ಉದಯಪುರ: ಮೋದಿ ಮಾಧ್ಯಮಗಳ ಮುಂದೆ ಬರದಿರುವುದು ಅರ್ಥವಾಗುತ್ತಿಲ್ಲ- ಖರ್ಗೆ
ಪ್ರಧಾನ ಮಂತ್ರಿ ನರೇಂದ್ರ ಮೋದಿ ಮಾಧ್ಯಮಗಳ ಮುಂದೆ ಬರದಿರುವುದು ಏಕೆ ಎಂಬುದು ಅರ್ಥವಾಗುತ್ತಿಲ್ಲ ಎಂದು ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
Published: 13th May 2022 02:13 PM | Last Updated: 13th May 2022 02:13 PM | A+A A-

ಮಲ್ಲಿಕಾರ್ಜುನ ಖರ್ಗೆ
ಉದಯಪುರ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಮಾಧ್ಯಮಗಳ ಮುಂದೆ ಬರದಿರುವುದು ಏಕೆ ಎಂಬುದು ಅರ್ಥವಾಗುತ್ತಿಲ್ಲ ಎಂದು ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ರಾಜಸ್ಥಾನದ ಉದಯಪುರದಲ್ಲಿಂದು ನವ ಸಂಕಲ್ಪ ಶಿಬಿರ ಆರಂಭಕ್ಕೂ ಮುನ್ನ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, ನಮ್ಮ ಪ್ರಜಾಪ್ರಭುತ್ವ, ಸಂವಿಧಾನವನ್ನು ರಕ್ಷಿಸುವುದು ಬಹಳ ಮುಖ್ಯವಾಗಿದೆ. ಬಿಜೆಪಿಯವರು ಭಿನ್ನಾಭಿಪ್ರಾಯ ಹತ್ತಿಕ್ಕಲು ಪ್ರಯತ್ನಿಸುತ್ತಿದ್ದಾರೆ. ವಾಕ್ ಸ್ವಾತಂತ್ರ್ಯದ ಹಕ್ಕನ್ನು ರಕ್ಷಿಸಬೇಕಾದ ಅಗತ್ಯವಿದೆ ಎಂದರು.
Udaipur, Rajasthan| I don't understand why Modi ji never comes infront of press... It is crucial we save our democracy, constitution... They try to stifle dissent. We need to protect right to free speech: Mallikarjun Kharge, Congress MP in PC during ongoing AICC Chintan Shivir pic.twitter.com/nuhtz3KeAH
— ANI MP/CG/Rajasthan (@ANI_MP_CG_RJ) May 13, 2022
ಒಂದು ಕುಟುಂಬ, ಒಂದೇ ಟಿಕೆಟ್ ನಿಯಮಕ್ಕೆ ಕಾಂಗ್ರೆಸ್ ನಲ್ಲಿ ಸಂಪೂರ್ಣ ಸಹಮತವಿದೆ. ಚಿಂತನ ಶಿಬಿರದ ನಂತರ ಪಕ್ಷದಲ್ಲಿ ದೊಡ್ಡ ಮಟ್ಟದಲ್ಲಿ ಸಾಂಸ್ಥಿಕ ಬದಲಾವಣೆಗಳಾಗಲಿವೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಅಜಯ್ ಮಾಕೆನ್ ಹೇಳಿದರು.
ಇನ್ನೂ ನವ ಸಂಕಲ್ಪ ಶಿಬಿರದಲ್ಲಿ ರಾಜ್ಯ ನಾಯಕರ ಸಮ್ಮಿಲನವಾಗಿದೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ್, ವಿಪಕ್ಷ ನಾಯಕ ಸಿದ್ದರಾಮಯ್ಯ, ಮಾಜಿ ಕೇಂದ್ರ ಸಚಿವರಾದ ಎಂ. ವೀರಪ್ಪ ಮೊಯ್ಲಿ, ಮಾರ್ಗರೇಟ್ ಆಳ್ವ ಸೇರಿದಂತೆ ರಾಜ್ಯದ ಕಾಂಗ್ರೆಸ್ ನಾಯಕರು ಶಿಬಿರದಲ್ಲಿ ಪಾಲ್ಗೊಂಡಿದ್ದಾರೆ.
"ನವ ಸಂಕಲ್ಪ ಶಿಬಿರ"ದಲ್ಲಿ ರಾಜ್ಯ ಕಾಂಗ್ರೆಸ್ ನಾಯಕರ ಆತ್ಮೀಯತೆಯ ಕ್ಷಣಗಳು. ರಾಜಸ್ತಾನದ ಉದಯಪುರದಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಚಿಂತನ ಶಿಬಿರದಲ್ಲಿ ರಾಜ್ಯ ನಾಯಕರ ಸಮ್ಮಿಲನವಾಗಿದೆ. ಈ ಸಂದರ್ಭದಲ್ಲಿ ಮುಖಂಡರು ಪರಸ್ಪರ ಉಭಯ ಕುಶಲೋಪರಿಯಲ್ಲಿ ತೊಡಗಿರುವುದು. pic.twitter.com/1dqoXXzOWk
— Karnataka Congress (@INCKarnataka) May 13, 2022