅತೀವ ದುಃಖ ತಂದಿದೆ. ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸುತ್ತಿದ್ದು, ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ.
Extremely saddened by the loss of lives due to a tragic fire in Delhi. My thoughts are with the bereaved families. I wish the injured a speedy recovery.
— Narendra Modi (@narendramodi) May 13, 2022