ಮುಂಡ್ಕಾ ಬೆಂಕಿ ದುರಂತ: ತನಿಖೆಗೆ ಆದೇಶ, ಮೃತರ ಕುಟುಂಬಕ್ಕೆ ರೂ.10 ಲಕ್ಷ ಪರಿಹಾರ ಘೋಷಿಸಿದ ಸಿಎಂ ಕೇಜ್ರಿವಾಲ್
27 ಮಂದಿಯ ಸಜೀವ ದಹನಕ್ಕೆ ಕಾರಣವಾದ ಪಶ್ಚಿಮ ದೆಹಲಿಯ ಮುಂಡ್ಕಾ ಮೆಟ್ರೋ ನಿಲ್ದಾಣದ ಬಳಿಯ ಕಟ್ಟಡ ಬೆಂಕಿ ದುರಂತದ ಸ್ಥಳಕ್ಕೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಶನಿವಾರ ಭೇಟಿ ನೀಡಿದ್ದು, ಪ್ರಕರಣವನ್ನು ತನಿಖೆಗೆ ಆದೇಶಿಸಿದ್ದಾರೆ. ಅಲ್ಲದೆ, ಮೃತರ ಕುಟುಂಬಕ್ಕೆ ತಲಾ ರೂ.10 ಲಕ್ಷ ಪರಿಹಾರ ಘೋಷಿಸಿದ್ದಾರೆ.
Published: 14th May 2022 12:53 PM | Last Updated: 14th May 2022 12:53 PM | A+A A-

ಘಟನಾ ಸ್ಥಳಕ್ಕೆ ಭೇಟಿ ನೀಡಿರುವ ಸಿಎಂ ಕೇಜ್ರಿವಾಲ್
ನವದೆಹಲಿ: 27 ಮಂದಿಯ ಸಜೀವ ದಹನಕ್ಕೆ ಕಾರಣವಾದ ಪಶ್ಚಿಮ ದೆಹಲಿಯ ಮುಂಡ್ಕಾ ಮೆಟ್ರೋ ನಿಲ್ದಾಣದ ಬಳಿಯ ಕಟ್ಟಡ ಬೆಂಕಿ ದುರಂತದ ಸ್ಥಳಕ್ಕೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಶನಿವಾರ ಭೇಟಿ ನೀಡಿದ್ದು, ಪ್ರಕರಣವನ್ನು ತನಿಖೆಗೆ ಆದೇಶಿಸಿದ್ದಾರೆ. ಅಲ್ಲದೆ, ಮೃತರ ಕುಟುಂಬಕ್ಕೆ ತಲಾ ರೂ.10 ಲಕ್ಷ ಪರಿಹಾರ ಘೋಷಿಸಿದ್ದಾರೆ.
ನಾಲ್ಕು ಅಂತಸ್ತಿನ ಕಟ್ಟಡವು ಬೆಂಕಿಗೆ ಆಹುತಿಯಾಗಿ ಕನಿಷ್ಠ 27 ಜನರು ಸಾವನ್ನಪ್ಪಿದರು. ಘಟನೆಯ ಕುರಿತು ಮ್ಯಾಜಿಸ್ಟ್ರೇಟ್ ತನಿಖೆಗೆ ದೆಹಲಿ ಸರ್ಕಾರ ಆದೇಶಿಸಿದೆ ಮತ್ತು ಮೃತರ ಕುಟುಂಬಗಳಿಗೆ 10 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಎಂದು ಕೇಜ್ರಿವಾಲ್ ಹೇಳಿದರು. ಇನ್ನು ಗಾಯಗೊಂಡ 12 ಜನರಿಗೆ ರೂ 50,000 ಪರಿಹಾರವನ್ನು ಘೋಷಿಸಿದರು.
ಮುಂಡ್ಕ ಮೆಟ್ರೋ ನಿಲ್ದಾಣದ ಬಳಿ ಶುಕ್ರವಾರ ಸಂಜೆ ಬೆಂಕಿ ಕಾಣಿಸಿಕೊಂಡ ಸಮಯದಲ್ಲಿ ಕಟ್ಟಡದಲ್ಲಿ 75ಕ್ಕೂ ಹೆಚ್ಚು ಮಂದಿ ಇದ್ದರು. ಮೊದಲ ಮಹಡಿಯಲ್ಲಿರುವ ಕಚೇರಿಯಲ್ಲಿ ಬೆಂಕಿ ಹೊತ್ತಿಕೊಂಡಿದ್ದು, ವೇಗವಾಗಿ ವ್ಯಾಪಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.